ಬಾಂಗ್ಲಾ ಸರಣಿಗೆ ಧೋನಿ, ಕೊಹ್ಲಿ ಆಯ್ಕೆ ಡೌಟ್?
ನವೆಂಬರ್ 03ರಿಂದ ಆರಂಭವಾಗಲಿರುವ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಇಂದು ಟೀಂ ಇಂಡಿಯಾ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಧೋನಿ ಭವಿಷ್ಯದ ಬಗ್ಗೆ ಇಂದು ಸ್ಪಷ್ಟನೆ ಸಿಗುವ ಸಾಧ್ಯತೆಯಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ಮುಂಬೈ[ಅ.24]: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಗುರುವಾರ ಭಾರತ ತಂಡದ ಆಯ್ಕೆ ನಡೆಯಲಿದ್ದು, ಎಲ್ಲರ ಗಮನ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರತ್ತ ಕೇಂದ್ರೀಕರಿಸಿದೆ.
ಟೀಂ ಇಂಡಿಯಾ ಎದುರಿನ ಟಿ20 ಸರಣಿಗೆ ಬಾಂಗ್ಲಾದೇಶ ತಂಡ ಪ್ರಕಟ
ಇಂಗ್ಲೆಂಡ್‌ನಲ್ಲಿ ನಡೆದ 2019ರ ಐಸಿಸಿ ಏಕದಿನ ವಿಶ್ವಕಪ್ ಸೆಮಿಫೈನಲ್ ಬಳಿಕ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿಲ್ಲ. ಈ ಸರಣಿಗೆ ಸ್ಥಾನ ಸಿಗಲಿದೆಯೇ ಎನ್ನುವ ಕುತೂಹಲವಿದೆ. ಮೂಲಗಳ ಪ್ರಕಾರ, ಧೋನಿಯನ್ನು ಆಯ್ಕೆ ಮಾಡುವುದಿಲ್ಲ ಎನ್ನಲಾಗಿದ್ದು, ರಿಷಭ್ ಪಂತ್‌ಗೆ ಮತ್ತೊಂದು ಅವಕಾಶ ಸಿಗುವ ನಿರೀಕ್ಷೆ ಇದೆ.
ಟೀಂ ಇಂಡಿಯಾ ಕ್ರಿಕೆಟಿಗ to ಬಿಸಿಸಿಐ ಅಧ್ಯಕ್ಷ; ಗಂಗೂಲಿ ಹೋರಾಟದ ಹಾದಿ!
ಸಂಜು ಸ್ಯಾಮ್ಸನ್‌ರಿಂದ ಭಾರೀ ಪೈಪೋಟಿ ಇದ್ದರೂ, ಪಂತ್‌ರನ್ನೇ ಆಯ್ಕೆ ಮಾಡಲು ಎಂ.ಎಸ್.ಕೆ.ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ನಿರ್ಧರಿಸಿದೆ ಎನ್ನಲಾಗಿದೆ. ಆದರೆ ತಂಡದ ಆಡಳಿತದ ವಾದವೇನು ಎನ್ನುವುದು ನಿರೀಕ್ಷೆ ಹುಟ್ಟಿಸಿದೆ.
ಮಾಧ್ಯಮಗಳ ವರದಿ ಪ್ರಕಾರ ವಿರಾಟ್ ಕೊಹ್ಲಿ, ಟಿ20 ಸರಣಿಗೆ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ. ಕೊಹ್ಲಿ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದು ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ತಂಡದ ಫಿಟ್ನೆಸ್ ಟ್ರೈನರ್ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ಕೆಲ ಮೂಲಗಳ ಪ್ರಕಾರ, ಕೊಹ್ಲಿ ಟಿ20 ಸರಣಿ ಆಡಲು ಇಚ್ಛಿಸಿದ್ದಾರೆ ಎಂದು ಹೇಳಲಾಗಿದೆ.
INDvSA ಟೆಸ್ಟ್ ಸರಣಿಯಲ್ಲಿ ನಿರ್ಮಾಣವಾಯ್ತು ಹಲವು ದಾಖಲೆ!
ಟೆಸ್ಟ್ ಸರಣಿಗೂ ತಂಡ: ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿಯ ಕೊನೆ ಸಭೆ ಇದಾಗಿದ್ದು, 2 ಪಂದ್ಯಗಳ ಟೆಸ್ಟ್ ಸರಣಿಗೂ ತಂಡದ ಆಯ್ಕೆ ನಡೆಯಲಿದೆ. ಬಹುತೇಕ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ ತಂಡವನ್ನೇ ಉಳಿಸಿಕೊಳ್ಳುವ ನಿರೀಕ್ಷೆ ಇದೆ. ವೃದ್ಧಿಮಾನ್ ಸಾಹ ಕೈಬೆರಳಿಗೆ ಗಾಯ ಮಾಡಿಕೊಂಡಿದ್ದು ಅವರು ಫಿಟ್ ಆಗಲಿದ್ದಾರೆಯೇ ಎನ್ನುವ ಪ್ರಶ್ನೆ ಇದೆ. ವೇಗಿ ಜಸ್‌ಪ್ರೀತ್ ಬುಮ್ರಾ ಸಹ ತಂಡಕ್ಕೆ ಮರಳಲಿದ್ದಾರೆ ಎನ್ನಲಾಗಿದೆ.