ಆಸ್ಟ್ರೇಲಿಯಾ ವಿರುದ್ಧ ಬ್ಯಾಟಿಂಗ್ ಕ್ರಮಾಂಕ ಬದಲಾವಣೆ: ಕೊಹ್ಲಿ ಟೀಕಿಸಿದ ಫ್ಯಾನ್ಸ್!
ಆಸ್ಟ್ರೇಲಿಯಾ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ 3ರ ಬದಲು 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ. ಕೊಹ್ಲಿ ನಿರ್ಧಾರ ಟೀಕೆಗೆ ಗುರಿಯಾಗಿದ್ದು ಹೇಗೆ? ಇಲ್ಲಿದೆ
ಮುಂಬೈ(ಜ.14): ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಕಳಪೆ ಪ್ರದರ್ಶನ ನೀಡಿದೆ. ವೆಸ್ಟ್ ಇಂಡೀಸ್, ಶ್ರೀಲಂಕಾ ವಿರುದ್ಧ ಅಬ್ಬರಿಸಿದ್ದ ಭಾರತ, ಆಸೀಸ್ ವಿರುದ್ಧ ತೀವ್ರ ಹಿನ್ನಡೆ ಅನುಭವಿಸಿತು. ಟೀಂ ಇಂಡಿಯಾ ಬ್ಯಾಟಿಂಗ್ ಕ್ರಮಾಂಕದಲ್ಲಿ ಕೆಲ ಬದಲಾವಣೆ ಮಾಡಿ ಕಣಕ್ಕಿಳಿದಿತ್ತು. ನಾಯಕ ವಿರಾಟ್ ಕೊಹ್ಲಿ ನಿರ್ಧಾರ ಟೀಕೆ ಗುರಿಯಾಗಿದೆ.
ಇದನ್ನೂ ಓದಿ: INDvAUS ಮೊದಲ ಏಕದಿನ: ಕಪ್ಪು ಬಟ್ಟೆ ಧರಿಸಿದವರಿಗೆ ಪ್ರವೇಶ ನಿಷೇಧ!.
ವಾಂಖೆಡೆಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ಕ್ರಮಾಂಕದಲ್ಲಿ ಏರಿಳಿತ ಮಾಡಿತ್ತು. ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದಿದ್ದಾರೆ. ಕೆಎಲ್ ರಾಹುಲ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರೆ, ಕೊಹ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರು. ಕ್ರಮಾಂಕ ಬದಲಾಯಿಸಿದ ಕೊಹ್ಲಿ 16 ರನ್ ಸಿಡಿಸಿ ನಿರ್ಗಮಿಸಿದರು.
ಕೊಹ್ಲಿ ವೈಫಲ್ಯ ತಂಡದ ಮೇಲೆ ಪರಿಣಾಮ ಬೀರಿತು. ಭಾರತ 255 ರನ್‌ಗೆ ಆಲೌಟ್ ಆಯಿತು. ಕೊಹ್ಲಿ ಬ್ಯಾಟಿಂಗ್ ಕ್ರಮಾಂಕ ಬದಲಾವಣೆಗೆ ಅಭಿಮಾನಿಗಳು ಆಕ್ರೋಷ ವ್ಯಕ್ತಪಡಿಸಿದ್ದಾರೆ. ಬ್ಯಾಟಿಂಗ್ ಕ್ರಮಾಂಕ ಬದಲಾಯಿಸುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.