Asianet Suvarna News Asianet Suvarna News

ಭಾರತ ಇಂಗ್ಲೆಂಡ್ ಟೆಸ್ಟ್ ಪಂದ್ಯಿಂದ ರೋಹಿತ್ ಶರ್ಮಾ ಔಟ್, ಜಸ್ಪ್ರೀತ್ ಬುಮ್ರಾಗೆ ನಾಯಕತ್ವ?

  • ಕೋವಿಡ್‌ನಿಂದ ಚೇತರಿಸಿಕೊಳ್ಳುತ್ತಿರುವ ನಾಯಕ ರೋಹಿತ್ ಶರ್ಮಾ
  • ಇಂಗ್ಲೆಂಡ್- ಭಾರತ ನಡುವಿನ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ
  • ಕಪಿಲ್ ದೇವ್ ಬಳಿಕ ನಾಯಕತ್ವ ವಹಿಸಿಕೊಳ್ಳಲಿರುವ ವೇಗಿ ಬುಮ್ರಾ
ENG vs IND test Jasprit Bumrah set to become first paceman to lead India since Kapil Dev after Rohit Sharma ruled out ckm
Author
Bengaluru, First Published Jun 29, 2022, 7:46 PM IST

ಲಂಡನ್(ಜೂ.29): ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ಕೋವಿಡ್ ಸಮಸ್ಯೆ ಗಂಭೀರವಾಗುತ್ತಿದೆ. ಕೋವಿಡ್‌ಗೆ ತುತ್ತಾಗಿದ್ದ ನಾಯಕ ರೋಹಿತ್ ಶರ್ಮಾ ಇದೀಗ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ದದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ವೇಗಿ ಜಸ್ಪ್ರೀತ್ ಬುಮ್ರಾ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತು ಟೀಮ್ ಮೀಟಿಂಗ್‌ನಲ್ಲಿ ಬುಮ್ರಾಗೆ ಸೂಚನೆ ನೀಡಿದ್ದಾರೆ ಅನ್ನೋ ಮಾಹಿತಿಗಳು ಬಹಿರಂಗವಾಗಿದೆ. 

ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯರಾಗಿದ್ದಾರೆ. ಎರಡನೇ ಬಾರಿಗೆ ಕೋವಿಡ್ ಪಾಸಿಟೀವ್ ಕಾಣಿಸಿಕೊಂಡ ಕಾರಣ ರೋಹಿತ್ ಅಲಭ್ಯರಾಗಿದ್ದಾರೆ. ಹೀಗಾಗಿ ಬುಮ್ರಾಗೆ ನಾಯಕತ್ವ ನೀಡುವ ಸಾಧ್ಯತೆಗಳಿವೆ. ಈ ಮೂಲಕ ಕಪಿಲ್ ದೇವ್ ಬಳಿಕ ಟೀಂ ಇಂಡಿಯಾ ನಾಯಕತ್ವ ವಹಿಸಿಕೊಂಡ ವೇಗಿ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಪಿಲ್ ದೇವ್ ಬಳಿಕ ಟೀಂ ಇಂಡಿಯಾ ಸ್ಪಿನ್ನರ್ ಹಾಗೂ ಬ್ಯಾಟ್ಸ್‌ಮನ್‌ಗಳನ್ನು ನಾಯಕನಾಗಿ ಕಂಡಿದೆ. ಆದರೆ ವೇಗಿ ನಾಯಕರಾಗಿರಲಿಲ್ಲ. ಇದೀಗ ಬುಮ್ರಾ ಈ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಇಂಗ್ಲೆಂಡ್ ಎದುರು 5ನೇ ಟೆಸ್ಟ್ ಗೆಲ್ಲೋದಿರಲಿ, ಡ್ರಾ ಮಾಡಿಕೊಂಡರೆ ಅದೇ ದೊಡ್ಡ ಸಾಧನೆ..!

ಕೋವಿಡ್‌ನಿಂದ ಚೇತರಿಸಿಕೊಂಡ ಅಭ್ಯಾಸದ ಮೊದಲ ಇನ್ನಿಂಗ್ಸ್ ಆಡಿದ್ದ ರೋಹಿತ್ ಶರ್ಮಾ 25 ರನ್ ಸಿಡಿಸಿದ್ದರು. ಆದರೆ ಎರಡನೇ ಇನ್ನಿಂಗ್ಸ್ ವೇಳೆ ಮತ್ತೆ ರೋಹಿತ್‌ಗೆ ಕೋವಿಡ್ ಕಾಣಿಸಿಕೊಂಡಿತು. ಹೀಗಾಗಿ ಬ್ಯಾಟಿಂಗ್ ಆಗಮಿಸದೆ ವೈದ್ಯರ ಸೂಚನೆಯಂತೆ ವಶ್ರಾಂತಿಗೆ ಜಾರಿದ್ದರು.

ಇತ್ತ ಕೆಎಲ್ ರಾಹುಲ್ ಇಂಜುರಿ ಕಾರಣದಿಂದ ಇಂಗ್ಲೆಂಡ್ ಟೂರ್ನಿಯಿಂದ ಹೊರಗುಳಿದಿದ್ದಾರೆ. ಟೀಂ ಇಂಡಿಯಾ ಟೆಸ್ಟ್ ತಂಡದ ಉಪನಾಯಕನಾಗಿರುವ ಕೆಎಲ್ ರಾಹುಲ್ ಕೂಡ ಅಲಭ್ಯರಾಗಿರುವ ಕಾರಣ ಜಸ್ಪ್ರೀತ್ ಬುಮ್ರಾ ನಾಯಕನಾಗಿ ಆಯ್ಕೆಯಾಗಲಿದ್ದಾರೆ.

ಟೆಸ್ಟ್ ತಂಡದ ಉಪನಾಯಕನಾಗಿದ್ದ ಅಜಿಂಕ್ಯ ರಹಾನೆ ಕಳಪೆ ಫಾರ್ಮ್‌ನಿಂದ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿಲ್ಲ. ಇತ್ತ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೆ ನಾಯಕತ್ವ ವಹಿಸಿಕೊಳ್ಳಲು ತಯಾರಿಲ್ಲ. ಹೀಗಾಗಿ ಟೀಂ ಇಂಡಿಯಾ ಇದೀಗ ಮತ್ತೊಬ್ಬ ಹೊಸ ನಾಯಕನ ಕಂಡಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ 6ಕ್ಕಿಂತ ಹೆಚ್ಚು ನಾಯಕರನ್ನು ಟೀಂ ಇಂಡಿಯಾ ಕಂಡಿದೆ.

Ind vs Eng ವಿರಾಟ್ ಕೊಹ್ಲಿ ಟ್ವೀಟ್​ಗೆ ಫೋಟೋ ಜರ್ನಲಿಸ್ಟ್​ ಥ್ಯಾಕ್ಸ್ ಹೇಳಿದ್ದೇಕೆ..?

ಜುಲೈ 1 ರಿಂದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. ಕೋವಿಡ್ ಕಾರಣ ಮುಂದೂಡಲ್ಪಟ್ಟಿರುವ ಈ ಟೆಸ್ಟ್ ಟೂರ್ನಿಯಲ್ಲಿ ಭಾರತ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಕೊನೆಯ ಪಂದ್ಯ ಗೆದ್ದ ಸರಣಿ ಕೈವಶ ಮಾಡಲು ಟೀಂ ಇಂಡಿಯಾ ಮುಂದಾಗಿದೆ.

Follow Us:
Download App:
  • android
  • ios