Asianet Suvarna News Asianet Suvarna News

ಹಿಂದೆಂದೂ ನೋಡಿರದ ದಿನೇಶ್ ಕಾರ್ತಿಕ್‌ ಜತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ ದೀಪಿಕಾ ಪಲ್ಲಿಕಲ್..!

* 7ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ದಿನೇಶ್ ಕಾರ್ತಿಕ್-ದೀಪಿಕಾ ಪಲ್ಲಿಕಲ್
* ಮುದ್ದಾದ ಫೋಟೋ ಹಂಚಿಕೊಂಡ ಡಿಕೆ ಪತ್ನಿ ದೀಪಿಕಾ ಪಲ್ಲಿಕಲ್
* ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಸಿದ್ದತೆ ನಡೆಸುತ್ತಿರುವ ದಿನೇಶ್ ಕಾರ್ತಿಕ್

Dipika Pallikal shares a romantic Pic with husband Dinesh Karthik on 7th Wedding Anniversary kvn
Author
Bengaluru, First Published Aug 21, 2022, 4:35 PM IST

ಬೆಂಗಳೂರು(ಆ.21): ಟೀಂ ಇಂಡಿಯಾ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಹಾಗೂ ದೀಪಿಕಾ ಪಲ್ಲಿಕಲ್ 7ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ದಿನೇಶ್ ಕಾರ್ತಿಕ್ ಹಾಗೂ ದೀಪಿಕಾ ಪಲ್ಲಿಕಲ್ ಹಿಂದೂ ಹಾಗೂ ಕ್ರಿಶ್ಚಿಯನ್ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇದೀಗ ತಮ್ಮ ದಾಂಪತ್ಯ ಜೀವನಕ್ಕೆ 7 ವರ್ಷ ತುಂಬಿದ ಬೆನ್ನಲ್ಲೇ ತಮ್ಮ ಪತಿ ಜತೆಗಿನ ರೊಮ್ಯಾಂಟಿಕ್ ಫೋಟೋವನ್ನು ದೀಪಿಕಾ ಹಂಚಿಕೊಂಡಿದ್ದಾರೆ.

ಟೀಂ ಇಂಡಿಯಾ ಅನುಭವಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಆಗಸ್ಟ್ 18ರಂದು ತಮ್ಮ ಪತ್ನಿಯ ಜತೆಗಿನ ಮುದ್ದಾದ ಫೋಟೋವನ್ನು ಹಂಚಿಕೊಂಡಿದ್ದರು. ಇದೀಗ ಶನಿವಾರ ದೀಪಿಕಾ ಪಲ್ಲಿಕಲ್ ಕೂಡಾ ರೊಮ್ಯಾಂಟಿಕ್ ಫೋಟೋವನ್ನು ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.  ದಿನೇಶ್ ಕಾರ್ತಿಕ್‌ ಹಾಗೂ ದೀಪಿಕಾ ಪಲ್ಲಿಕಲ್‌ 2015ರ ಆಗಸ್ಟ್ 19ರಂದು ಈ ದಂಪತಿ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಇದಾದ ಮರುದಿನ ಅಂದರೆ ಆಗಸ್ಟ್ 20ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು.

ದಿನೇಶ್‌ ಕಾರ್ತಿಕ್‌ ಸದ್ಯ ಭಾರತ ಟಿ20 ಕ್ರಿಕೆಟ್‌ ತಂಡದಲ್ಲಿ ಬ್ಯುಸಿಯಾಗಿದ್ದಾರೆ. ಕಳೆದೆರಡು ವರ್ಷಗಳಿಂದ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದ ದಿನೇಶ್ ಕಾರ್ತಿಕ್‌, ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಮ್ಯಾಚ್ ಫಿನಿಶರ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸುವ ಮೂಲಕ ಟೀಂ ಇಂಡಿಯಾಗೆ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದರು. ದಿನೇಶ್ ಕಾರ್ತಿಕ್, ಮುಂಬರುವ ಏಷ್ಯಾಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು, ಈ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ತೋರಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.

ICC T20 World Cup 2022: ಸೆಪ್ಟೆಂಬರ್ 15ಕ್ಕೆ ಭಾರತ ಕ್ರಿಕೆಟ್ ತಂಡ ಪ್ರಕಟ..!

ಇನ್ನೊಂದೆಡೆ ಸ್ಕ್ವಾಶ್ ಆಟಗಾರ್ತಿಯಾಗಿರುವ ದೀಪಿಕಾ ಪಲ್ಲಿಕಲ್, ಇತ್ತೀಚೆಗಷ್ಟೇ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಸ್ಕ್ವಾಶ್‌ ಮಿಶ್ರ ಡಬಲ್ಸ್‌ನಲ್ಲಿ ದೀಪಿಕಾ, ಸೌರವ್ ಘೋಷಾಲ್ ಜತೆಗೂಡಿ ಪದಕ ಬೇಟೆಯಾಡುವಲ್ಲಿ ಯಶಸ್ವಿಯಾಗಿದ್ದರು.

Follow Us:
Download App:
  • android
  • ios