ಐಸಿಸಿ ಏಕದಿನ ವಿಶ್ವಕಪ್ ಅಕ್ಟೋಬರ್ 05ರಿಂದ ಆರಂಭಭಾರತ-ಪಾಕ್‌ ಪಂದ್ಯ ವೇಳೆ 10 ಸೆಕೆಂಡ್‌ ಜಾಹೀರಾತಿಗೆ ₹30 ಲಕ್ಷ ನಿಗದಿಭಾರತದ ಇತರ ಪಂದ್ಯಗಳ ವೇಳೆ 10 ಸೆಕೆಂಡ್‌ ಜಾಹೀರಾತಿನ ಸ್ಲಾಟ್‌ಗೆ ಅಂದಾಜು ₹10 ಲಕ್ಷಗೆ ಮಾರಾಟ

ನವದೆಹಲಿ(ಜು.27): ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯದ ಸಂಪೂರ್ಣ ಲಾಭ ಪಡೆಯಲು ಟೂರ್ನಿಯ ಪ್ರಸಾರಕರಾದ ಡಿಸ್ನಿ ಸ್ಟಾರ್‌ ಸಂಸ್ಥೆಯು ಯೋಜನೆ ರೂಪಿಸಿದೆ. ಅಕ್ಟೋಬರ್ 15ರಂದು ನಡೆಯಬೇಕಿರುವ ಪಂದ್ಯದ ವೇಳೆ ಪ್ರತಿ 10 ಸೆಕೆಂಡ್ ಜಾಹೀರಾತಿಗೆ ₹30 ಲಕ್ಷ ನಿಗದಿಪಡಿಸಿದೆ ಎನ್ನಲಾಗಿದೆ. ಭಾರತದ ಇತರ ಪಂದ್ಯಗಳ ವೇಳೆ 10 ಸೆಕೆಂಡ್‌ ಜಾಹೀರಾತಿನ ಸ್ಲಾಟ್‌ಗಳನ್ನು ಅಂದಾಜು ₹10 ಲಕ್ಷಗೆ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಅಕ್ಟೋಬರ್‌ 14ಕ್ಕೆ ಭಾರತ-ಪಾಕ್‌ ವಿಶ್ವಕಪ್‌ ಪಂದ್ಯ?

ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಏಕದಿನ ವಿಶ್ವಕಪ್‌ ಪಂದ್ಯ ಅಕ್ಟೋಬರ್ 15ರ ಬದಲು ಅಕ್ಟೋಬರ್ 14ರಂದು ನಡೆಯುವ ಸಾಧ್ಯತೆ ಇದೆ. ಅಕ್ಟೋಬರ್ 15ರಂದು ಅಹಮದಾಬಾದ್‌ನಲ್ಲಿ ನವರಾತ್ರಿ ಸಂಭ್ರಮಾಚರಣೆ ಆರಂಭಗೊಳ್ಳಲಿರುವ ಕಾರಣ ಭದ್ರತಾ ಸಮಸ್ಯೆ ಎದುರಾಗಬಹುದು ಎಂದು ಭದ್ರತಾ ಏಜೆನ್ಸಿಗಳು ಸಲಹೆ ನೀಡಿವೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಐಸಿಸಿ ಹಾಗೂ ಬಿಸಿಸಿಐ ಶೀಘ್ರದಲ್ಲೇ ಚರ್ಚಿಸಿ ನಿರ್ಧಾರ ಕೈಗೊಳ್ಳಲಿವೆ ಎನ್ನಲಾಗಿದೆ.

ಅಭಿಮಾನಿಗಳಿಗೆ ತೊಂದರೆ!

ಬದ್ಧವೈರಿಗಳ ಕಾದಾಟಕ್ಕೆ ಸಾಕ್ಷಿಯಾಗಲು ಈಗಾಗಲೇ ಸಾವಿರಾರು ಅಭಿಮಾನಿಗಳು ವಿಮಾನ ಟಿಕೆಟ್‌, ಹೋಟೆಲ್‌ ರೂಂಗಳ ಬುಕ್ಕಿಂಗ್‌ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಒಂದು ವೇಳೆ ಪಂದ್ಯ ನಡೆಯುವ ದಿನಾಂಕ ಬದಲಾದರೆ ಅನೇಕರಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.

Deodhar Trophy ಮಯಾಂಕ್‌ ಅಗರ್‌ವಾಲ್ ಆಕರ್ಷಕ ಬ್ಯಾಟಿಂಗ್, ದಕ್ಷಿಣ ವಲಯಕ್ಕೆ ಸತತ ಎರಡನೇ ಜಯ..!

