* NCA ಮುಖ್ಯಸ್ಥರಾಗಲೂ ನಿರಾಸಕ್ತಿ ತೋರಿದ ವಿವಿಎಸ್ ಲಕ್ಷ್ಮಣ್* ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗುವುದು ಬಹುತೇಕ ಖಚಿತ* ಬಿಸಿಸಿಐ ಪ್ರಸ್ತಾಪವನ್ನು ತಿರಸ್ಕರಿಸಿದ ಲಕ್ಷ್ಮಣ್
ನವದೆಹಲಿ(ಅ.19): ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ) (National Cricket Academy) ಮುಖ್ಯ ಕೋಚ್ ಆಗಬೇಕೆಂಬ ಬಿಸಿಸಿಐ (BCCI) ಪ್ರಸ್ತಾಪವನ್ನು ಭಾರತದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ (VVS Laxman) ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ.
ಮಾಜಿ ನಾಯಕ ರಾಹುಲ್ ದ್ರಾವಿಡ್ (Rahul Dravid) ಟೀಂ ಇಂಡಿಯಾದ ಪ್ರಧಾನ ಕೋಚ್ ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿರುವ ಹಿನ್ನೆಲೆಯಲ್ಲಿ, ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯ ಕೋಚ್(ನಿರ್ದೇಶಕ) ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಔಪಚಾರಿಕ ಎಂಬಂತೆ ಭಾರತ ತಂಡದ ಹೆಡ್ ಕೋಚ್ ಸ್ಥಾನಕ್ಕೆ ಅರ್ಜಿ ಆಹ್ವಾನಿಸಿದೆ. ಆದರೆ ಮಾಧ್ಯಮಗಳ ವರದಿಯಂತೆ ಈಗಾಗಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ಕೋಚ್ ಆಗಲು ಮನವೊಲಿಸಿದ್ದಾರೆ ಎನ್ನಲಾಗಿದೆ. ದುಬೈನಲ್ಲಿ ನಡೆದ 14ನೇ ಆವೃತ್ತಿಯ ಐಪಿಎಲ್ ಫೈನಲ್ ವೇಳೆ ಸೌರವ್ ಗಂಗೂಲಿ, ಜಯ್ ಶಾ ಜೋಡಿ ರಾಹುಲ್ ದ್ರಾವಿಡ್ ಜತೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
Team India ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನ..!
ಹೀಗಾಗಿ ಈ ಸ್ಥಾನಕ್ಕೆ ದ್ರಾವಿಡ್‌ರ ಸಹ ಆಟಗಾರರಾಗಿದ್ದ ವಿವಿಎಸ್ ಲಕ್ಷ್ಮಣ್ ನೇಮಕವಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಬಿಸಿಸಿಐ ಕೂಡಾ ಲಕ್ಷ್ಮಣ್‌ರನ್ನೇ ನೇಮಿಸಲು ಮುಂದಾಗಿತ್ತು. ಆದರೆ ಹುದ್ದೆ ನಿರ್ವಹಿಸಲು ವಿವಿಎಸ್ ಲಕ್ಷ್ಮಣ್ ಆಸಕ್ತಿ ಹೊಂದಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ. ಲಕ್ಷ್ಮಣ್ ಸದ್ಯ ಸನ್ರೈಸರ್ಸ್ ಹೈದರಾಬಾದ್ ತಂಡದ ಮೆಂಟರ್ ಹಾಗೂ ರಣಜಿಯಲ್ಲಿ ಬಂಗಾಳ ತಂಡದ ಬ್ಯಾಟಿಂಗ್ ಸಲಹೆಗಾರರಾಗಿದ್ದಾರೆ. 46 ವರ್ಷದ ವಿವಿಎಸ್ ಲಕ್ಷ್ಮಣ್ ಭಾರತ ಕ್ರಿಕೆಟ್ ಕಂಡ ದಿಗ್ಗಜ ಟೆಸ್ಟ್ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎಂದು ಗುರುತಿಸಿಕೊಂಡಿದ್ದಾರೆ. ಲಕ್ಷ್ಮಣ್ ಭಾರತ ಪರ 134 ಟೆಸ್ಟ್ ಪಂದ್ಯಗಳನ್ನಾಡಿ 17 ಶತಕ ಸಹಿತ ಒಟ್ಟು 8,781 ರನ್ ಬಾರಿಸಿದ್ದಾರೆ. ಹಲವಾರು ಟೆಸ್ಟ್ ಪಂದ್ಯಗಳಲ್ಲಿ ಲಕ್ಷ್ಮಣ್ ಭಾರತ ತಂಡವನ್ನು ಸೋಲಿನ ದವಡೆಯಿಂದ ಪಾರು ಮಾಡುವಲ್ಲಿ ಯಶಸ್ವಿಯಾಗಿದ್ದರು.
ವಿಶ್ವಕಪ್ ಬಳಿಕ ಕಾಮೆಂಟ್ರಿಗೆ ರವಿಶಾಸ್ತ್ರಿ ವಾಪಸ್?
ನವದೆಹಲಿ: ಐಸಿಸಿ ಟಿ20 ವಿಶ್ವಕಪ್ (ICC T20 World Cup) ಮುಕ್ತಾಯಗೊಂಡ ಬಳಿಕ ಭಾರತ ತಂಡದ ಪ್ರಧಾನ ಕೋಚ್ ಹುದ್ದೆಯಿಂದ ಕೆಳಗಿಳಿಯಲಿರುವ ರವಿಶಾಸ್ತ್ರಿ (Ravi Shastri), ಮತ್ತೆ ವೀಕ್ಷಕ ವಿವರಣೆಗಾರರಾಗಿ ಕಾರ‍್ಯನಿರ್ವಹಿಸಲು ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಅವರು ಐಪಿಎಲ್ ತಂಡದ ಕೋಚ್ ಆಗಬಹುದು ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಮುಂದಿನ ವರ್ಷ 2 ಹೊಸ ತಂಡಗಳು ಐಪಿಎಲ್‌ಗೆ ಸೇರ್ಪಡೆಯಾಗಲಿರುವ ಕಾರಣ, ಶಾಸ್ತ್ರಿ ಯಾವುದಾದರು ಒಂದು ತಂಡದ ಪ್ರಧಾನ ಕೋಚ್ ಆಗಿ ನೇಮಕಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರವಿಶಾಸ್ತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೋಚ್ ಆಗಿಯೂ ನೇಮಕವಾಗುವ ಸಾಧ್ಯತೆಯಿದೆ ಎಂದು ಸಹಾ ವರದಿಯಾಗಿದೆ.
Good News: ಟೀಂ ಇಂಡಿಯಾ ಹೆಡ್ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆ..!
ಇದೇ ವೇಳೆ ವಿಶ್ವಕಪ್ ಬಳಿಕ ಶಾಸ್ತ್ರಿ ಜೊತೆ ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್ ಸಹ ಹೊರನಡೆಯುವುದು ಖಚಿತವಾಗಿದೆ. ಬ್ಯಾಟಿಂಗ್ ಕೋಚ್ ವಿಕ್ರಂ ರಾಥೋಡ್ ಮತ್ತೊಂದು ಅವಧಿಗೆ ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
