ಭಾರತೀಯ ಕ್ರಿಕೆಟ್‌ನಲ್ಲಿ ದಿಢೀರ್ ಬೆಳವಣಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ರಾಜೀನಾಮೆ ಸಾಧ್ಯತೆ ಸ್ಪಪ್ಟನೆ ನೀಡಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ಮುಂಬೈ(ಜೂ.01): ಐಪಿಎಲ್ 2022 ಟೂರ್ನಿ ಮುಗಿದ ಬೆನ್ನಲ್ಲೇ ಭಾರತೀಯ ಕ್ರಿಕೆಟ್‌ನಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ನನಗನಿಸಿದ್ದನ್ನು ಆರಂಭಿಸುತ್ತಿದ್ದೇನೆ. ಇದು ಹಲವರಿಗೆ ನೆರವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದು ಗಂಗೂಲಿ ರಾಜೀನಾಮೆ ನಿರ್ಧಾರವನ್ನು ಪುಷ್ಠೀಕರಿಸುವಂತಿದೆ. ಆದರೆ ಸೌರವ್ ಗಂಗೂಲಿ ರಾಜೀನಾಮೆ ಕುರಿತು ಬಿಸಿಸಿಐ ಸೆಕ್ರೆಟರಿ ಜಯ್ ಶಾ ಸ್ಪಷ್ಟನೆ ನೀಡಿದ್ದಾರೆ.

Scroll to load tweet…

1992ರಲ್ಲಿ ನನ್ನ ಕ್ರಿಕೆಟ್ ವೃತ್ತಿ ಜೀವನ ಆರಂಭಗೊಂಡಿತು. ಕರಿಯರ್ ಆರಂಭಿಸಿ 2022ಕ್ಕೆ 30 ವರ್ಷಗಳು ಸಂದಿದೆ.ಅಲ್ಲಿಂದ ಇಲ್ಲಿವರೆಗೂ ಕ್ರಿಕೆಟ್‌ ನನಗೆ ಎಲ್ಲವನ್ನೂ ಕೊಟ್ಟಿದೆ. ಎಲ್ಲಕ್ಕಿಂತ ಹೆಚ್ಚಾಗಿ ನಿಮ್ಮಂತವರ ಬೆಂಬಲವನ್ನು ನನಗೆ ಕೊಟ್ಟಿದೆ. ನನ್ನ ಕ್ರಿಕೆಟ್ ವೃತ್ತಿಬದುಕಿಗೆ ಸಹಕರಿಸಿದ, ನಾನು ಈ ಸ್ಥಾನಕ್ಕೆ ಬರಲು ಬೆಂಬಲಿಸಿದ,ಪ್ರೋತ್ಸಾಹಿಸಿದ ಪ್ರತಿಯೊಬ್ಬರಿಗೂ ಅನಂತ ಧನ್ಯವಾದಗಳು. ನಾನು ನನಗಿಸಿದ್ದನ್ನು ಆರಂಭಿಸುತ್ತಿದ್ದೇನೆ. ಇದು ಹಲವರಿಗೆ ನೆರವಾಗಲಿದೆ ಅನ್ನೋ ವಿಶ್ವಾಸ ನನಗಿದೆ.ನನ್ನ ಹೊಸ ಪ್ರಯತ್ನಕ್ಕೆ ನಿಮ್ಮಲ್ಲರ ಬೆಂಬಲ ಪ್ರೋತ್ಸಾಹ ಹೀಗೆ ಇರಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಸೌರವ್ ಗಂಗೂಲಿ ಟ್ವೀಟ್ ಮೂಲಕ ಹೇಳಿದ್ದಾರೆ.

