ಮ್ಯಾಂಚೆಸ್ಟರ್(ಆ.29): ಪಾಕಿಸ್ತಾನ-ಇಂಗ್ಲೆಂಡ್ ನಡುವಿನಿ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಮೊದಲ ಟಿ2 ಪಂದ್ಯದಲ್ಲಿ ಕೇವಲ 16.1 ಓವರ್‌ಗಳು ಮಾತ್ರ ಬೌಲಿಂಗ್ ಮಾಡಲು ಸಾಧ್ಯವಾಯಿತು. ಬಳಿಕ ನಿರಂತರ ಸುರಿದ ಮಳೆಯಿಂದಾಗಿ ಪಂದ್ಯ ರದ್ದು ಮಾಡಲು ತೀರ್ಮಾನಿಸಲಾಯಿತು.

ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿತು. ನಾಯಕ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡಿದ ಇಮಾದ್ ವಾಸೀಂ ಪಂದ್ಯದ ಮೊದಲ ಓವರ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಜಾನಿ ಬೇರ್‌ಸ್ಟೋವ್‌ ಅವರನ್ನು ಪೆವಿಲಿಯನ್ನಿಗೆ ಅಟ್ಟಿದರು. ಆ ಬಳಿಕ ಟಾಮ್ ಬಾಂಟನ್ ಅವರನ್ನು ಕೂಡಿಕೊಂಡ ಡೇವಿಡ್ ಮಲಾನ್ ಅರ್ಧಶತಕದ ಜತೆಯಾಟವಾಡಿದರು. ಎಚ್ಚರಿಕೆಯ ಆಟವಾಡುತ್ತಿದ್ದ ಮಲಾನ್ 23 ಎಸೆತಗಳಲ್ಲಿ 23 ರನ್‌ ಗಳಿಸಿದ್ದಾಗ ಇಲ್ಲದ ರನ್ ಕದಿಯಲು ಹೋಗಿ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಸ್ಫೋಟಕ ಬ್ಯಾಟಿಂಗ್ ನಡೆಸಿದ ಟಾಮ್ ಬಾಂಟನ್ ಕೇವಲ 42 ಎಸೆತಗಲ್ಲಿ 4 ಬೌಂಡರಿ ಹಾಗೂ 5 ಮನಮೋಹಕ ಸಿಕ್ಸರ್‌ಗಳ ನೆರವಿನಿಂದ 71 ರನ್ ಗಳಿಸಿ ಶಾದಾಬ್‌ ಖಾನ್‌ಗೆ ವಿಕೆಟ್ ಒಪ್ಪಿಸಿದರು.

IPL 2020: ಡೆಲ್ಲಿ ಕ್ಯಾಪಿಟಲ್ಸ್‌ ತಂಡದಿಂದ ಹೊರಬಿದ್ದ ಸ್ಫೋಟಕ ಬ್ಯಾಟ್ಸ್‌ಮನ್ ಜೇಸನ್ ರಾಯ್

ದಿಢೀರ್ ಕುಸಿದ ಮಧ್ಯಮ ಕ್ರಮಾಂಕ: ಒಂದು ಹಂತದಲ್ಲಿ 108 ರನ್‌ಗಳವರೆಗೂ ಕೇವಲ 2 ವಿಕೆಟ್ ಕಳೆದುಕೊಂಡು ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದ್ದ ಇಂಗ್ಲೆಂಡ್ ತಂಡ ಟಾಮ್ ಬಾಂಟನ್ ಅವರ ವಿಕೆಟ್ ಪತನದ ಬಳಿಕ ನಾಟಕೀಯ ಕುಸಿತ ಕಂಡಿತು. ತಂಡ 123 ರನ್‌ ಗಳಿಸುವಷ್ಟರಲ್ಲಿ ಮಧ್ಯಮ ಕ್ರಮಾಂಕದ 4 ವಿಕೆಟ್ ಕಳೆದುಕೊಂಡಿತು. ನಾಯಕ ಮಾರ್ಗನ್ ಆಟ ಕೇವಲ 14 ರನ್‌ಗಳಿಸಿದರೆ, ಮೋಯಿನ್ ಅಲಿ ಬ್ಯಾಟಿಂಗ್ ಕೇವಲ 8 ರನ್‌ಗಳಿಗೆ ಸೀಮಿತವಾಯಿತು. ಆದರೆ 16 ಓವರ್ ಮುಕ್ತಾಯದ ಬಳಿಕ ಸುರಿದ ಭಾರೀ ಮಳೆಯಿಂದಾಗಿ ಪಂದ್ಯವನ್ನು ರದ್ದು ಮಾಡಲಾಯಿತು.

ಇದೀಗ ಎರಡನೇ ಪಂದ್ಯವು ಆಗಸ್ಟ್ 30ರಂದು ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫೋರ್ಡ್‌ ಮೈದಾನದಲ್ಲಿ ನಡೆಯಲಿದೆ. ಇದಾದ ನಂತರ ಮೂರನೇ ಹಾಗೂ ಕೊನೆಯ ಪಂದ್ಯ ಸೆಪ್ಟೆಂಬರ್ 01ರಂದು ನಡೆಯಲಿದೆ.