#BreakingNews: ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ: ಧೋನಿಗಿಲ್ಲ ಸ್ಥಾನ..!
ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ವೃತ್ತಿ ಬದುಕು ಮುಗಿಯಿತಾ..? ಹೀಗೊಂದು ಅನುಮಾನ ಇನ್ನಷ್ಟು ಬಲವಾಗತೊಡಗಿದೆ. ಯಾಕೆಂದರೆ ಬಿಸಿಸಿಐ ಕೇಂದ್ರ ಗುತ್ತಿಗೆಯಿಂದ ಧೋನಿ ಹೊರಬಿದ್ದಿದ್ದಾರೆ. ಕೇಂದ್ರ ಗುತ್ತಿಗೆಯಲ್ಲಿ ಸ್ಥಾನಗಿಟ್ಟಿಸಿರುವ ಆಟಗಾರರ ವಿವರ ಇಲ್ಲಿದೆ ನೋಡಿ...
ಮುಂಬೈ(ಜ.16): 2019-20ನೇ ಸಾಲಿನ ಬಿಸಿಸಿಐ ಕೇಂದ್ರ ಗುತ್ತಿಗೆಯಲ್ಲಿ 27 ಆಟಗಾರರನ್ನು ಸ್ಥಾನ ಪಡೆದಿದ್ದು, ಇದೇ ಮೊದಲ ಬಾರಿಗೆ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಬಿಸಿಸಿಐ ಕಾಂಟ್ರ್ಯಾಕ್ಟ್‌ನಿಂದ ಹೊರಬಿದ್ದಿದ್ದಾರೆ.
ಕ್ರಿಕೆಟಿಂದ ಧೋನಿ ದೂರ ಇರುವುದೇಕೆ: ಗವಾಸ್ಕರ್ ಪ್ರಶ್ನೆ
2019ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಬಳಿಕ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದಾರೆ. 2018-19ನೇ ಸಾಲಿನ ಸೆಂಟ್ರಲ್ ಕಾಂಟ್ರ್ಯಾಕ್ಟ್‌ನಲ್ಲಿ ಧೋನಿ 'ಎ' ಗ್ರೇಡ್ ಪಡೆದಿದ್ದರು. ಇದೀಗ ಧೋನಿ ಬಿಸಿಸಿಐ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಸ್ಥಾನಗಿಟ್ಟಿಸಲು ವಿಫಲವಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇದರ ಜತೆಗೆ ಧೋನಿ ಕ್ರಿಕೆಟ್ ವೃತ್ತಿಜೀವನ ಮುಗಿಯಿತು ಎನ್ನುವ ಮಾತುಗಳಿಗೆ ಮತ್ತಷ್ಟು ಬಲ ಸಿಕ್ಕಂತೆ ಆಗಿದೆ.
ಆಸೀಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ..!
ಇನ್ನುಳಿದಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬುಮ್ರಾ A+ ಕಾಂಟ್ರ್ಯಾಕ್ಟ್ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
2019-20ನೇ ಸಾಲಿನ ಕೇಂದ್ರ ಗುತ್ತಿಗೆಯಲ್ಲಿ ಸ್ಥಾನ ಪಡೆದ ಆಟಗಾರರ ಪಟ್ಟಿ ಹೀಗಿದೆ:
* ಗ್ರೇಡ್ A+: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ
* ಗ್ರೇಡ್ A: ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಕೆ.ಎಲ್. ರಾಹುಲ್, ಶಿಖರ್ ಧವನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಕುಲ್ದೀಪ್ ಯಾದವ್, ರಿಷಭ್ ಪಂತ್
* ಗ್ರೇಡ್ B: ವೃದ್ದಿಮಾನ್ ಸಾಹ, ಉಮೇಶ್ ಯಾದವ್, ಯಜುವೇಂದ್ರ ಚಹಲ್, ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್‌ವಾಲ್
* ಗ್ರೇಡ್ C: ಕೇದಾರ್ ಜಾಧವ್, ನವದೀಪ್ ಸೈನಿ, ದೀಪಕ್ ಚಹಾರ್, ಮನೀಶ್ ಪಾಂಡೆ, ಹನುಮ ವಿಹಾರಿ, ಶಾರ್ದೂಲ್ ಠಾಕೂರ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್.
ಬಿಸಿಸಿಐ ಕೇಂದ್ರ ಗುತ್ತಿಗೆ ಪ್ರಕಾರ A+ ಗ್ರೇಡ್ ಹೊಂದಿದವರು ವಾರ್ಷಿಕ 7 ಕೋಟಿ ರುಪಾಯಿ ಪಡೆಯಲಿದ್ದಾರೆ. A ಗ್ರೇಡ್ ಹೊಂದಿದವರು 5 ಕೋಟಿ ರುಪಾಯಿಗಳನ್ನು ಜೇಬಿಗಿಳಿಸಿಕೊಳ್ಳಲಿದ್ದಾರೆ. ಇನ್ನು B ಗ್ರೇಡ್ ಹೊಂದಿರುವ ಆಟಗಾರರು 3 ಕೋಟಿ ರುಪಾಯಿಗಳನ್ನು ಪಡೆದರೆ, C ಗ್ರೇಡ್ ಹೊಂದಿರುವ ಆಟಗಾರರು ವಾರ್ಷಿಕ 1 ಕೋಟಿ ರುಪಾಯಿಗಳನ್ನು ಪಡೆಯಲಿದ್ದಾರೆ.
ಜನವರಿ 16ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