ನವದೆಹಲಿ(ಡಿ.18): ಮಾಜಿ ಐಪಿಎಲ್‌ ಅಧ್ಯಕ್ಷ ರಾಜೀವ್‌ ಶುಕ್ಲಾ, ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. 

ಕರ್ನಾಟಕದ ಬ್ರಿಜೇಶ್‌ ಪಟೇಲ್‌ ಮತ್ತು ಖೈರುಲ್‌ ಮಜುಂದಾರ್‌ ಐಪಿಎಲ್‌ ಆಡಳಿತ ಮಂಡಳಿ ಸದಸ್ಯರಾಗಿ ಉಳಿಯಲಿದ್ದಾರೆ ಎನ್ನಲಾಗಿದೆ. ಈ ಮೂರು ಹುದ್ದೆಗಳಿಗೆ ಗುರುವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಬಿಸಿಸಿಐ ಸದಸ್ಯರ ಒಪ್ಪಿಗೆಯಿಂದಾಗಿ ಈ ಮೂರು ಹುದ್ದೆಗಳಿಗೆ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿವೆ. 

ಮುಷ್ತಾಕ್ ಅಲಿ ಟಿ20 ವೇಳಾಪಟ್ಟಿ ಪ್ರಕಟ: ಕರ್ನಾಟಕಕ್ಕೆ ಜಮ್ಮು ಎದುರಾಳಿ

ರಾಜೀವ್ ಶುಕ್ಲಾ 2017ರವರೆಗೂ ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ಇನ್ನು 2018ರವರೆಗೂ ಐಪಿಎಲ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅನುಭವವೂ ರಾಜೀವ್ ಶುಕ್ಲಾ ಅವರಿಗಿದೆ. ಡಿಸೆಂಬರ್ 24 ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ.