ನಾಗ್ಪುರ(ನ.10): ಬಾಂಗ್ಲಾದೇಶ ವಿರುದ್ದದ 3ನೇ ಹಾಗೂ ಅಂತಿಮ ಟಿ20 ಪಂದ್ಯ ಟೀಂ ಇಂಡಿಯಾ ಪಾಲಿಗೆ ಮಹತ್ವದ್ದಾಗಿದೆ. ಸರಣಿ ಗೆಲುವಿನ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಆಯ್ಕೆಗೆ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಟಾಸ್ ಬಳಿಕ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ನೋಡಿದ ಅಭಿಮಾನಿಗಳು ನಾಯಕ ರೋಹಿತ್ ಶರ್ಮಾ ಹಾಗೂ ಟೀಂ ಮ್ಯಾನೇಜ್ಮೆಂಟ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್, ಭಾರತ ತಂಡದಲ್ಲಿ ಒಂದು ಬದಲಾವಣೆ!

ಕಳೆದೆರಡು ಪಂದ್ಯದಲ್ಲಿ ರಿಷಭ್ ಪಂತ್ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್‌ನಲ್ಲಿ ಕಳಪೆಯಾಗಿದ್ದಾರೆ. ತಂಡದಲ್ಲಿ ಅತ್ಯುತ್ತಮ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಿಲ್ಲ ಯಾಕೆ ಎಂದು ಅಭಿಮಾನಿಗಳು ಪ್ರಶ್ನಿಸಿದ್ದಾರೆ. ದೇಸಿ ಕ್ರಿಕೆಟ್‌ನಲ್ಲಿ ದಾಖಲೆಯ ದ್ವಿಶತಕ ಸೇರಿದಂತೆ ಉತ್ತಮ ಪ್ರದರ್ಶನ ನೀಡಿದ್ದ ಸಂಜು ಸ್ಯಾಮ್ಸನ್‌, ಬಾಂಗ್ಲಾ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಪಂತ್‌ಗೆ ಅವಕಾಶ ನೀಡೋ ನಿಟ್ಟಿನಲ್ಲಿ ಸ್ಯಾಮ್ಸನ್‌ ಕಡೆಗಣಿಸಲಾಗಿದೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹೋರಾಟ ಶುರುಮಾಡಿದ್ದಾರೆ.

ಇದನ್ನೂ ಓದಿ: ಟಿ20 ವಿಶ್ವಕಪ್; ಭವಿಷ್ಯ ನುಡಿದ ಮಾಜಿ ಕ್ರಿಕೆಟಿಗನಿಗೆ ತಿರುಗೇಟು!

ಪ್ರತಿ ಪಂದ್ಯದಲ್ಲಿ ಪಂತ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡಿಲ್ಲ. ಆದರೆ ಆಯ್ಕೆ ಸಮಿತಿ ಹಾಗೂ ತಂಡ ಪಂತ್‌ಗೆ ಹೆಚ್ಚಿನ ಅವಕಾಶಗಳು ನೀಡುತ್ತಿವೆ. ಪಂತ್‌ ಪ್ರೋತ್ಸಾಹಿಸುತ್ತಿರುವ ಬಿಸಿಸಿಐ, ಟ್ಯಾಲೆಂಟ್ ಕ್ರಿಕೆಟಿಗರನ್ನು ಕಡೆಗಣಿಸುತ್ತಿದೆ ಎಂದು ಫ್ಯಾನ್ಸ್ ಅಭಿಪ್ರಾಯ ಪಟ್ಟಿದ್ದಾರೆ.