ವಿಶ್ವಕಪ್‌ ಸಿದ್ಧತೆ: ಇಂದು ಸಭೆ ನಡೆಸಲಿರುವ ಬಿಸಿಸಿಐ

ನವದೆಹಲಿ: ಮುಂಬರುವ ಐಸಿಸಿ ಏಕದಿನ ವಿಶ್ವಕಪ್‌ ಸಿದ್ಧತೆಯ ಬಗ್ಗೆ ಅವಲೋಕನ ನಡೆಸಲು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ವಿಶ್ವಕಪ್‌ ಪಂದ್ಯಗಳಿಗೆ ಆತಿಥ್ಯ ವಹಿಸುವ ರಾಜ್ಯ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಗುರುವಾರ ಸಭೆ ನಡೆಸಲಿದ್ದಾರೆ. ವಿಶ್ವಕಪ್‌ ಸಿದ್ಧತೆಗಾಗಿ ಬಿಸಿಸಿಐ ಆತಿಥ್ಯ ವಹಿಸುತ್ತಿರುವ ಪ್ರತಿ ರಾಜ್ಯ ಸಂಸ್ಥೆಗೆ 50 ಕೋಟಿ ರು. ಅನುದಾನ ನೀಡಿದ್ದು, ಕೆಲಸಗಳ ಪ್ರಗತಿ ಬಗ್ಗೆ ಸಭೆಯಲ್ಲಿ ಮಾಹಿತಿ ಹಂಚಿಕೊಳ್ಳುವಂತೆ ಶಾ ಸೂಚಿಸಿದ್ದಾರೆ.

46 ದಿನ, 48 ಪಂದ್ಯ: 46 ದಿನಗಳ ಕಾಲ ನಡೆಯಲಿರುವ ಟೂರ್ನಿಯಲ್ಲಿ 10 ತಂಡಗಳು ಪಾಲ್ಗೊಳ್ಳುತ್ತಿದ್ದು, ಫೈನಲ್‌ ಸೇರಿ ಒಟ್ಟು 48 ಪಂದ್ಯಗಳು ನಡೆಯಲಿವೆ. ಭಾರತ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಇಂಗ್ಲೆಂಡ್‌, ಬಾಂಗ್ಲಾದೇಶ, ನ್ಯೂಜಿಲೆಂಡ್‌, ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ. ಈ 8 ತಂಡಗಳು ನೇರ ಅರ್ಹತೆ ಗಿಟ್ಟಿಸಿಕೊಂಡಿದ್ದು, ಇನ್ನೆರಡು ತಂಡಗಳಾದ ಶ್ರೀಲಂಕಾ ಹಾಗೂ ನೆದರ್‌ಲೆಂಡ್ಸ್ ತಂಡಗಳು ಅರ್ಹತಾ ಸುತ್ತಿನ ಮೂಲಕ ಪ್ರಧಾನ ಸುತ್ತಿಗೆ ಲಗ್ಗೆಯಿಟ್ಟಿವೆ.

ವಿರಾಟ್ ಕೊಹ್ಲಿ ಏಷ್ಯಾದ ಎರಡನೇ ಶ್ರೀಮಂತ ಅಥ್ಲೀಟ್..! ಹಾಗಿದ್ರೆ ಮೊದಲ ಸ್ಥಾನದಲ್ಲಿರೋರು ಯಾರು?

ಮುಂಬರುವ ಅಕ್ಟೋಬರ್ 05ರಿಂದ ನವೆಂಬರ್ 19ರ ವರೆಗೆ ಭಾರತದಲ್ಲಿ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಜರುಗಲಿದೆ. ಇದೇ ಮೊದಲ ಬಾರಿಗೆ ಸಂಪೂರ್ಣ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸುತ್ತಿದೆ. ದೇಶದ 10 ಸ್ಟೇಡಿಯಂಗಳಲ್ಲಿ ಏಕದಿನ ವಿಶ್ವಕಪ್ ಟೂರ್ನಿ ಜರುಗಲಿದೆ.

ಮುಂಬೈ, ಕೋಲ್ಕತಾದಲ್ಲಿ ಸೆಮಿಫೈನಲ್‌ ಪಂದ್ಯಗಳು ನವೆಂಬರ್ 15 ಹಾಗೂ 16ರಂದು ಕ್ರಮವಾಗಿ ಮುಂಬೈನ ವಾಂಖೇಡೆ ಹಾಗೂ ಕೋಲ್ಕತಾ ಈಡನ್‌ ಗಾರ್ಡನ್ಸ್‌ನಲ್ಲಿ ನಡೆಯಲಿವೆ. ಒಂದು ವೇಳೆ ಪಾಕಿಸ್ತಾನ ಸೆಮೀಸ್‌ ಪ್ರವೇಶಿಸಿದರೆ ಆ ತಂಡದ ಪಂದ್ಯ ಕೋಲ್ಕತಾದಲ್ಲಿ ನಡೆಯಲಿದೆ. ಭಾರತ ಸೆಮೀಸ್‌ಗೇರಿದರೆ ಪಂದ್ಯಕ್ಕೆ ಮುಂಬೈ ಆತಿಥ್ಯ ವಹಿಸಲಿದೆ. ಒಂದು ವೇಳೆ ಭಾರತ-ಪಾಕಿಸ್ತಾನ ಸೆಮೀಸ್‌ನಲ್ಲಿ ಎದುರಾಗುವ ಸಂದರ್ಭ ಬಂದರೆ ಪಂದ್ಯ ಕೋಲ್ಕತಾದಲ್ಲಿ ನಡೆಯಲಿದೆ ಎಂದು ಐಸಿಸಿ ತಿಳಿಸಿದೆ. ನವೆಂಬರ್ 19ರಂದು ಫೈನಲ್‌ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ.