ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ; ಆರ್‌ಸಿಬಿ ಮೂರು ಆಟಗಾರರಿಗೆ ಸ್ಥಾನ!
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಇಂಗ್ಲೆಂಡ್ ತಂಡ ಪ್ರಕಟವಾಗಿದ್ದು, ಆರ್‌ಸಿಬಿ ತಂಡದ ಮೂವರು ಆಟಗಾರರು ಸ್ಥಾನ ಪಡೆದಿದ್ದಾರೆ. ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ ಕಮ್‌ಬ್ಯಾಕ್ ಮಾಡಿದರೆ, ಬೆನ್ ಸ್ಟೋಕ್ಸ್ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ.
ಲಂಡನ್: ಮುಂಬರುವ ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಪಾಕಿಸ್ತಾನ ಆತಿಥ್ಯ ವಹಿಸಿದೆ. ಮಿನಿ ಐಸಿಸಿ ವಿಶ್ವಕಪ್ ಎಂದೇ ಬಿಂಬಿತವಾಗಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಇದೀಗ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಪ್ರಕಟಿಸಿದ್ದು, ಆರ್‌ಸಿಬಿ ತಂಡದ ಮೂವರು ಆಟಗಾರರು ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ.
ಅಂದಹಾಗೆ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಭಾರತದ ಪಂದ್ಯಗಳು ಪಾಕಿಸ್ತಾನದ ಆಚೆಗೆ ನಡೆಯಲಿದೆ. ಆದರೆ ಯಾವ ದೇಶದಲ್ಲಿ ಭಾರತದ ಪಂದ್ಯಗಳು ಆಯೋಜನೆಗೊಳ್ಳಲಿವೆ ಎನ್ನುವುದು ಇನ್ನೂ ಅಧಿಕೃತವಾಗಿಲ್ಲ. ಹೀಗಿರುವಾಗಲೇ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ಭಾರತ ಎದುರಿನ ಏಕದಿನ & ಟಿ20 ಸರಣಿ ಹಾಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಪ್ರತ್ಯೇಕ ಎರಡು ತಂಡಗಳನ್ನು ಇದೀಗ ಪ್ರಕಟಿಸಿದೆ. ಇಂಗ್ಲೆಂಡ್ ತಂಡವನ್ನು ನಾಯಕನಾಗಿ ಜೋಸ್ ಬಟ್ಲರ್ ಮುನ್ನಡೆಸಲಿದ್ದಾರೆ.
ದಿಢೀರ್ ನಿವೃತ್ತಿಯ ಬೆನ್ನಲ್ಲೇ ತಮ್ಮ ತಂದೆಯನ್ನು ಅವರ ಪಾಡಿಗೆ ಬಿಟ್ಟುಬಿಡಿ ಎಂದಿದ್ದೇಕೆ ಅಶ್ವಿನ್?
ಬೆನ್ ಸ್ಟೋಕ್ಸ್‌ಗಿಲ್ಲ ಸ್ಥಾನ:
ಇನ್ನು ಈ ಬಾರಿಯ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಇಂಗ್ಲೆಂಡ್ ತಂಡದಲ್ಲಿ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್‌ಗೆ ಸ್ಥಾನ ಸಿಕ್ಕಿಲ್ಲ. ಬೆನ್ ಸ್ಟೋಕ್ಸ್ ಏಕದಿನ ಕ್ರಿಕೆಟ್ ಮಾದರಿಗೆ ಈ ಹಿಂದೆಯೇ ಗುಡ್ ಬೈ ಹೇಳಿದ್ದರು. ಹೀಗಿದ್ದೂ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ನಿವೃತ್ತಿ ವಾಪಾಸ್ ಪಡೆದು ಇಂಗ್ಲೆಂಡ್ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದರು. ಅದೇ ರೀತಿ ಸ್ಟೋಕ್ಸ್ ಇದೀಗ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲೂ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ. ಗಾಯದ ಸಮಸ್ಯೆಯಿಂದಾಗಿ ಬೆನ್ ಸ್ಟೋಕ್ಸ್, ಐಸಿಸಿ ಚಾಂಪಿಯನ್ಸ್ ಟ್ರೋಫಿ ಹಾಗೂ ಭಾರತ ಎದುರಿನ ಏಕದಿನ & ಟಿ20 ಸರಣಿಗೆ ಸ್ಥಾನ ಪಡೆದಿಲ್ಲ ಎಂದು ವರದಿಯಾಗಿದೆ.
Rehan Ahmed - Selected in T20I squad.
— Wisden (@WisdenCricket) December 22, 2024
Joe Root - Selected in ODI squad.
England have announced their squads for the upcoming white-ball series against India.
