* ಶ್ರೀಲಂಕಾ ಎದುರಿನ ಏಕದಿನ ಸರಣಿಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟ* ತಂಡಕೂಡಿಕೊಂಡ ಟೆಸ್ಟ್ ತಂಡದ ನಾಯಕ ಜೋ ರೂಟ್‌* ಲಂಕಾ ಎದುರಿನ ಸರಣಿಗೆ ಆರ್ಚರ್‌-ಸ್ಟೋಕ್ಸ್‌ಗೆ ವಿಶ್ರಾಂತಿ

ಲಂಡನ್‌(ಜೂ.19): ಶ್ರೀಲಂಕಾ ವಿರುದ್ದ ಜೂನ್ 29ರಿಂದ ಆರಂಭವಾಗಲಿರುವ 3 ಪಂದ್ಯಗಳ ಏಕದಿನ ಸರಣಿಗೆ 16 ಆಟಗಾರರನ್ನೊಳಗೊಂಡ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ಎಡಗೈ ವೇಗಿ ಜಾರ್ಜ್‌ ಗಾರ್ಟನ್‌ ಇದೇ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ತಂಡದ ಸ್ಟಾರ್ ಆಟಗಾರರಾದ ಬೆನ್ ಸ್ಟೋಕ್ಸ್ ಹಾಗೂ ಜೋಫ್ರಾ ಆರ್ಚರ್‌ಗೆ ವಿಶ್ರಾಂತಿ ನೀಡಲಾಗಿದ್ದು, ಇಯಾನ್ ಮಾರ್ಗನ್‌ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ಭಾರತ ವಿರುದ್ದದ ಸೀಮಿತ ಓವರ್‌ಗಳ ಸರಣಿಯಿಂದ ಹೊರಗುಳಿದಿದ್ದ ಜೋ ರೂಟ್ ಕೂಡಾ ಏಕದಿನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

Scroll to load tweet…

ಲಂಕಾ ಎದುರಿನ ಟಿ20 ಸರಣಿಗೆ ಇಂಗ್ಲೆಂಡ್ ತಂಡ ಕೂಡಿಕೊಂಡ ಕ್ರಿಸ್ ವೋಕ್ಸ್

ಶ್ರೀಲಂಕಾ ವಿರುದ್ದ 3 ಪಂದ್ಯಗಳ ಏಕದಿನ ಸರಣಿಗೂ ಮುನ್ನ, ದ್ವೀಪ ರಾಷ್ಟ್ರದ ವಿರುದ್ದ 3 ಪಂದ್ಯಗಳ ಟಿ20 ಸರಣಿ ಅಡಲಿದೆ. ಶ್ರೀಲಂಕಾ ವಿರುದ್ದದ ಟಿ20 ಸರಣಿಯು ಜೂನ್ 23ರಿಂದ ಆರಂಭವಾಗಲಿದೆ.

ಲಂಕಾ ಎದುರಿನ ಏಕದಿನ ಸರಣಿಗೆ ಇಂಗ್ಲೆಂಡ್ ತಂಡ ಹೀಗಿದೆ ನೋಡಿ:

ಇಯಾನ್ ಮಾರ್ಗನ್‌(ನಾಯಕ), ಮೋಯಿನ್ ಅಲಿ, ಜಾನಿ ಬೇರ್‌ಸ್ಟೋವ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಸ್ಯಾಮ್ ಕರ್ರನ್, ಟಾಮ್ ಕರ್ರನ್, ಲಿಯಾಮ್ ಡಾಸನ್, ಜಾರ್ಜ್‌ ಗಾರ್ಟನ್‌, ಲಿಯಾಮ್ ಲಿವಿಂಗ್‌ಸ್ಟೋನ್, ಅದಿಲ್ ರಶೀದ್, ಜೋ ರೂಟ್, ಜೇಸನ್ ರಾಯ್, ಡೇವಿಡ್ ವಿಲ್ಲೆ, ಕ್ರಿಸ್ ವೋಕ್ಸ್, ಮಾರ್ಕ್‌ ವುಡ್