ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಟೀಂ ಇಂಡಿಯಾದಲ್ಲಿ 1 ಬದಲಾವಣೆ
ಲಂಡನ್(ಆ.12): ಭಾರತ ಹಾಗೂ ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಆರಂಭಗೊಂಡಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಪಂದ್ಯದಲ್ಲಿ ನೀರಸ ಪ್ರದರ್ಶನ ನೀಡಿದ್ದ ಇಂಗ್ಲೆಂಡ್, ಇದೀಗ ಲಂಡನ್ ಟೆಸ್ಟ್ ಪಂದ್ಯದಲ್ಲಿ ದಿಟ್ಟ ಹೋರಾಟ ನೀಡೋ ವಿಶ್ವಾಸದಲ್ಲಿದೆ.
ಟೀಂ ಇಂಡಿಯಾದಲ್ಲಿ 1 ಬದಲಾವಣೆ ಮಾಡಲಾಗಿದೆ. ವೇಗಿ ಶಾರ್ದೂಲ್ ಠಾಕೂರ್ ಬದಲು ಹಿರಿಯ ವೇಗಿ ಇಶಾಂತ್ ಶರ್ಮಾ ತಂಡ ಸೇರಿಕೊಂಡಿದ್ದಾರೆ. ಇನ್ನುಳಿದಂತೆ ಮೊದಲ ಪಂದ್ಯದಲ್ಲಿ ಕಣಕ್ಕಿಳಿದ ಆಟಗಾರರೇ 2ನೇ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಮೊದಲ ಟೆಸ್ಟ್ ಪಂದ್ಯ ಮಳೆಯಿಂದ ಡ್ರಾನಲ್ಲಿ ಅಂತ್ಯಗೊಂಡಿದೆ. ಪ್ರಬಲ ಹಿಡಿತ ಸಾಧಿಸಿದ್ದ ಟೀಂ ಇಂಡಿಯಾ ಅಂತಿಮ ದಿನ ಗೆಲುವಿಗೆ 157 ರನ್‌ಗಳ ಅವಶ್ಯಕತೆ ಇತ್ತು. ಆದರೆ 5ನೇ ದಿನದಾಟ ಒಂದು ಎಸೆತ ಕಾಣದೆ ರದ್ದುಗೊಂಡಿದೆ. ಹೀಗಾಗಿ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು.