Read here ➡️ https://t.co/uTrQ8uNXqz pic.twitter.com/ASM6la67Mi
ಟೆಸ್ಟ್ ಸ್ಪೆಷಲಿಸ್ಟ್ ರೂಟ್‌ಗೆ ಸ್ಥಾನ:
ಇಂಗ್ಲೆಂಡ್ ಕ್ರಿಕೆಟ್ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿರುವ ಜೋ ರೂಟ್ ಇದೀಗ ಮತ್ತೊಮ್ಮೆ ಇಂಗ್ಲೆಂಡ್ ಏಕದಿನ ತಂಡಕ್ಕೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವರ್ಷ ಭಾರತದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಜೋ ರೂಟ್ ಅವರ ಪ್ರದರ್ಶನ ಅಷ್ಟೇನೂ ಉತ್ತಮವಾಗಿರಲಿಲ್ಲ. ರೂಟ್ 30.66ರ ಸರಾಸರಿಯಲ್ಲಿ ಕೇವಲ 276 ರನ್ ಬಾರಿಸಿದ್ದರು. ಆದರೆ ಈ ವರ್ಷ ರೂಟ್ 55.57ರ ಸರಾಸರಿಯಲ್ಲಿ 6 ಶತಕ ಸಹಿತ 1556 ರನ್ ಬಾರಿಸಿದ್ದು, ಬರೋಬ್ಬರಿ ಒಂದು ವರ್ಷದ ಬಳಿಕ ತಂಡಕ್ಕೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಗಡಿಯಲ್ಲಿ ಸ್ಟೇಡಿಯಂ ನಿರ್ಮಿಸಿ! ಪಾಕ್ ಮಾಜಿ ಕ್ರಿಕೆಟಿಗನ ವಿಚಿತ್ರ ಸಲಹೆ
ಆರ್‌ಸಿಬಿಯ ಮೂವರು ಆಟಗಾರರಿಗೆ ಸ್ಥಾನ:
ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಆಯ್ಕೆ ಸಮಿತಿ ಸಾಕಷ್ಟು ಅಳೆದುತೂಗಿ ಇಂಗ್ಲೆಂಡ್ ತಂಡವನ್ನು ಆಯ್ಕೆ ಮಾಡಿದೆ. ಈ ಪೈಕಿ ಇತ್ತೀಚೆಗಷ್ಟೇ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಂಡ ಮೂವರು ಆಟಗಾರರಿಗೆ ಮಣೆ ಹಾಕಲಾಗಿದೆ. ಹೌದು, ಸ್ಪೋಟಕ ಆರಂಭಿಕ ಬ್ಯಾಟರ್ ಫಿಲ್ ಸಾಲ್ಟ್, ಅನುಭವಿ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಹಾಗೂ ಪ್ರತಿಭಾನ್ವಿತ ಆಟಗಾರ ಜೇಕೊಬ್ ಬೆಥೆಲ್ ಅವರು ಇಂಗ್ಲೆಂಡ್ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ,
ಇಂಗ್ಲೆಂಡ್ ಕ್ರಿಕೆಟ್ ತಂಡವು ವರ್ಷಾರಂಭದಲ್ಲಿ ಮೊದಲಿಗೆ ಟೀಂ ಇಂಡಿಯಾ ಎದುರಿನ ಸೀಮಿತ ಓವರ್‌ಗಳ ಸರಣಿಯನ್ನಾಡಲು ಭಾರತಕ್ಕೆ ಬಂದಿಳಿಯಲಿದೆ. ಇಂಗ್ಲೆಂಡ್ ತಂಡವು ಭಾರತ ಎದುರು 5 ಟಿ20 ಹಾಗೂ ಮೂರು ಏಕದಿನ ಪಂದ್ಯಗಳನ್ನಾಡಲಿದೆ. 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಜನವರಿ 22ರಿಂದ ಆರಂಭವಾಗಲಿದ್ದು, ಫೆಬ್ರವರಿ 02ರಂದು ಕೊನೆಯ ಹಾಗೂ 5ನೇ ಟಿ20 ಪಂದ್ಯ ನಡೆಯಲಿದೆ. ಇನ್ನು ಇದಾದ ಬಳಿಕ ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಫೆಬ್ರವರಿ 06ರಿಂದ ಆರಂಭವಾಗಲಿದ್ದು, ಎರಡನೇ ಏಕದಿನ ಪಂದ್ಯ ಫೆಬ್ರವರಿ 09 ಹಾಗೂ ಕೊನೆಯ ಏಕದಿನ ಪಂದ್ಯ ಫೆಬ್ರವರಿ 12ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ-ಪಾಕ್ ಕ್ರಿಕೆಟ್ ಕಗ್ಗಂಟು ಇತ್ಯರ್ಥ: ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ
ಭಾರತ ಹಾಗೂ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಇಂಗ್ಲೆಂಡ್ ತಂಡ:
ಜೋಸ್ ಬಟ್ಲರ್(ನಾಯಕ), ಜೋಫ್ರಾ ಆರ್ಚರ್ ಗುಸ್ ಅಟ್ಕಿನ್‌ಸನ್, ಜೇಕೊಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೆಂಡನ್ ಕೇರ್ಸ್, ಬೆನ್ ಡಕೆಟ್, ಜೇಮಿ ಓವರ್‌ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಕೀಬ್ ಮೊಹಮದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
ಭಾರತ ಎದುರಿನ ಟಿ20 ಸರಣಿಗೆ ಇಂಗ್ಲೆಂಡ್ ತಂಡ:
ಜೋಸ್ ಬಟ್ಲರ್(ನಾಯಕ), ರೆಹನ್ ಅಹಮದ್, ಜೋಫ್ರಾ ಆರ್ಚರ್, ಗುಸ್ ಅಟ್ಕಿನ್‌ಸನ್, ಜೇಕೊಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೆಂಡನ್ ಕೇರ್ಸ್, ಬೆನ್ ಡಕೆಟ್, ಜೇಮಿ ಓವರ್‌ಟನ್, ಜೇಮಿ ಸ್ಮಿತ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಸಕೀಬ್ ಮೊಹಮದ್, ಫಿಲ್ ಸಾಲ್ಟ್, ಮಾರ್ಕ್ ವುಡ್.