Ben Stokes ಇಂಗ್ಲೆಂಡ್‌ಗೆ ವಿಶ್ವಕಪ್ ಗೆದ್ದುಕೊಟ್ಟ ಹೀರೋ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಣೆ..!

ಏಕದಿನ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ ಬೆನ್ ಸ್ಟೋಕ್ಸ್‌
2019ರ ಏಕದಿನ ವಿಶ್ವಕಪ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಬೆನ್ ಸ್ಟೋಕ್ಸ್
ಮಂಗಳವಾರ ದಕ್ಷಿಣ ಆಫ್ರಿಕಾ ಎದುರು ಕೊನೆಯ ಏಕದಿನ ಪಂದ್ಯವನ್ನಾಡಲಿರುವ ಇಂಗ್ಲೆಂಡ್ ಆಲ್ರೌಂಡರ್

England All Rounder Ben Stokes Announces Retirement From ODIs kvn

ಲಂಡನ್‌(ಜು.18): ಇಂಗ್ಲೆಂಡ್ ಕ್ರಿಕೆಟ್ ತಂಡವು ಚೊಚ್ಚಲ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಮಹತ್ತರ ಪಾತ್ರವನ್ನು ವಹಿಸಿದ್ದ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್‌ ದಿಢೀರ್ ಎನ್ನುವಂತೆ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಬೆನ್ ಸ್ಟೋಕ್ಸ್‌ ಮಂಗಳವಾರ ಕೊನೆಯ ಬಾರಿಗೆ ಡರ್ಹಾಮ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ತಮ್ಮ ವಿದಾಯದ ಏಕದಿನ ಪಂದ್ಯವನ್ನಾಡಲಿದ್ದಾರೆ. ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಬೆನ್ ಸ್ಟೋಕ್ಸ್‌ ತಮ್ಮ ಏಕದಿನ ಕ್ರಿಕೆಟ್ ನಿವೃತ್ತಿ ನಿರ್ಧಾರವನ್ನು ಘೋಷಿಸಿದ್ದಾರೆ.

ನಾನು ಇಂಗ್ಲೆಂಡ್ ಏಕದಿನ ತಂಡದ ಪರ ಮಂಗಳವಾರ ಡರ್ಹಾಮ್‌ನಲ್ಲಿ ಕೊನೆಯ ಪಂದ್ಯವನ್ನಾಡಲಿದ್ದೇನೆ. ನಾನು ಈ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಪಡೆಯುಬ ತೀರ್ಮಾನ ತೆಗೆದುಕೊಂಡಿದ್ದೇನೆ. ಈ ನಿರ್ಧಾರವನ್ನು ತೆಗೆದುಕೊಳ್ಳುವುದು ನನ್ನ ಪಾಲಿಗೆ ಸಾಕಷ್ಟು ಕಠಿಣ ಎನಿಸಿತು. ಇಂಗ್ಲೆಂಡ್ ತಂಡದ ಸಹ ಆಟಗಾರರ ಜತೆ ನಾನು ಆಡಿದ ಪ್ರತಿಕ್ಷಣವನ್ನು ಆನಂದಿಸಿದ್ದೇನೆ. ನಾವು ಒಳ್ಳೆಯ ಅವಿಸ್ಮರಣೀಯ ಪಯಣ ನಡೆಸಿದ್ದೇವೆ ಎಂದು ಬೆನ್ ಸ್ಟೋಕ್ಸ್ ತಮ್ಮ ಅಧಿಕೃತ ಪ್ರಕಟಣೆಯನ್ನು ಟ್ವಿಟರ್‌ ಮೂಲಕ ಹೊರಡಿಸಿದ್ದಾರೆ. 