ಸೌರವ್ ಗಂಗೂಲಿ ಟ್ವೀಟ್ ಭಾರತೀಯ ಕ್ರಿಕೆಟ್ ರಂಗದಲ್ಲಿ ಮಾತ್ರವಲ್ಲ ರಾಜೀಕಯದಲ್ಲೂ ಸಂಚಲನ ಸೃಷ್ಟಿಸಿದೆ. ಹಲವುರು ಗಂಗೂಲಿ ರಾಜಕೀಯ ಸೇರಿಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಗಂಗೂಲಿಯನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಖುದ್ದು ಬಂಗಳಾ ಸಿಎಂ ಮಮತಾ ಬ್ಯಾನರ್ಜಿ ಹಲವು ಭಾರಿ ಯತ್ನಿಸಿದ್ದಾರೆ. ಇತ್ತ ಬಿಜೆಪಿ ಕೂಡ ಕಡಿಮೆ ಏನಿಲ್ಲ. ಈ ಕುರಿತು ಗಂಗೂಲಿ ಜೊತೆ ಚರ್ಚಿಸಿದೆ. ಆದರೆ ರಾಜಕೀಯ ಪ್ರವೇಶವನ್ನು ಗಂಗೂಲಿ ನಿರಾಕರಿಸುತ್ತಲೇ ಬಂದಿದ್ದಾರೆ. ಟ್ವಿಟರ್ ಹಾಗೂ ಸಾಮಾಜಿಕ ಜಾಲತಾಣಗಲ್ಲಿ ಹೆಚ್ಚಿನ ಅಭಿಮಾನಿಗಳು ಸೌರವ್ ಗಂಗೂಲಿ ಬಿಜೆಪಿ ಸೇರಲಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. 

ಗಂಗೂಲಿ ಯಶಸ್ವಿ ರಾಜಕಾರಣಿ ಆಗಬಲ್ಲರು: ಪತ್ನಿ ಡೋನಾ

ಸೌರವ್ ಗಂಗೂಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಭಾರತದಾದ್ಯಂತ ಗಂಗೂಲಿ ಕ್ರಿಕೆಟ್ ಆಕಾಡೆಮಿ ತಲೆ ಎತ್ತಲಿವೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲ, ನೇಪಾಳ, ಬಾಂಗ್ಲಾದೇಶ, ಶ್ರೀಲಂಕಾದಲ್ಲೂ ಗಂಗೂಲಿ ಆಕಾಡಮೆ ಆರಂಭಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಪ್ರತಿಕ್ರಿಯಿಸಿದ್ದಾರೆ.

ಸೌರವ್ ಗಂಗೂಲಿ ಟ್ವೀಟ್ ಹಲವು ಗೊಂದಲಿಗೆ ಕಾರಣವಾಗುತ್ತದ್ದಂತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟನೆ ನೀಡಿದ್ದಾರೆ. ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದಿದ್ದಾರೆ. 

ದಾದಾ, ದ್ರಾವಿಡ್‌ ಮೇಲೆ ಗಂಭೀರವಾಗಿ ಆರೋಪಿಸಿದ ವೃದ್ದಿಮಾನ್ ಸಾಹ..!

15 ವರ್ಷಕ್ಕೂ ಹೆಚ್ಚು ಕಾಲ ಟೀಂ ಇಂಡಿಯಾದಲ್ಲಿ ಕ್ರಿಕೆಟಿಗನಾಗಿ, ನಾಯಕನಾಗಿ ಯಶಸ್ಸು ಕಂಡಿದ್ದಾರೆ. ಭಾರತ ಕ್ರಿಕೆಟ್ ತಂಡಕ್ಕೆ ಹೊಸ ಕಾಯಕಲ್ಪ ನೀಡಿದ ಹೆಗ್ಗಳಿಗೆಗೆ ಗಂಗೂಲಿಗಿದೆ. ಆಕ್ರಮಣಕಾರಿ ಆಟ, ಏಟಿಗೆ ಎದಿರೇಟು ನೀಡವು ಜಾಯಮಾನ ಇದೇ ಗಂಗೂಲಿ ನಾಯಕತ್ವದಲ್ಲೇ ಆರಂಭಗೊಂಡಿತು. 2008ರಲ್ಲಿ ಗಂಗೂಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದರು. 2019ರಲ್ಲಿ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾದರು. ಗಂಗೂಲಿ ಅಧ್ಯಕ್ಷತೆಯಲ್ಲಿ ಬಿಸಿಸಿಐ ಮಹತ್ತರ ಬದಲಾವಣೆ ಕಂಡಿದೆ.