Asianet Suvarna News Asianet Suvarna News

Ind vs WI: ಸೂರ್ಯಕುಮಾರ್ ಯಾದವ್ ಕುರಿತು ಜೋಫ್ರಾ ಆರ್ಚರ್ ಟ್ವೀಟ್ ವೈರಲ್‌..!

* ವೆಸ್ಟ್ ಇಂಡೀಸ್ ವಿರುದ್ದ ಅಕ್ಷರಶಃ ಅಬ್ಬರಿಸಿದ ಸೂರ್ಯಕುಮಾರ್ ಯಾದವ್

* ಟೀಂ ಇಂಡಿಯಾ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ

* ಜೋಫ್ರಾ ಆರ್ಚರ್‌ 'ಈ ಹುಡುಗ ಬ್ಯಾಟ್ ಮಾಡಬಲ್ಲ' ಎನ್ನುವ ಟ್ವೀಟ್ ವೈರಲ್ 

England Pacer Jofra Archer cryptic tweet on Suryakumar Yadav knock against West Indies goes viral kvn
Author
Bengaluru, First Published Feb 21, 2022, 6:11 PM IST

ಬೆಂಗಳೂರು(ಫೆ.21): ಐಪಿಎಲ್ ಮೆಗಾ ಹರಾಜಿನಲ್ಲಿ (IPL Mega Auction) ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಂಡಿರುವ ಜೋಫ್ರಾ ಆರ್ಚರ್ (Jofra Archer), ಇತ್ತೀಚೆಗಷ್ಟೇ ಮುಕ್ತಾಯವಾದ ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಿನ ಟಿ20 ಸರಣಿಯನ್ನು ಗಮನವಿಟ್ಟು ನೋಡಿದಂತೆ ಕಾಣುತ್ತಿದೆ. ಟಿ20 ಕ್ರಿಕೆಟ್‌ನಲ್ಲಿ ಎರಡು ಬಾರಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿರುವ ವೆಸ್ಟ್ ಇಂಡೀಸ್ ಎದುರು ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಇದರ ಬೆನ್ನಲ್ಲೇ ಇಂಗ್ಲೆಂಡ್ ಕ್ರಿಕೆಟ್ ತಂಡದ ವೇಗದ ಬೌಲರ್ ಜೋಫ್ರಾ ಆರ್ಚರ್ ಮಾಡಿರುವ ಒಂದು ಟ್ವೀಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

ಹೌದು, ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ವೆಸ್ಟ್ ಇಂಡೀಸ್ ಎದುರಿನ 3 ಪಂದ್ಯಗಳ ಟಿ20 ಸರಣಿಯನ್ನು ಭಾರತ ವೈಟ್‌ವಾಶ್ ಮಾಡಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ (Suryakumar Yadav) ಮೂರನೇ ಟಿ20 ಪಂದ್ಯದಲ್ಲಿ ಸಮಯೋಚಿತ ಅರ್ಧಶತಕ ಬಾರಿಸುವ ಮೂಲಕ ಟೀಂ ಇಂಡಿಯಾ (Team India) ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಇದರ ಬೆನ್ನಲ್ಲೇ ಇಂಗ್ಲೆಂಡ್ ವೇಗಿ ಆರ್ಚರ್‌ ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಮಾಡಿದ ಒಂದು ಟ್ವೀಟ್ ಈಗ ಸಾಕಷ್ಟು ವೈರಲ್ ಆಗಲಾರಂಭಿಸಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ವಿಂಡೀಸ್ ಎದುರಿನ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುತ್ತಿದ್ದಂತೆಯೇ ಗೂಡಾರ್ಥ ಹೊಂದಿರುವ ರೀತಿಯಲ್ಲಿ ಟ್ವೀಟ್ ಮಾಡಿರುವ ಜೋಫ್ರಾ ಆರ್ಚರ್‌ 'ಈ ಹುಡುಗ ಬ್ಯಾಟ್ ಮಾಡಬಲ್ಲ' ಎಂದು ಟ್ವೀಟ್ ಮಾಡಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ ಒಂದು ಹಂತದಲ್ಲಿ 13.5 ಓವರ್‌ಗಳ ಅಂತ್ಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 93 ರನ್ ಬಾರಿಸಿತ್ತು. ಇದಾದ ಬಳಿಕ ಸ್ಪೋಟಕ ಬ್ಯಾಟಿಂಗ್ ನಡೆಸಿದ ಸೂರ್ಯಕುಮಾರ್ ಯಾದವ್ ಕೇವಲ 31 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ 7 ಮುಗಿಲೆತ್ತರದ ಸಿಕ್ಸರ್‌ಗಳ ನೆರವಿನಿಂದ ಆಕರ್ಷಕ 65 ರನ್‌ ಬಾರಿಸಿದರು. ಸೂರ್ಯನಿಗೆ ಉತ್ತಮ ಸಾಥ್ ನೀಡಿದ ಆಲ್ರೌಂಡರ್ ವೆಂಕಟೇಶ್ ಅಯ್ಯರ್ (Venkatesh Iyer) ಕೆವಲ 19 ಎಸೆತಗಳಲ್ಲಿ ಅಜೇಯ 35 ರನ್ ಬಾರಿಸಿದರು. ಪರಿಣಾಮ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 184 ರನ್ ಬಾರಿಸಿತ್ತು.

ICC T20 Rankings: 6 ವರ್ಷಗಳ ಬಳಿಕ ಮತ್ತೆ ನಂ.1 ಸ್ಥಾನಕ್ಕೆ ಲಗ್ಗೆಯಿಟ್ಟ ಟೀಂ ಇಂಡಿಯಾ..!

ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ನೀಡಿಯೇ ಜೋಫ್ರಾ ಆರ್ಚರ್ ಈ ರೀತಿ, ಈ ಹುಡುಗ ಬ್ಯಾಟ್ ಮಾಡಬಲ್ಲ ಎಂದು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ನಡೆದ 15ನೇ ಆವೃತ್ತಿಯ ಐಪಿಎಲ್ ಆಟಗಾರರ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ಫ್ರಾಂಚೈಸಿಯು 8 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿದೆ. ಮೊಣಕೈ ಗಾಯಕ್ಕೆ ತುತ್ತಾಗಿ ಚೇತರಿಸಿಕೊಳ್ಳುತ್ತಿರುವ ಜೋಫ್ರಾ ಆರ್ಚರ್, 2022ನೇ ಸಾಲಿನ ಐಪಿಎಲ್‌ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಹೀಗಿದ್ದೂ ಮುಂಬೈ ಫ್ರಾಂಚೈಸಿಯು ಜೋಫ್ರಾ ಆರ್ಚರ್ ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. 2023ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯಲ್ಲಿ ಜೋಫ್ರಾ ಆರ್ಚರ್ ಹಾಗೂ ಜಸ್ಪ್ರೀತ್ ಬುಮ್ರಾ (Jasprit Bumrah) ಜೋಡಿ ಎದುರಾಳಿ ಪಡೆಯನ್ನು ಕಾಡಲು ಸಜ್ಜಾಗಲಿದ್ದಾರೆ. 

Follow Us:
Download App:
  • android
  • ios