ಟೆಸ್ಟ್‌ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಾಖಲೆಗೆ ಪಾತ್ರವಾದ ರೋಹಿತ್ ಶರ್ಮಾ ಪಡೆ!

ನ್ಯೂಜಿಲೆಂಡ್ ಎದುರು ಮುಂಬೈ ಟೆಸ್ಟ್ ಪಂದ್ಯ ಸೋಲುತ್ತಿದ್ದಂತೆಯೇ ಟೀಂ ಇಂಡಿಯಾ ಅತ್ಯಂತ ಕೆಟ್ಟ ದಾಖಲೆಗೆ ಪಾತ್ರವಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

First Time Since 1934 India Hit Historic Low With Series Loss Against New Zealand kvn

ಮುಂಬೈ:  ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಟಾಮ್ ಲೇಥಮ್ ನೇತೃತ್ವದ ನ್ಯೂಜಿಲೆಂಡ್ ತಂಡವು 3-0 ಅಂತರದಲ್ಲಿ ಕ್ಲೀನ್ ಸ್ವೀಪ್‌ ಮಾಡಿ ಹೊಸ ಇತಿಹಾಸ ನಿರ್ಮಿಸಿದೆ. ಮುಂಬೈ ಟೆಸ್ಟ್ ಪಂದ್ಯಕ್ಕೂ ಮೊದಲೇ ಮೊದಲೆರಡು ಪಂದ್ಯಗಳನ್ನು ಜಯಿಸುವ ಮೂಲಕ ಸರಣಿ ಕೈವಶ ಮಾಡಿಕೊಂಡಿದ್ದ ಕಿವೀಸ್ ತಂಡವು, ಇದೀಗ ವಾಂಖೇಡೆಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ 25 ರನ್ ಅಂತರದ ರೋಚಕ ಗೆಲುವು ಸಾಧಿಸುವ ಮೂಲಕ ಭಾರತವನ್ನು ವೈಟ್‌ ವಾಷ್ ಮಾಡಿದೆ..

ಇದರೊಂದಿಗೆ ನ್ಯೂಜಿಲೆಂಡ್ ತಂಡವು ಏಷ್ಯಾ ಉಪಖಂಡದಲ್ಲಿ ಮೊದಲ ಬಾರಿಗೆ ಟೆಸ್ಟ್‌ ಕ್ರಿಕೆಟ್‌ನಲ್ಲಿ ಕ್ಲೀನ್‌ಸ್ವೀಪ್ ಮಾಡಿದ ಸಾಧನೆ ಮಾಡಿದೆ. ರಿಷಭ್ ಪಂತ್ ಬ್ಯಾಟಿಂಗ್ ಮಾಡುವವರೆಗೂ ಗೆಲುವು ತೂಗುಯ್ಯಾಲೆಯ ರೀತಿಯಲ್ಲೇ ಇತ್ತು. ಆದರೆ ಪಂತ್ ವಿಕೆಟ್ ಪತನವಾಗುತ್ತಿದ್ದಂತೆಯೇ ಟೀಂ ಇಂಡಿಯಾ ಸೋಲಿನತ್ತ ಮುಖ ಮಾಡಿತು. 

ಭಾರತವನ್ನು ವೈಟ್‌ವಾಷ್ ಮಾಡಿದ ಕಿವೀಸ್; ರೋಹಿತ್ ಪಡೆಗೆ ಹೀನಾಯ ಸೋಲು

ಭಾರತ ತಂಡವು 1933-34ರಲ್ಲಿ ಮೊದಲ ಬಾರಿಗೆ ತವರಿನಲ್ಲಿ ಇಂಗ್ಲೆಂಡ್ ಎದುರು 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿತ್ತು. ಅದು ಬ್ರಿಟೀಷ್ ಕಾಲಘಟ್ಟದಲ್ಲಿ ನಡೆದಿದ್ದ ಪಂದ್ಯದಲ್ಲಿ ಭಾರತ 2-0 ಅಂತರದಲ್ಲಿ ಸೋಲು ಅನುಭವಿಸಿತ್ತು. ಸ್ವಾತಂತ್ರ್ಯ ಭಾರತದಲ್ಲಿ ಇದೇ ಮೊದಲ ಬಾರಿಗೆ ತವರಿನಲ್ಲಿ ರೋಹಿತ್ ಶರ್ಮಾ 3-0 ಅಂತರದಲ್ಲಿ ವೈಟ್‌ವಾಷ್ ಅನುಭವಿಸಿದೆ. 

ಮುಂಬೈ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಲಿಳಿದ ನ್ಯೂಜಿಲೆಂಡ್ ತಂಡವನ್ನು ಕೇವಲ 235 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿತ್ತು. ಇದಾದ ಬಳಿಕ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 263 ರನ್ ಬಾರಿಸಿ 28 ರನ್‌ಗಳ ಅಮೂಲ್ಯ ಮುನ್ನಡೆ ಪಡೆಯಿತು. ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಜಡೇಜಾ ಹಾಗೂ ಅಶ್ವಿನ್ ಮಾರಕ ದಾಳಿಗೆ ತತ್ತರಿಸಿದ ನ್ಯೂಜಿಲೆಂಡ್ ತಂಡವು 174 ರನ್‌ಗಳಿಗೆ ಸರ್ವಪತನ ಕಂಡಿತು. ಇದರೊಂದಿಗೆ ಭಾರತಕ್ಕೆ ಗೆಲ್ಲಲು ಕೇವಲ 147 ರನ್‌ಗಳ ಸಾಧಾರಣ ಗುರಿ ನೀಡಿತ್ತು. ಏಜಾಜ್ ಪಟೇಲ್ ಹಾಗೂ ಗ್ಲೆನ್ ಫಿಲಿಫ್ಸ್ ಮಾರಕ ಸ್ಪಿನ್ ದಾಳಿಗೆ ತಡಬಡಾಯಿಸಿದ ಟೀಂ ಇಂಡಿಯಾ 121 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಕಿವೀಸ್ ಎದುರು ಮೂರನೇ ಟೆಸ್ಟ್‌ನಲ್ಲೂ ಮುಖಭಂಗ ಅನುಭವಿಸಿತು.
 

Latest Videos
Follow Us:
Download App:
  • android
  • ios