ವೈಜಾಗ್ ಟೆಸ್ಟ್ ಸೋಲುತ್ತಿದ್ದಂತೆಯೇ ದಿಢೀರ್ ಎನ್ನುವಂತೆ ಭಾರತ ತೊರೆದ ಆಂಗ್ಲರು..! ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ
ಇಂಗ್ಲೆಂಡ್ ತಂಡವು ಎರಡನೇ ಟೆಸ್ಟ್ ಪಂದ್ಯ ಸೋಲುತ್ತಿದ್ದಂತೆಯೇ ಭಾರತ ತೊರೆದು ತಾತ್ಕಾಲಿಕ ಬ್ರೇಕ್‌ಗಾಗಿ ಅಬುದಾಬಿಗೆ ಹಾರಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯವು ಫೆಬ್ರವರಿ 15ರಂದು ರಾಜ್‌ಕೋಟ್‌ನಲ್ಲಿ ಆರಂಭವಾಗಲಿದೆ.
ವಿಶಾಖಪಟ್ಟಣಂ(ಫೆ.06): ಇಂಗ್ಲೆಂಡ್ ಕ್ರಿಕೆಟ್ ತಂಡವು 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ಭಾರತಕ್ಕೆ ಬಂದಿಳಿದಿದೆ. ಈಗಾಗಲೇ ಮೊದಲೆರಡು ಪಂದ್ಯಗಳು ಮುಕ್ತಾಯವಾಗಿದ್ದು, ಸರಣಿಯಲ್ಲಿ ಉಭಯ ತಂಡಗಳು 1-1ರ ಸಮಬಲ ಸಾಧಿಸಿದೆ. ಹೈದರಾಬಾದ್ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡವು ಗೆಲುವು ಸಾಧಿಸಿದರೆ, ವೈಜಾಗ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 106 ರನ್ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ. ಇನ್ನು ಎರಡನೇ ಟೆಸ್ಟ್ ಪಂದ್ಯದಲ್ಲಿ ಸೋಲು ಕಾಣುತ್ತಿದ್ದಂತೆಯೇ ಇಂಗ್ಲೆಂಡ್ ತಂಡವು ದಿಢೀರ್ ಎನ್ನುವಂತೆ ಭಾರತ ತೊರೆದಿದೆ.
ಹೌದು, ಇಂಗ್ಲೆಂಡ್ ತಂಡವು ಎರಡನೇ ಟೆಸ್ಟ್ ಪಂದ್ಯ ಸೋಲುತ್ತಿದ್ದಂತೆಯೇ ಭಾರತ ತೊರೆದು ತಾತ್ಕಾಲಿಕ ಬ್ರೇಕ್‌ಗಾಗಿ ಅಬುದಾಬಿಗೆ ಹಾರಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯವು ಫೆಬ್ರವರಿ 15ರಂದು ರಾಜ್‌ಕೋಟ್‌ನಲ್ಲಿ ಆರಂಭವಾಗಲಿದೆ. ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಸಾಕಷ್ಟು ಬಿಡುವು ಇರುವುದರಿಂದ ರಿಲ್ಯಾಕ್ಸ್ ಮಾಡುವ ಉದ್ದೇಶದಿಂದ ಆಂಗ್ಲರ ಪಡೆ ಅಬುದಾಬಿಗೆ ಹಾರಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯವು ಒಂದು ದಿನ ಬಾಕಿ ಇರುವಂತೆಯೇ ಮುಕ್ತಾಯವಾಗಿದ್ದು, ಮೂರನೇ ಟೆಸ್ಟ್‌ಗೂ ಮುನ್ನ 10 ದಿನ ಬಿಡುವು ಸಿಕ್ಕಂತೆ ಆಗಿದೆ.
IPL ಕ್ರಿಕೆಟಿಗನ ಜತೆ ನಡೆಯಿತು ಆ ದುರ್ಘಟನೆ, ದುಷ್ಕರ್ಮಿಗಳು ಗನ್ ಹಿಡಿದು....!
ಇನ್ನು ದುಬೈ ಪ್ರವಾಸದ ವೇಳೆಯಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡವು ಟೀಂ ಇಂಡಿಯಾ ಸ್ಪಿನ್ನರ್‌ಗಳನ್ನು ಹಾಗೂ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಮುಂದಿನ ಮೂರು ಟೆಸ್ಟ್ ಪಂದ್ಯಗಳಲ್ಲಿ ಎದುರಿಸುವುದು ಹೇಗೆ ಎನ್ನುವುದರ ಬಗ್ಗೆ ರಣತಂತ್ರ ಹೆಣೆಯಲು ಬಳಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ವೈಜಾಗ್ ಟೆಸ್ಟ್‌ನಲ್ಲಿ ಗೆಲ್ಲಲು 399 ರನ್ ಗುರಿ ಪಡೆದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆಯಿತಾದರೂ, ಮಧ್ಯಮ ಕ್ರಮಾಂಕದಲ್ಲಿ ರವಿಚಂದ್ರನ್ ಅಶ್ವಿನ್ ಹಾಗೂ ಜಸ್ಪ್ರೀತ್ ಬುಮ್ರಾ ಮಾರಕ ದಾಳಿ ನಡೆಸುವ ಮೂಲಕ ಆಂಗ್ಲರ ಪಡೆಯನ್ನು 292 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಟೀಂ ಇಂಡಿಯಾ 106 ರನ್ ಅಂತರದ ಗೆಲುವು ಸಾಧಿಸಿತು.
ಶತಕ ವೀರ ಶುಭ್‌ಮನ್ ಗಿಲ್‌ಗೆ ಗಾಯ: ಟೀಂ ಇಂಡಿಯಾ ಪಾಳಯದಲ್ಲಿ ಶುರವಾಯ್ತು ಆತಂಕ..!
ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಎರಡನೇ ಸ್ಥಾನಕ್ಕೇರಿದ ಟೀಂ ಇಂಡಿಯಾ
2023-25ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಶ್ರೇಯಾಂಕದಲ್ಲಿ ಭಾರತ ಮತ್ತೆ 2ನೇ ಸ್ಥಾನಕ್ಕೇರಿದೆ. ಮೊದಲ ಟೆಸ್ಟ್ ಸೋಲಿನ ಬಳಿಕ ರೋಹಿತ್ ಪಡೆ 6ನೇ ಸ್ಥಾನಕ್ಕೆ ಕುಸಿದಿತ್ತು. ವಿಶಾಖಪಟ್ಟಣಂನಲ್ಲಿ ಸೋಮವಾರ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್‌ನಲ್ಲಿ 106 ರನ್‌ಗಳಲ್ಲಿ ಗೆದ್ದ ಬಳಿಕ ಭಾರತ ಅಂಕಪಟ್ಟಿಯಲ್ಲಿ 4 ಸ್ಥಾನ ಪ್ರಗತಿ ಸಾಧಿಸಿ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ.