ಭಾರತ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದುಕೊಂಡಿದೆ. ಇತ್ತ ಟೀಂ ಇಂಡಿಯಾಗ ಪರ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕಣಕ್ಕಿಳಿದಿದ್ದಾರೆ. ಮೂರು ವರ್ಷ ಬಳಿಕ ಬುಮ್ರಾ ಏಕದಿನದಲ್ಲಿ ಸ್ಥಾನ ಪಡೆದಿದ್ದಾರೆ

ಎಡ್ಜ್‌ಬಾಸ್ಟನ್ (ಜು.11) ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಸೋತ ಭಾರತ ಇದೀಗ ಏಕದಿನ ಮೂಲಕ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮರಳಿದ್ದಾರೆ. ವಿಶೇಷ ಅಂದರೆ 2023ರ ವಿಶ್ವಕಪ್ ಬಳಿಕ ಇದೇ ಮೊದಲ ಬಾರಿಗೆ ಜಸ್ಪ್ರೀತ್ ಬುಮ್ರಾ ಏಕದಿನ ಮಾದರಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಭಾರತ ನಾಲ್ವರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್ ಮೂಲಕ ಕಣಕ್ಕಿಳಿದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಟೀಂ ಇಂಡಿಯಾ ಪ್ಲೇಯಿಂಗ್ 11

ರೋಹಿತ್ ಶರ್ಮಾ, ಶುಬಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ವಾಶಿಂಗ್ಟನ್ ಸುಂದರ್, ಶಿವಂ ದುಬೆ, ಅಕ್ಸರ್ ಪಟೇಲ್, ಗುರ್ನೂರ್ ಬ್ರಾರ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ

ಇಂಗ್ಲೆಂಡ್ ಪ್ಲೇಯಿಂಗ್ 11

ಜೇಕಬ್ ಬೆಥಲ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್, ಸ್ಯಾಮ್ ಕುರನ್, ವಿಲ್ ಜ್ಯಾಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಜೋಶ್ ಟಂಗ್, ಆದಿಲ್ ರಶೀದ್

ಏಕದಿನ ಮಾದರಿಯಲ್ಲೂ ಹಾರ್ದಿಕ್ ಪಾಂಡ್ಯ ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾಗೆ ಬಲ ತುಂಬಿದ್ದರು.ಆದರೆ ಪಾಂಡ್ಯ ಅನುಪಸ್ಥಿತಿ ಟೀಂ ಇಂಡಿಯಾ ಮಧ್ಯಕ್ರಮಾಂಕ ಸಮಸ್ಯೆ ಹೆಚ್ಚಿಸಿದೆ. ಶಿವಂ ದುಬೆ ಪಾಂಡ್ಯ ಸ್ಥಾನ ತುಂಬಬಲ್ಲ ಭರವಸೆ ಮೂಡಿಸಿಲ್ಲ.ಇತ್ತ ಎಡ್ಜ್‌ಬಾಸ್ಟ್‌ನಲ್ಲಿ ನಡೆದ ಕಳೆದ 7 ಪಂದ್ಯಗಳಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿದೆ.

ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ಮೊದಲು 5 ಟಿ20 ಪಂದ್ಯಗಳ ಸರಣಿ ಆಡಿತ್ತು. ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಇನ್ನುಳಿದ ನಾಲ್ಕು ಪಂದ್ಯದಲ್ಲಿ ಭಾರತ ಮುಗ್ಗರಿಸಿತ್ತು. 0-4 ಅಂತರದಿಂದ ಸರಣಿ ಸೋತು ಮುಖಭಂಗ ಅನುಭವಿಸಿತ್ತು. ಟೀಂ ಇಂಡಿಯಾ ಹೀನಾಯ ಪ್ರದರ್ಶನ ಭಾರಿ ಟೀಕೆಗೆ ಗುರಿಯಾಗಿತ್ತು.