ವಿವಾಹಿತ ಮಹಿಳೆಯೊಬ್ಬಳ ಮೇಲೆ ನಾಲ್ವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಲು ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸಿಂಧನೂರು (ಮೇ.27): ವಿವಾಹಿತ ಮಹಿಳೆಯೊಬ್ಬಳ ಮೇಲೆ ನಾಲ್ವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಲು ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತಾಲೂಕಿನ ಏಳಮೈಲ್‌ ಕ್ಯಾಂಪಿನ ನಿವಾಸಿಯಾಗಿರುವ ಮಹಿಳೆಯನ್ನು ಮೂರುಮೈಲ್‌ ಕ್ಯಾಂಪಿನ ಮಾಳಪ್ಪ ಕುರುಬರು ಸೇರಿದಂತೆ ನಾಲ್ವರು ಕಳೆದ 24ರಂದು ಸಂಜೆ 5 ಗಂಟೆ ಸುಮಾರಿಗೆ ನಾಲ್ಕುಮೈಲ್‌ ಕ್ಯಾಂಪಿನ ಹೊರವಲಯದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ವೇಳೆ ಮಹಿಳೆ ಅವರನ್ನು ತಡೆಯಲೆತ್ನಿಸಿದಾಗ ಆಕೆ ಮೇಲೆ ಮನಸೋ ಇಚ್ಛೆ ಹಲ್ಲೆ ಎಸಗಿ ಸ್ಥಳದಲ್ಲೇ ಬಿಟ್ಟು ಓಡಿ ಹೋಗಿದ್ದಾರೆ.

Video viral: ಸರ್ಕಾರಿ ಬಸ್‌ನಲ್ಲಿ ಮಹಿಳೆಯ ಜಡೆ ಮುಟ್ಟಿ ತೀಟೆ, ಕಾಮುಕನ ಬೆನ್ನು ಬಿದ್ದ ಖಾಕಿ!...

ನಂತರ ಆಕೆಯನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಆಕೆಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್‌ನಲ್ಲಿ ದಾಖಲಿಸಿದ್ದಾರೆ.

ಆಸ್ಪತ್ರೆಯಲ್ಲಿಯೇ ಪೊಲೀಸರಿಗೆ ನಡೆದ ಘಟನೆಯನ್ನು ವಿವರಿಸಿರುವ ನೊಂದ ಮಹಿಳೆ ನಂತರ ಸಾವನಪ್ಪಿದ್ದಾಳೆ ಎಂದು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಆರೋಪಿ ಮಾಳಪ್ಪನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಸರ್ಕಲ್‌ ಇನ್ಸ್‌ಪೆಕ್ಟರ್‌ ರವಿಕುಮಾರ ಕಪ್ಪತ್‌ನವರ್‌ ತಿಳಿಸಿದ್ದಾರೆ.

11 ವರ್ಷದ ಬಾಲಕಿಯ ಮೇಲೆ ನಾಲ್ವರ ಅತ್ಯಾಚಾರ, ಕ್ಲಾಸ್‌ಮೇಟ್‌ ಕೂಡ ಭಾಗಿ!

.ಅಪರಿಚಿತ ವ್ಯಕ್ತಿಯ ಸಾವು

ತುರುವೇಕೆರೆ: ಪಟ್ಟಣದ ಗುರುಭವನದ ಬಳಿ ಸುಮಾರು 30 ವರ್ಷ ವಯೋಮಾನದ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ತುಂಬಾ ತೆಳುದೇಹ ಹೊಂದಿರುವ ಈ ವ್ಯಕ್ತಿ ಹಸಿವಿನಿಂದಲೋ ಅಥವಾ ಇನ್ನಿತರೆ ಕಾಯಿಲೆಯಿಂದಲೋ ಅಸ್ವಸ್ಥಗೊಂಡು ಬಿದ್ದು ಮೃತಪಟ್ಟಿರಬಹುದು ಎಂದು ಊಹಿಸಲಾಗಿದೆ. ಬಿಳಿ ಹೂವಿರುವ ತುಂಬುದೋಳಿನ ಕೆಂಪು ಶರ್ಚ್‌, ನೀಲಿ ಬಣ್ಣದ ಜೀನ್ಸ್‌ ಪ್ಯಾಂಟ್‌ ಧರಿಸಿದ್ದಾರೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ರವಾನಿಸಲಾಗಿದೆ. ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಬಂಧಿಸಿದವರು ಸ್ಥಳೀಯ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.