Asianet Suvarna News Asianet Suvarna News

'ಆತ ಅಪರಾಧ ಮಾಡಿಲ್ಲ, ಸುಮ್ಮನೆ ಬಿಟ್ಟುಬಿಡಿ': ಕೆ ಎಲ್ ರಾಹುಲ್ ಪರ ಹರ್ಭಜನ್ ಸಿಂಗ್ ದೂಸ್ರಾ..!

ದಯನೀಯ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗ ಕೆ ಎಲ್ ರಾಹುಲ್
ಕೆ ಎಲ್ ರಾಹುಲ್‌ ವಿರುದ್ದ ಹಲವರಿಂದ ಟೀಕಾಸ್ತ್ರ
ರಾಹುಲ್ ಪರ ಬ್ಯಾಟ್ ಬೀಸಿದ ಹರ್ಭಜನ್ ಸಿಂಗ್

Former Cricketer Harbhajan Singh backs out-of-form India opener KL Rahul kvn
Author
First Published Feb 22, 2023, 3:37 PM IST

ನವದೆಹಲಿ(ಫೆ.22): ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಕೆ ಎಲ್ ರಾಹುಲ್, ಸದ್ಯ ಫಾರ್ಮ್‌ ಸಮಸ್ಯೆ ಎದುರಿಸುತ್ತಿದ್ದು, ಅವರ ಮೇಲೆ ಹಲವರು ಟೀಕಾ ಪ್ರಹಾರವನ್ನೇ ನಡೆಸುತ್ತಿದ್ದಾರೆ. ಇನ್ನು ಇದೆಲ್ಲದರ ನಡುವೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್, ಕೆ ಎಲ್ ರಾಹುಲ್‌ ಬೆಂಬಲಕ್ಕೆ ನಿಂತಿದ್ದಾರೆ.

ಇತ್ತೀಚಿಗಿನ ದಿನಗಳಲ್ಲಿ ಕೆ ಎಲ್ ರಾಹುಲ್, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದಯನೀಯ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಾ ಬಂದಿದ್ದಾರೆ. ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಯ ಮೊದಲೆರಡು ಪಂದ್ಯದಲ್ಲೂ ರಾಹುಲ್ ರನ್‌ ಬರ ಅನುಭವಿಸಿದ್ದಾರೆ. ಇದರ ಬೆನ್ನಲ್ಲೇ ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವು ಕ್ರಿಕೆಟಿಗರು, ರಾಹುಲ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಿರುವ ಬಗ್ಗೆ ಪ್ರಶ್ನೆ ಎತ್ತಿದ್ದರು. ಕೆ ಎಲ್ ರಾಹುಲ್‌ ಅವರನ್ನು ತಂಡದಿಂದ ಹೊರಗಿಟ್ಟು, ಫಾರ್ಮ್‌ನಲ್ಲಿರುವ ಶುಭ್‌ಮನ್ ಗಿಲ್ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಿ ಎನ್ನುವ ಆಗ್ರಹ ಕೂಡಾ ಜೋರಾಗಿದೆ.

ಇದೆಲ್ಲದರ ನಡುವೆ, ಈ ವಿಚಾರಕ್ಕೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಎಂಟ್ರಿ ಕೊಟ್ಟಿದ್ದಾರೆ. ಅವರೊಬ್ಬ ವಿಶ್ವದರ್ಜೆಯ ಆಟಗಾರನಾಗಿದ್ದು, ಆದಷ್ಟು ಬೇಗ ಬಲಿಷ್ಠವಾಗಿಯೇ ಕಮ್‌ಬ್ಯಾಕ್‌ ಮಾಡಲಿದ್ದಾರೆ. ಅಭಿಮಾನಿಗಳು ಅವರನ್ನು ಅವರ ಪಾಡಿಗೆ ಬಿಟ್ಟುಬಿಡಿ ಎಂದು ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಸಲಹೆ ನೀಡಿದ್ದಾರೆ.

