ಮುಂಬೈ(ನ.01): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಸೌತ್ ಆಫ್ರಿಕಾ ಸರಣಿ ಬಳಿಕ ವಿಶ್ರಾಂತಿಗೆ ಜಾರಿದ್ದಾರೆ. ಬಾಂಗ್ಲಾದೇಶ ವಿರುದ್ದದ ಟಿ20 ಸರಣಿಯಿಂದಲೂ ರೆಸ್ಟ್ ಪಡೆದುಕೊಂಡಿದ್ದಾರೆ. ಈ ಮೂಲಕ ಪತ್ನಿ ಅನುಷ್ಕಾ ಶರ್ಮಾ ಹಾಗೂ ಕುಟುಂಬದ ಜೊತೆ ಕಾಲಕೆಳೆಯುತ್ತಿದ್ದಾರೆ. ಈ ವೇಳೆ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ, ಕ್ಯಾಪ್ಶನ್ ನೀಡುವಂತೆ ಕೇಳಿದ್ದಾರೆ. ಆದರೆ ಕೊಹ್ಲಿ ಪೋಸ್ಟ್‌ಗೆ ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.

 

ಇದನ್ನೂ ಓದಿ: ಮಾಜಿ ವಿಕೆಟ್ ಕೀಪರ್‌ಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಕೊಟ್ಟ ಅನುಷ್ಕಾ..!

ಜಾಹೀರಾತಿಗಾಗಿ ಸ್ಟುಡಿಯೋ ಗ್ರೀನ್ ಮ್ಯಾಟ್‌ನಲ್ಲಿ ಶೂಟ್ ಮಾಡಲಾಗಿದೆ. ಶೂಟಿಂಗ್ ವೇಳೆ ಕೊಹ್ಲಿ GIF ಇಮೇಜ್‌ನ್ನು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್‌ಗೆ ಅಭಿಮಾನಿಗಳು, ಇದು ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನಿಮ್ಮ ಬ್ಯಾಟಿಂಗ್ ರೀತಿ ಇದೆ ಎಂದು ಹೆಚ್ಚಿನವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದಾದಾ ಪ್ರಸ್ತಾವನೆಗೆ ಬಾಂಗ್ಲಾ ಸಮ್ಮತಿ; ಭಾರತದಲ್ಲಿ ಮೊಟ್ಟ ಮೊದಲ ಡೇ & ನೈಟ್ ಟೆಸ್ಟ್!

ಐಪಿಎಲ್ ಟೂರ್ನಿಯ ಮಿಸ್ಟರ್ ಬೀನ್ ಎಂದು ಟ್ರೋಲ್ ಮಾಡಿದ್ದಾರೆ. ಕೊಹ್ಲಿ ಪೋಸ್ಟ್‌ಗೆ ಅಭಿಮಾನಿಗಳ ಟ್ರೋಲ್ ಇಲ್ಲಿದೆ.