ಇಂಗ್ಲೆಂಡ್ ಹಾಗೂ ಭಾರತ ನಡುವಿನ 5ನೇ ಟೆಸ್ಟ್ ಪಂದ್ಯ ಬ್ಯಾಟಿಂಗ್ ಬಳಿಕ ಬೌಲಿಂಗ್‌ನಲ್ಲಿ ಮಿಂಚಿದ ಭಾರತ ಮಳೆಯಿಂದ ಪಂದ್ಯ ತಾತ್ಕಾಲಿಕ ಸ್ಥಗಿತ

ಬರ್ಮಿಂಗ್‌ಹ್ಯಾಮ್(ಜು.02): ಇಂಗ್ಲೆಂಡ್ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬಿಗಿ ಹಿಡಿತ ಸಾಧಿಸಿದೆ. ಬ್ಯಾಟಿಂಗ್ ಬಳಿಕ ಬೌಲಿಂಗ್‌ನಲ್ಲಿ ಮಿಂಚಿದ ಟೀಂ ಇಂಡಿಯಾಗೆ ನಿರಾಸೆಯಾಗಿದೆ. ಕಾರಣ ಎರಡನೇ ದಿನದಾಟದಲ್ಲಿ ಮಳೆ ಅಬ್ಬರದಿಂದ ಪಂದ್ಯ ತಾತ್ಕಾಲಿಕ ಸ್ಥಗಿತಗೊಂಡಿದೆ.

ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 416ರನ್‌ಗೆ ಆಲೌಟ್ ಆಯಿತು. ಉದಕ್ಕುತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಆರಂಭದಲ್ಲೇ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲಿಕಿತ್ತು. ಬ್ಯಾಟಿಂಗ್‌ನಲ್ಲಿ ದಾಖಲೆ ಬರೆದ ನಾಯಕ ಜಸ್ಪ್ರೀತ್ ಬುಮ್ರಾ ಪ್ರಮುಖ 2 ವಿಕೆಟ್ ಕಬಳಿಸಿ ಮಿಂಚಿದರು. ಅಲೆಕ್ಸ್ ಲೀಸ್ ಕೇವಲ 6 ರನ್ ಸಿಡಿಸಿ ಔಟಾದರೆ, ಜ್ಯಾಕ್ ಕ್ಲಾವ್ಲೆ 9 ರನ್ ಸಿಡಿಸಿ ಔಟಾದರು.

ಲಾರಾ, ಬೈಲಿ ದಾಖಲೆ ಮುರಿದ ಜಸ್ಪ್ರೀತ್ ಬುಮ್ರಾ, ಒಂದೇ ಓವರ್‌ನಲ್ಲಿ 35 ರನ್!

ಬುಮ್ರಾ ಮಾರಕ ದಾಳಿಗೆ ಇಂಗ್ಲೆಂಡ್ ಕುಸಿತ ಕಂಡಿತು. ಸಂಘಟಿತ ಹೋರಾಟ ಆರಂಭಿಸಿದ ಟೀಂ ಇಂಡಿಯಾ ಮತ್ತಷ್ಟು ವಿಕೆಟ್ ಕಬಳಿಸಲು ಮುಂದಾಗಿತ್ತು. ಆದರೆ ಮಳೆ ಅವಕಾಶ ನೀಡಲಿಲ್ಲ. 6.3 ಓವರ್‌ಗಳಲ್ಲಿ ಇಂಗ್ಲೆಂಡ್ 2 ವಿಕೆಟ್ ನಷ್ಟಕ್ಕೆ 31 ರನ್ ಸಿಡಿಸಿತು. ಈ ವೇಳೆ ಸುರಿದ ಮಳೆಯಿಂದ ಪಂದ್ಯ ಸ್ಥಗಿತಗೊಂಡಿತು. ಒಲಿ ಪೋಪ್ ಅಜೇಯ 6 ಹಾಗೂ ಜೋ ರೂಟ್ ಅಜೇಯ 2 ರನ್ ಸಿಡಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. 

ಸದ್ಯ ಮಳೆ ನಿಂತಿದೆ. ಆದರೆ ಮೈದಾನ ಸಂಪೂರ್ಣ ಒದ್ದೆಯಾಗಿರುವ ಕಾರಣ ಪಂದ್ಯ ಆರಂಭ ವಿಳಂಭವಾಗಲಿದೆ. ಕ್ರೀಡಾಂಗಣದ ಸಿಬ್ಬಂದಿ ಮೈದಾನ ಸಜ್ಜುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಭಾರತ ಮೊದಲ ಇನ್ನಿಂಗ್ಸ್
ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ದಿಟ್ಟ ಹೋರಾಟ ನೀಡಿದೆ ಶುಭಮನ್ ಗಿಲ್, ಚೇತೇಶ್ವರ ಪೂಜಾರ, ಹನುಮಾ ವಿಹಾರಿ , ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದರು. 98 ರನ್‌ಗಳಿಗೆ ಟೀಂ ಇಂಡಿಯಾ ಪ್ರಮುಕ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ರಿಷಬ್ ಪಂತ್ ಹಾಗೂ ರವೀಂದ್ರ ಜಡೇಜಾ ಜೊತೆಯಾಟ ಇಂಗ್ಲೆಂಡ್ ಲೆಕ್ಕಾಚಾರ ಉಲ್ಟಾ ಮಾಡಿತು.

Ind vs Eng ಆಕರ್ಷಕ ಶತಕ ಚಚ್ಚಿ ಟೀಂ ಇಂಡಿಯಾಗೆ ಆಸರೆಯಾದ ಜಡೇಜಾ..!

ರಿಷಬ್ ಪಂತ್ ಹಾಗೂ ರವೀಂದ್ರ ಜಡೇಜಾ ಅಬ್ಬರದ ಬ್ಯಾಟಿಂಗ್ ಮೂಲಕ ಸೆಂಚುರಿ ಸಿಡಿಸಿದರು. ರಿಷಬ್ ಪಂತ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಪಂತ್ 111 ಎಸೆತದಲ್ಲಿ 146 ರನ್ ಸಿಡಿಸಿದರು. ಇತ್ತ ರವೀಂದ್ರ ಜಡೇಜಾ 194 ಎಸೆತದಲ್ಲಿ 104 ರನ್ ಸಿಡಿಸಿದರು. ಅಂತಿಮ ಹಂತದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಒಂದೇ ಓವರ್‌ನಲ್ಲಿ ವೈಡ್ ಹಾಗೂ ಬೋನಸ್ ರನ್ ಸಹಿತ 35 ರನ್ ಸಿಡಿಸಿದರು.

ಬುಮ್ರಾ 16 ಎಸೆತದಲ್ಲಿ ಅಜೇಯ 31 ರನ್ ಸಿಡಿಸಿದರು ಈ ಮೂಲಕ ಟೀಂ ಇಂಡಿಯಾ 416 ರನ್‌ಗಳಿಗೆ ಆಲೌಟ್ ಆಯಿತು. ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದ್ದ ಟೀಂ ಇಂಡಿಯಾ ಬೃಹತ್ ಮೊತ್ತ ಪೇರಿಸಿ ಇಂಗ್ಲೆಂಡ್ ತಂಡವನ್ನೇ ಸಂಕಷ್ಟಕ್ಕೆ ಸಿಲುಕಿಸಿತು.