"ನಾವು ಕೆ ಎಲ್ ರಾಹುಲ್ ಅವರನ್ನು  ಏಕಾಂಗಿಯಾಗಿ ಬಿಡಲು ಸಾಧ್ಯವಿಲ್ಲವೇ?. ಅವರೇನು ಅಪರಾಧವನ್ನು ಮಾಡಿಲ್ಲ. ಅವರು ಈಗಲೂ ಅತ್ಯುತ್ತಮ ಆಟಗಾರ. ಅವರು ಭರ್ಜರಿಯಾಗಿಯೇ ಕಮ್‌ಬ್ಯಾಕ್ ಮಾಡಲಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಾವೆಲ್ಲರೂ ಈ ರೀತಿಯ ಪರಿಸ್ಥಿತಿಯನ್ನು ಎದುರಿಸಿದ್ದೇವೆ. ಈ ವಿಚಾರದಲ್ಲಿ ಅವರೇ ಮೊದಲಿಗರೂ ಅಲ್ಲ ಕೊನೆಯವರೂ ಅಲ್ಲ. ಹೀಗಾಗಿ ಅವರು ನಮ್ಮ ತಂಡದ ಆಟಗಾರ ಹಾಗೂ ದಯವಿಟ್ಟ ಆತನಲ್ಲಿ ವಿಶ್ವಾಸವಿಡಿ ಎಂದು ಭಜ್ಜಿ ಟ್ವೀಟ್‌ ಮಾಡಿ ಕನ್ನಡಿಗ ಕೆ ಎಲ್ ರಾಹುಲ್ ಬೆಂಬಲಕ್ಕೆ ನಿಂತಿದ್ದಾರೆ.

ಕೆ ಎಲ್ ರಾಹುಲ್‌ಗೆ ಶಾಕ್ ನೀಡಿರುವ ಬಿಸಿಸಿಐ: ದಯನೀಯ ಬ್ಯಾಟಿಂಗ್‌ ವೈಫಲ್ಯ ಅನುಭವಿಸುತ್ತಿರುವ ಕೆ ಎಲ್ ರಾಹುಲ್‌ಗೆ ಇದೀಗ ಬಿಸಿಸಿಐ ಕೂಡಾ ಶಾಕ್ ನೀಡಿದ್ದು, ಭಾರತ ಟೆಸ್ಟ್ ತಂಡದ ಉಪನಾಯಕ ಪಟ್ಟದಿಂದಲೂ ಕೆಳಗಿಳಿಸಿದೆ. ಆಸ್ಟ್ರೇಲಿಯಾ ಎದುರಿನ ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಗೆ ಭಾರತ ತಂಡವನ್ನು ಪ್ರಕಟಿಸುವಾಗ ಕೆ ಎಲ್ ರಾಹುಲ್‌ಗೆ ತಂಡದಲ್ಲಿ ಸ್ಥಾನ ನೀಡಿಲಾಗಿದೆಯಾದರೂ, ಉಪನಾಯಕ ಪಟ್ಟ ನೀಡಿಲ್ಲ.

ಕೆ ಎಲ್ ರಾಹುಲ್ ಫಾರ್ಮ್‌ ಬಗ್ಗೆ ಕೊನೆಗೂ ಮೌನ ಮುರಿದ ನಾಯಕ ರೋಹಿತ್ ಶರ್ಮಾ..!

ಆಸ್ಟ್ರೇಲಿಯಾ ಎದುರು ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಕನ್ನಡಿಗ ಕೆ ಎಲ್ ರಾಹುಲ್, 71 ಎಸೆತಗಳನ್ನು ಎದುರಿಸಿ ಕೇವಲ ಒಂದು ಬೌಂಡರಿ ಸಹಿತ 20 ರನ್ ಬಾರಿಸಿ ಟೋಡ್ ಮರ್ಫಿಗೆ ವಿಕೆಟ್‌ ಒಪ್ಪಿಸಿದ್ದರು. ಇನ್ನು ಅರುಣ್‌ ಜೇಟ್ಲಿ ಮೈದಾನದಲ್ಲಿ ನಡೆದ ಎರಡನೇ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಕೆ ಎಲ್ ರಾಹುಲ್‌ 41 ಎಸೆತಗಳನ್ನು ಎದುರಿಸಿ 17 ರನ್ ಬಾರಿಸಿ ನೇಥನ್ ಲಯನ್ ಎಲ್‌ಬಿ ಬಲೆಗೆ ಬಿದ್ದರು. ಇನ್ನು ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಕೆ ಎಲ್ ರಾಹುಲ್, ಕೇವಲ ಒಂದು ರನ್‌ ಬಾರಿಸಿ ನೇಥನ್ ಲಯನ್‌ಗೆ ವಿಕೆಟ್‌ ಒಪ್ಪಿಸಿದರು.

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ನಾಲ್ಕನೇ ಟೆಸ್ಟ್‌ಗೆ ಭಾರತದ ಟೆಸ್ಟ್ ತಂಡ: 

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (WK), ಇಶಾನ್ ಕಿಶನ್ (wk), ಆರ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜೈದೇವ್‌ ಉನಾದ್ಕತ್‌.
 

Follow Us:
Download App:
  • android
  • ios