Breaking: ಪಾಕ್ ತಂಡದ ಮಾಜಿ ಕೋಚ್ ಈಗ ಟೀಂ ಇಂಡಿಯಾ ನೂತನ ಬೌಲಿಂಗ್ ಗುರು..!
ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗಿ ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಮಾರ್ಕೆಲ್ ನೇಮಕವಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಮುಂಬೈ: ಭಾರತ ಕ್ರಿಕೆಟ್ ತಂಡದ ನೂತನ ಬೌಲಿಂಗ್ ಕೋಚ್ ಆಗಿ ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಮಾರ್ನೆ ಮಾರ್ಕೆಲ್ ನೇಮಕವಾಗಿದ್ದಾರೆ. ಮಾರ್ಕೆಲ್ ಸೆಪ್ಟೆಂಬರ್ 01ರಿಂದ ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಖಚಿತಪಡಿಸಿರುವುದಾಗಿ ಕ್ರಿಕೆಟ್ ವೆಬ್‌ಸೈಟ್ ವರದಿ ಮಾಡಿದೆ.
ವೈಯುಕ್ತಿಕ ಕಾರಣಗಳಿಂದಾಗಿ ಮಾರ್ಕೆಲ್ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಕೂಡಿಕೊಂಡಿರಲಿಲ್ಲ. ಹೀಗಾಗಿ ಲಂಕಾ ಪ್ರವಾಸದ ಕೇವಲ 6 ಪಂದ್ಯಗಳ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಗೆ ಭಾರತ ಕ್ರಿಕೆಟ್ ತಂಡದ ಹಂಗಾಮಿ ಬೌಲಿಂಗ್ ಕೋಚ್ ಆಗಿ ಸಾಯಿರಾಜ್ ಬಹುತುಲೆ ನೇಮಕವಾಗಿದ್ದರು. ಮಾರ್ಕೆಲ್ ಇದೀಗ ಬಾಂಗ್ಲಾದೇಶ ಎದುರಿನ ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಬಾಂಗ್ಲಾದೇಶ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವು ಸೆಪ್ಟೆಂಬರ್ 19ರಿಂದ ಆರಂಭವಾಗಲಿದ್ದು, ಈ ಸರಣಿಗೆ ಮೊದಲ ಬಾರಿಗೆ ಮಾರ್ಕೆಲ್ ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.
ಬಿಸಿಸಿಐ ಚಾಟಿಗೆ ಬಗ್ಗಿದ ಶ್ರೇಯಸ್ ಅಯ್ಯರ್, ಇಶಾನ್ ಕಿಶನ್!
39 ವರ್ಷದ ನೀಳಕಾಯದ ಮಾಜಿ ವೇಗಿ ಮಾರ್ಕೆಲ್ ಈ ಹಿಂದೆ ಲಖನೌ ಸೂಪರ್ ಜೈಂಟ್ಸ್ ತಂಡದಲ್ಲಿ ಗೌತಮ್ ಗಂಭೀರ್ ಜತೆ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಹೀಗಾಗಿ ಸ್ವತಃ ಟೀಂ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಅವರೇ, ಮಾರ್ನೆ ಮಾರ್ಕೆಲ್ ಅವರನ್ನು ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗಿ ನೇಮಿಸಿ ಎಂದು ಬಿಸಿಸಿಐಗೆ ಶಿಫಾರಸು ಮಾಡಿರಬಹುದು ಎಂದು ವರದಿಯಾಗಿದೆ.
ಮಾರ್ನೆ ಮಾರ್ಕೆಲ್ ಕಳೆದ ವರ್ಷ ಭಾರತದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ವೇಳೆ ಪಾಕಿಸ್ತಾನ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಇದಾದ ಬಳಿಕ ಪಿಸಿಬಿ ಜತೆಗಿನ ಒಪ್ಪಂದ ಕೊನೆಯಾಗುತ್ತಿದ್ದಂತೆಯೇ ಪಾಕ್ ಬೌಲಿಂಗ್ ಕೋಚ್ ಹುದ್ದೆಗೆ ಮಾರ್ಕೆಲ್ ರಾಜಿನಾಮೆ ಸಲ್ಲಿಸಿದ್ದರು.
ಸಚಿನ್, ಸೆಹ್ವಾಗ್, ಯುವಿ ಆಟ ಕಣ್ತುಂಬಿಕೊಳ್ಳಲು ರೆಡಿಯಾಗಿ; ಅಭಿಮಾನಿಗಳಿಗೆ ಬಿಸಿಸಿಐ ಗುಡ್ ನ್ಯೂಸ್..?
ಸದ್ಯ ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ಕರ್ತವ್ಯ ನಿರ್ವಹಿಸುತ್ತಿದ್ದು, ಅಭಿಷೇಕ್ ನಾಯರ್ ಹಾಗೂ ರೆಯಾನ್ ಟೆನ್ ಡೆಸ್ಕೇಟ್ ಸಹಾಯಕ ಕೋಚ್‌ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಈ ಹಿಂದೆ ರಾಹುಲ್ ದ್ರಾವಿಡ್ ಜತೆ ಫೀಲ್ಡಿಂಗ್ ಕೋಚ್ ಆಗಿದ್ದ ಟಿ, ದಿಲೀಪ್ ತಮ್ಮ ಹುದ್ದೆಯಲ್ಲೇ ಮುಂದುವರೆದಿದ್ದಾರೆ.