2ನೇ ಇನ್ನಿಂಗ್ಸ್‌ನಲ್ಲಿ ಭಾರತ 6 ವಿಕೆಟ್ ಕಳೆದು 427 ರನ್‌ಗೆ ಡಿಕ್ಲೇರ್ ಮಾಡಿಕೊಂಡಿತು. ಈ ಮೂಲಕ ಇಂಗ್ಲೆಂಡ್ 608 ರನ್ ಟಾರ್ಗೆಟ್ ನೀಡಲಾಗಿದೆ.

ಎಡ್ಜ್‌ಬಾಸ್ಟನ್ (ಜು.05) ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ದಿಟ್ಟ ಹೋರಾಟ ನೀಡುವ ಮೂಲಕ ಉತ್ತಮ ಸ್ಥಿತಿ ಕಾಪಾಡಿಕೊಂಡಿದೆ. 2ನೇ ಇನ್ನಿಂಗ್ಸ್‌ನಲ್ಲಿ ಭಾರತ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿ 6 ವಿಕೆಟ್ ನಷ್ಟಕ್ಕೆ 427 ರನ್ ಸಿಡಿಸಿತ್ತು. ಈ ವೇಳೆ ನಾಯಕ ಶುಬ್‌ಮನ್ ಗಿಲ್ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡರು. ಇದರೊಂದಿಗೆ ಇಂಗ್ಲೆಂಡ್ ತಂಡಕ್ಕೆ ಬರೋಬ್ಬರಿ 608 ರನ್ ಟಾರ್ಗೆಟ್ ನೀಡಲಾಗಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಅಬ್ಬರಿಸಿದ ಟೀಂ ಇಂಡಿಯಾ 2ನೇ ಇನಿಂಗ್ಸ್‌ನಲ್ಲೂ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿತ್ತು. ಮತ್ತೆ ನಾಯಕ ಶುಬ್‌ಮನ್ ಗಿಲ್ ಕ್ಲಾಸಿಕ್ ಆಟ ಇಂಗ್ಲೆಂಡ್ ತಂಡಕ್ಕೆ ಬೃಹತ್ ಟಾರ್ಗೆಟ್ ನೀಡುವಲ್ಲಿ ಸಹಕಾರಿಯಾಯಿತು. ಮೊದಲ ಇನ್ನಿಂಗ್ಸ್‌ನಲ್ಲಿ ಡಬಲ್ ಸೆಂಚುರಿ ಸಿಡಿಸಿದ್ದ ಶುಭ್‌ಮನ್ ಗಿಲ್ 2ನೇ ಇನ್ನಿಂಗ್ಸ್‌ನಲ್ಲೂ ಸೆಂಚುರಿ ಸಿಡಿಸಿದರು. ಗಿಲ್ ಅಬ್ಬರ ಬ್ಯಾಟಿಂಗ್‌ನಿಂದ 161 ರನ್ ಸಿಡಿಸಿದರು. ಗಿಲ್ ಹಾಗೂ ರವೀಂದ್ರ ಜಡೇಜಾ ಜೊತೆಯಾಟ ಟೀಂ ಇಂಡಿಯಾ ಬೃಹತ್ ಮುನ್ನಡೆ ಕಾರಣವಾಯಿತು.

ಎರಡನೇ ಇನ್ನಿಂಗ್ಸ್‌ನಲ್ಲಿ ಆರಂಭಿಕರಾದ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಹಾಫ್ ಸೆಂಚುರಿ ಜೊತೆಯಾಟ ನೀಡಿದ್ದರು.4ನೇ ದಿನದಲ್ಲಿ ಕೆಎಲ್ ರಾಹುಲ್ ಅರ್ಧಶತಕ ಸಿಡಿಸಿ ಮಿಂಚಿದರು. ಆದರೆ ರಾಹುಲ್ 55 ರನ್ ಸಿಡಿಸಿ ಔಟಾದರು. ಇತ್ತ ಕರುಣ್ ನಾಯರ್ ಸಿಕ್ಕ ಅವಕಾಶ ಮತ್ತೆ ಕೈಚೆಲ್ಲಿದರು. 2ನೇ ಇನ್ನಿಂಗ್ಸ್‌ನಲ್ಲಿ ಕರುಣ್ ನಾಯರ್ 26 ರನ್ ಸಿಡಿಸಿ ಔಟಾದರು.

ಗಿಲ್-ಪಂತ್ ಜೊತೆಯಾಟ

ಮೊದಲ ಇನ್ನಿಂಗ್ಸ್‌ನಲ್ಲಿ 180 ರನ್ ಮುನ್ನಡೆ ಪಡೆದಿದ್ದ ಟೀಂ ಇಂಡಿಯಾ 2ನೇ ಇನ್ನಿಂಗ್ಸ್‌ನಲ್ಲಿ ಬೃಹತ್ ಟಾರ್ಗೆಟ್ ನೀಡಲು ಮುಂದಾಗಿತ್ತು. ಗಿಲ್ ಹಾಗೂ ರಿಷಬ್ ಪಂತ್ ಜೊತೆಯಾಟದಿಂದ ಭಾರತ ಉತ್ತಮ ಸ್ಥಿತಿ ಕಾಯ್ದಕೊಂಡಿತು.ರಿಷಬ್ ಪಂತ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 58 ಎಸೆತದಲ್ಲಿ 65 ರನ್ ಸಿಡಿಸಿ ಔಟಾದರು.

ಗಿಲ್ ಆಕರ್ಷಕ ಸೆಂಚುರಿ

ಶುಬ್‌ಮನ್ ಗಿಲ್ ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್‌ನಲ್ಲೂ ಶತಕ ಸಾಧನೆ ಮಾಡಿದರು. ಈ ಮೂಲಕ 2 ಟೆಸ್ಟ್ ಪಂದ್ಯ 3 ಇನ್ನಿಂಗ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಗಿಲ್ ದಾಖಲೆ ಬರೆದರು. ಮೊದಲ ಪಂದ್ಯದಲ್ಲಿ ಸೆಂಚುರಿ ಸಿಡಿಸಿದ್ದರೆ, 2ನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಸಿಡಿಸಿ ಅಬ್ಬರಿಸಿದ್ದರು. ಇನ್ನು 2ನೇ ಇನ್ನಿಂಗ್ಸ್‌ನಲ್ಲಿ ಗಿಲ್ 161 ರನ್ ಸಿಡಿಸಿದರು.

ರವೀಂದ್ರ ಜಡೇಜಾ ಇನ್ನಿಂಗ್ಸ್

ಗಿಲ್ ಜೊತೆ ಸೇರಿದ ರವೀಂದ್ರ ಜಡೇಜಾ ಉತ್ತಮ ಹೋರಾಟ ನೀಡಿದರು. ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು. ಮೊದಲ ಇನ್ನಿಂಗ್ಸ್‌ನಲ್ಲಿ ರವೀಂದ್ರ ಜಡೇಜಾ 89 ರನ್ ಕಾಣಿಕೆ ನೀಡಿದ್ದರು. ಜಡೇಜಾ ಅಜೇಯ 69 ರನ್ ಸಿಡಿಸಿದರು. ಈ ವೇಳೆ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿದರು. ಭಾರತ 6 ವಿಕೆಟ್ ನಷ್ಟಕ್ಕೆ 427 ರನ್ ಸಿಡಿಸಿತು. ಇಂಗ್ಲೆಂಡ್ ತಂಡಕ್ಕೆ 608 ರನ್ ಟಾರ್ಗೆಟ್ ನೀಡಲಾಗಿದೆ.