ಮಹೇಂದ್ರ ಸಿಂಗ್ ಧೋನಿ 2020ರ ಆಗಸ್ಟ್ 15ರಂದು ದಿಢೀರ್ ಎನ್ನುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ ಬಳಿಕ ಧೋನಿ, ತಮ್ಮ ಗಾಲ್ಪ್‌ ಆಡುವುದರತ್ತ ಹೆಚ್ಚು ಆಸಕ್ತಿ ತೋರಿದ್ದಾರೆ. ಹೀಗಾಗಿಯೇ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕದಲ್ಲಿ ಧೋನಿಗಾಗಿ ಒಂದು ಗಾಲ್ಫ್ ಪಂದ್ಯ ಆಯೋಜಿಸಿ ಗಮನ ಸೆಳೆದಿದ್ದಾರೆ.

ನ್ಯೂಯಾರ್ಕ್‌(ಸೆ.09): ಟೀಂ ಇಂಡಿಯಾ ಮಾಜಿ ನಾಯಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿ ಮೂರು ವರ್ಷಗಳೇ ಕಳೆದರೂ ಕ್ಯಾಪ್ಟನ್ ಕೂಲ್‌ ಮೇಲಿನ ಜನಪ್ರಿಯತೆ ಒಂದಿನಿತೂ ಕಮ್ಮಿಯಾಗಿಲ್ಲ. ಧೋನಿಯ ಹವಾ ಹೇಗಿದೆಯೆಂದರೆ, ವಿಶ್ವದ ದೊಡ್ಡಣ್ಣ ಎಂದು ಕರೆಸಿಕೊಳ್ಳುವ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡಾ ಧೋನಿಯ ಅಭಿಮಾನಿ ಎನ್ನುವುದು ಬಹುತೇಕ ಮಂದಿಗೆ ಗೊತ್ತಿಲ್ಲ. ಸದ್ಯ ಮಹೇಂದ್ರ ಸಿಂಗ್‌ ಧೋನಿ, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ಕೇವಲ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮಾತ್ರ ಪಾಲ್ಗೊಳ್ಳುತ್ತಾ ಬಂದಿದ್ದಾರೆ. ಸದ್ಯ ಧೋನಿ ತಮ್ಮ ಕುಟುಂಬದ ಜತೆ ರಜೆ ದಿನಗಳನ್ನು ಎಂಜಾಯ್ ಮಾಡಲು ಅಮೆರಿಕಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಡೊನಾಲ್ಡ್ ಟ್ರಂಪ್‌, ಧೋನಿಗಾಗಿಯೇ ಒಂದು ಗಾಲ್ಪ್‌ ಪಂದ್ಯವನ್ನು ಆಯೋಜಿಸುವ ಮೂಲಕ ವಿನೂತನ ಗೌರವ ನೀಡಿದ್ದಾರೆ.

ಮಹೇಂದ್ರ ಸಿಂಗ್ ಧೋನಿ 2020ರ ಆಗಸ್ಟ್ 15ರಂದು ದಿಢೀರ್ ಎನ್ನುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ ಬಳಿಕ ಧೋನಿ, ತಮ್ಮ ಗಾಲ್ಪ್‌ ಆಡುವುದರತ್ತ ಹೆಚ್ಚು ಆಸಕ್ತಿ ತೋರಿದ್ದಾರೆ. ಹೀಗಾಗಿಯೇ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕದಲ್ಲಿ ಧೋನಿಗಾಗಿ ಒಂದು ಗಾಲ್ಫ್ ಪಂದ್ಯ ಆಯೋಜಿಸಿ ಗಮನ ಸೆಳೆದಿದ್ದಾರೆ.

Scroll to load tweet…

Asia Cup 2023: ಭಾರತ vs ಪಾಕಿಸ್ತಾನ ಮೆಗಾ ಫೈಟ್‌ಗೆ ಮತ್ತೆ ಮಳೆ ಭೀತಿ..! ಪಂದ್ಯ ನಡೆಯುತ್ತಾ?