ಇಂಗ್ಲೆಂಡ್ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್‌ ಇದುವರೆಗೂ ಇಂಗ್ಲೆಂಡ್ ಕ್ರಿಕೆಟ್ ತಂಡದ ಪರ 104 ಏಕದಿನ ಪಂದ್ಯಗಳನ್ನಾಡಿ 39.44ರ ಬ್ಯಾಟಿಂಗ್ ಸರಾಸರಿಯಲ್ಲಿ 2,919 ರನ್ ಬಾರಿಸಿದ್ದಾರೆ. 2019ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಬೆನ್ ಸ್ಟೋಕ್ಸ್ ನ್ಯೂಜಿಲೆಂಡ್ ಎದುರು ಅಜೇಯ 84 ರನ್ ಬಾರಿಸುವ ಮೂಲಕ ಇಂಗ್ಲೆಂಡ್ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಹೀಗಾಗಿ 2019ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ ಪಂದ್ಯದ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಬೆನ್ ಸ್ಟೋಕ್ಸ್ ಪಾತ್ರರಾಗಿದ್ದರು. 2011ರಲ್ಲಿ ಐರ್ಲೆಂಡ್ ವಿರುದ್ದ ಬೆನ್ ಸ್ಟೋಕ್ಸ್‌, ಇಂಗ್ಲೆಂಡ್ ಪರ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಬೆನ್ ಸ್ಟೋಕ್ಸ್‌ ಏಕದಿನ ಕ್ರಿಕೆಟ್‌ನಲ್ಲಿ 3 ಶತಕ ಹಾಗೂ 21 ಅರ್ಧಶತಕ ಸಿಡಿಸಿದ್ದಾರೆ. ಇನ್ನು ಮಧ್ಯಮ ವೇಗದ ಬೌಲರ್ ಆಗಿಯೂ ಸೈ ಎನಿಸಿಕೊಂಡಿದ್ದ ಬೆನ್ ಸ್ಟೋಕ್ಸ್‌ 74 ವಿಕೆಟ್ ಕಬಳಿಸಿದ್ದರು.

ಗುರು ಕಾಣಿಕೆ..! ಮಾಜಿ ಕೋಚ್ ರವಿಶಾಸ್ತ್ರಿಗೆ ಶಾಂಫೇನ್ ಗಿಫ್ಟ್ ಕೊಟ್ಟ ರಿಷಭ್ ಪಂತ್..! ವಿಡಿಯೋ ವೈರಲ್

ಕಳೆದ ವರ್ಷ ಪಾಕಿಸ್ತಾನ ವಿರುದ್ದ ಮೊದಲ ಬಾರಿಗೆ ಇಂಗ್ಲೆಂಡ್ ಏಕದಿನ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದ ಬೆನ್ ಸ್ಟೋಕ್ಸ್‌, ರಾಯಲ್ ಲಂಡನ್ ಸೀರಿಸ್‌ನಲ್ಲಿ ಇಂಗ್ಲೆಂಡ್ ತಂಡವು 3-0 ಅಂತರದಲ್ಲಿ ಕ್ಲೀನ್ ಮಾಡುವಲ್ಲಿ ಯಶಸ್ವಿಯಾಗಿದ್ದರು. ಇನ್ನು ಒತ್ತಡದ ಸಂದರ್ಭದಲ್ಲಿ ಬೆನ್ ಸ್ಟೋಕ್ಸ್‌ ಅವರಿಂದ ಅತ್ಯುತ್ತಮ ಪ್ರದರ್ಶನ ಮೂಡಿ ಬರುತ್ತಿತ್ತು. ಸದ್ಯ ಬೆನ್ ಸ್ಟೋಕ್ಸ್ ಇಂಗ್ಲೆಂಡ್ ತಂಡದ ನಾಯಕರಾಗಿದ್ದು, ತಾವು ನಾಯಕನಾಗಿ ಕಣಕ್ಕಿಳಿದ ಮೊದಲ ಸರಣಿಯಲ್ಲೇ ನ್ಯೂಜಿಲೆಂಡ್ ಎದುರು 3-0 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತ್ತು. ಇದಾದ ಬಳಿಕ ಭಾರತ ವಿರುದ್ದ ಪುನರ್‌ನಿಗದಿಯಾಗಿದ್ದ ಟೆಸ್ಟ್ ಪಂದ್ಯದಲ್ಲೂ ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್ ತಂಡವು ಭರ್ಜರಿ ಗೆಲುವು ದಾಖಲಿಸಿದೆ.

ಬೆನ್ ಸ್ಟೋಕ್ಸ್‌ ಇಂಗ್ಲೆಂಡ್ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರೂ ಸಹಾ, ಇಂಗ್ಲೆಂಡ್ ಟೆಸ್ಟ್ ಹಾಗೂ ಟಿ20 ತಂಡದಲ್ಲಿ ಮುಂದುವರೆಯಲಿದ್ದಾರೆ. ಇನ್ನು ಈ ತಿಂಗಳ ಆರಂಭದಲ್ಲಿ ಇಂಗ್ಲೆಂಡ್‌ಗೆ ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದುಕೊಟ್ಟ ನಾಯಕ ಇಯಾನ್ ಮಾರ್ಗನ್ ಕೂಡಾ ದಿಢೀರ್ ಎನ್ನುವಂತೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು.

Latest Videos
Follow Us:
Download App:
  • android
  • ios