ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಸುರೇಶ್ ರೈನಾ ಇಂದು(ನ.27)ರಂದು 34ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಬೆಂಗಳೂರು(ನ.27): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಶುಕ್ರವಾರ(ನ.27) ತಮ್ಮ ಪತ್ನಿ ಪ್ರಿಯಾಂಕ ಚೌಧರಿ ಹಾಗೂ ಮಗಳು ಗ್ರೇಸಿಯಾ ರೈನಾ ಜತೆ ಮಾಲ್ಡೀವ್ಸ್‌ನಲ್ಲಿ 34ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಕಳೆದ ಆಗಸ್ಟ್ 15ರಂದು ಎಂ ಎಸ್ ಧೋನಿ ಜತೆ ಜತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಸುರೇಶ್ ರೈನಾ ವೈಯುಕ್ತಿಕ ಕಾರಣಗಳಿಂದಾಗಿ ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿದ್ದರು.
ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಪರ ತನ್ನದೇ ಆದ ಛಾಪನ್ನು ಮೂಡಿಸಿದ್ದ ರೈನಾ ಅತ್ಯುತ್ತಮ ಫೀಲ್ಡರ್ ಹಾಗೂ ತಂಡದ ನಂಬಿಕಸ್ಥ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದರು. ರೈನಾ 2011ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯರೂ ಕೂಡಾ ಹೌದು.
ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಆಡುವುದು ಅನುಮಾನ..!
ಭಾರತ ಪರ ಸುರೇಶ್ ರೈನಾ 18 ಟೆಸ್ಟ್, 226 ಏಕದಿನ ಹಾಗೂ 78 ಟಿ20 ಪಂದ್ಯಗಳನ್ನಾಡಿದ್ದು, ಒಟ್ಟಾರೆ 7988 ರನ್ ಬಾರಿಸಿದ್ದಾರೆ. ಇನ್ನು ಬೌಲಿಂಗ್ ಒಟ್ಟಾರೆ 62 ವಿಕೆಟ್ ಕಬಳಿಸಿದ್ದಾರೆ. ಸುರೇಶ್ ರೈನಾ ಹುಟ್ಟುಹಬ್ಬಕ್ಕೆ ಬಿಸಿಸಿಐ, ಸಚಿನ್ ತೆಂಡುಲ್ಕರ್, ಯುವರಾಜ್ ಸಿಂಗ್, ಗೌತಮ್ ಗಂಭೀರ್ ಸೇರಿದಂತೆ ಹಲವು ಮಂದಿ ಶುಭಕೋರಿದ್ದಾರೆ.
34 ಶಾಲೆಯ 10 ಸಾವಿರ ಮಕ್ಕಳಿಗೆ ಶಿಕ್ಷಣ, ಕುಡಿಯುವ ನೀರು ಸೌಲಭ್ಯ ವಾಗ್ದಾನ ನೀಡಿದ ಸುರೇಶ್ ರೈನಾ!