ಇದಕ್ಕೂ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ, 2023ರ ಯುಎಸ್ ಓಪನ್ ಟೆನಿಸ್ ಗ್ರ್ಯಾನ್‌ ಸ್ಲಾಂ ಟೂರ್ನಿಯಲ್ಲಿ ಕಾರ್ಲೊಸ್ ಆಲ್ಕರಜ್ ಹಾಗೂ ಅಲೆಕ್ಸಾಂಡರ್ ಜ್ವರೆವ್ ಅವರ ನಡುವಿನ ಪುರುಷರ ಸಿಂಗಲ್ಸ್ ಕ್ವಾರ್ಟರ್ ಫೈನಲ್‌ ಪಂದ್ಯವನ್ನು ವೀಕ್ಷಿಸಿ ಗಮನ ಸೆಳೆದಿದ್ದರು. ಈ ಪಂದ್ಯದಲ್ಲಿ ಜ್ವರೆವ್ ಮಣಿಸಿದ ಕಾರ್ಲೊಸ್ ಆಲ್ಕರಜ್ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. 

Scroll to load tweet…

ಕ್ಯಾಪ್ಟನ್ ಕೂಲ್ ಗಾಲ್ಫ್ ಆಡುತ್ತಿರುವುದು ಇದೇ ಮೊದಲ ಬಾರಿಯೇನಲ್ಲ. ಈ ಹಿಂದೆಯೂ ಹಲವು ಬಾರಿ ಗಾಲ್ಫ್ ಆಡುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದವು. ಇನ್ನು ಕ್ರಿಕೆಟ್ ವಿಚಾರಕ್ಕೆ ಬರುವುದಾದರೇ ಕೆಲ ತಿಂಗಳ ಹಿಂದಷ್ಟೇ ಮುಕ್ತಾಯವಾದ 2023ರ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂ ಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ದಾಖಲೆಯ 5ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿದು 5ನೇ ಬಾರಿಗೆ ಕಪ್‌ ಗೆಲ್ಲುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತಿಹೆಚ್ಚು ಟ್ರೋಫಿ ಗೆದ್ದ ತಂಡಗಳ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಜತೆ ಜಂಟಿ ಅಗ್ರಸ್ಥಾನ ಹಂಚಿಕೊಂಡಿದೆ. ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಕೂಡಾ 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

Breaking News: ವಿಶ್ವಕಪ್ ಟೂರ್ನಿಗೆ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟ

ಧೋನಿ ನಾಯಕತ್ವದಲ್ಲೇ ಕೊನೆಯ ಬಾರಿಗೆ ಐಸಿಸಿ ಟ್ರೋಫಿ ಗೆದ್ದಿದ್ದ ಭಾರತ: 

ಭಾರತ ಕ್ರಿಕೆಟ್‌ ತಂಡವು ಕಳೆದೊಂದು ದಶಕದಿಂದಲೂ ಐಸಿಸಿ ಟ್ರೋಫಿಯ ಬರ ಎದುರಿಸುತ್ತಾ ಬಂದಿದೆ. 2013ರಲ್ಲಿ ಧೋನಿ ನೇತೃತ್ವದ ಟೀಂ ಇಂಡಿಯಾ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಟೀಂ ಇಂಡಿಯಾ ಹಲವು ಬಾರಿ ಐಸಿಸಿ ಟೂರ್ನಿಯಲ್ಲಿ ನಾಕೌಟ್‌ ಹಂತದಲ್ಲೇ ಹೊರಬೀಳುವ ಮೂಲಕ ನಿರಾಸೆ ಅನುಭವಿಸುತ್ತಲೇ ಬಂದಿದೆ. ಇನ್ನು ಧೋನಿ ನೇತೃತ್ವದಲ್ಲೇ ಟೀಂ ಇಂಡಿಯಾ 2011ರಲ್ಲಿ ಕೊನೆಯ ಬಾರಿಗೆ ಐಸಿಸಿ ಏಕದಿನ ವಿಶ್ವಕಪ್ ಜಯಿಸಿತ್ತು.ಇದಾದ ಬಳಿಕ ಭಾರತ ವಿಶ್ವಕಪ್ ಜಯಿಸಿಲ್ಲ.