ಲಂಡನ್(ಮೇ.15)‌: ಇಂಗ್ಲೆಂಡ್‌ನ ಎಡಗೈ ವೇಗಿ ಹ್ಯಾರಿ ಗರ್ನಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಭುಜದ ನೋವಿನಿಂದ ಬಳಲುತ್ತಿರುವ ಕಾರಣ ನಿವೃತ್ತಿ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ್ದಾರೆ. 

ಕಳೆದ ವರ್ಷ ಭುಜದ ನೋವಿಗೆ ಒಳಗಾಗಿದ್ದ ಗರ್ನಿ, 13ನೇ ಅವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತ ನೈಟ್‌ ರೈಡರ್ಸ್‌ ತಂಡವನ್ನು ಪ್ರತಿನಿಧಿಸುವ ಅವಕಾಶದಿಂದ ವಂಚಿತರಾಗಿದ್ದರು. ಗಾಯದ ಸಮಸ್ಯೆಯಿಂದ ಸಂಪೂರ್ಣ ಗುಣಮುಖರಾಗದ ಹಿನ್ನೆಲೆಯಲ್ಲಿ 34 ವರ್ಷದ ಗರ್ನಿ ಇದೀಗ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

ಗರ್ನಿ ಮೇ 2014ರಲ್ಲಿ ಸ್ಕಾಟ್‌ಲ್ಯಾಂಡ್ ವಿರುದ್ದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇಂಗ್ಲೆಂಡ್‌ ಪರ 10 ಏಕದಿನ, 2 ಟಿ20 ಪಂದ್ಯಗಳನ್ನು ಆಡಿದ್ದ ಗರ್ನಿ, ಐಪಿಎಲ್‌ ಸೇರಿದಂತೆ ಬಹುತೇಕ ಎಲ್ಲಾ ಪ್ರಮುಖ ಟಿ20 ಲೀಗ್‌ಗಳಲ್ಲಿ ಆಡಿದ್ದರು. ಹ್ಯಾರಿ ಗರ್ನೆ ಬಿಗ್‌ ಬ್ಯಾಶ್ ಲೀಗ್‌ನಲ್ಲಿ ಮೆಲ್ಬರ್ನ್‌ ರೆನೆಗೇಡ್ಸ್‌ ಚಾಂಪಿಯನ್ ತಂಡದ ಸದಸ್ಯರಾಗಿದ್ದರು. ಇನ್ನು ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬಾರ್ಬಡಸ್‌ ಟ್ರಿಡೆಂಟ್ಸ್‌ ತಂಡವನ್ನು ಪ್ರತಿನಿಧಿಸಿದ್ದರು. 

ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ ಬಳಿಕ ಬಿ ಜೆ ವ್ಯಾಟ್ಲಿಂಗ್‌ ಕ್ರಿಕೆಟ್‌ಗೆ ಗುಡ್‌ಬೈ

2019ನೇ ಸಾಲಿನ ಐಪಿಎಲ್‌ ಟೂರ್ನಿಯಲ್ಲಿ ಕೆಕೆಆರ್ ಪರ 8 ಪಂದ್ಯಗಳನ್ನಾಡಿ 7 ವಿಕೆಟ್ ಕಬಳಿಸಿದ್ದರು. ವೃತ್ತಿಜೀವನದಲ್ಲಿ ಹ್ಯಾರಿ ಗರ್ನಿ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಒಟ್ಟಾರೆಯಾಗಿ 614 ವಿಕೆಟ್ ಕಬಳಿಸಿ ಮಿಂಚಿದ್ದರು.