ಪಾಕಿಸ್ತಾನ ಸೀಮಿತ ಓವರ್‌ಗಳ ಕ್ರಿಕೆಟ್ ತಂಡದ ಹೆಡ್ ಕೋಚ್ ಹುದ್ದೆಗೆ ಗ್ಯಾರಿ ಕರ್ಸ್ಟನ್ ಗುಡ್ ಬೈ ಹೇಳಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ಕರಾಚಿ: ತವರಿನಲ್ಲಿ ಬರೋಬ್ಬರಿ ಮೂರು ವರ್ಷಗಳ ಬಳಿಕ ಟೆಸ್ಟ್ ಸರಣಿ ಗೆದ್ದು ಬೀಗುತ್ತಿರುವ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಹೆಡ್ ಕೋಚ್ ಗ್ಯಾರಿ ಕರ್ಸ್ಟನ್‌ ಶಾಕ್ ನೀಡಿದ್ದಾರೆ. ಪಾಕ್ ಹೆಡ್ ಕೋಚ್ ಆಗಿ ಕೇವಲ ಆರು ತಿಂಗಳೊಳಗಾಗಿ ತಮ್ಮ ಹುದ್ದೆಗೆ ಗ್ಯಾರಿ ಕರ್ಸ್ಟನ್ ರಾಜೀನಾಮೆ ನೀಡಿದ್ದಾರೆ. 

ಕ್ರಿಕೆಟ್ ವೆಬ್‌ಸೈಟ್ Cricbuzz ವರದಿಯ ಪ್ರಕಾರ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಕೆಲವೊಂದು ಆಂತರಿಕ ವಿಚಾರಗಳ ಬಗ್ಗೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಗ್ಯಾರಿ ಅಸಮಾಧಾನ ಹೊಂದಿದ್ದಾರೆ ಎಂದು ವರದಿ ಮಾಡಿದೆ. ಇತ್ತೀಚೆಗಷ್ಟೇ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಕೇಂದ್ರೀಯ ಗುತ್ತಿಗೆಯನ್ನು ಪ್ರಕಟಿಸಿತ್ತು.ಈ ಪೈಕಿ ಅನುಭವಿ ಎಡಗೈ ಬ್ಯಾಟರ್ ಫಖರ್ ಜಮಾನ್ ಅವರನ್ನು ಕೈ ಬಿಡಲಾಗಿತ್ತು. ಈ ಎಲ್ಲಾ ವಿಚಾರದ ಬಗ್ಗೆ ಗ್ಯಾರಿಗೆ ಬೇಸರವಾಗಿದೆ ಎನ್ನಲಾಗಿದೆ. ಇನ್ನು ಪಾಕಿಸ್ತಾನ ಕ್ರಿಕೆಟ್ ತಂಡವು ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಯನ್ನಾಡಲು ಆಸ್ಟ್ರೇಲಿಯಾ ಪ್ರವಾಸ ಹೊರಡುವ ಮುನ್ನವೇ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ.

ಮೆಗಾ ಹರಾಜಿಗೂ ಮುನ್ನ ಕೇವಲ 3 ಆಟಗಾರರನ್ನು ರೀಟೈನ್‌ ಮಾಡಲು ಸನ್‌ರೈಸರ್ಸ್ ಹೈದರಾಬಾದ್ ಮಾಸ್ಟರ್ ಪ್ಲಾನ್?

ಇನ್ನು ESPNcricinfo ವರದಿಯ ಪ್ರಕಾರ, ದಕ್ಷಿಣ ಆಫ್ರಿಕಾದ ಗ್ಯಾರಿ ಕರ್ಸ್ಟನ್ ಹಾಗೂ ಪಾಕಿಸ್ತಾನ ಟೆಸ್ಟ್ ತಂಡದ ಕೋಚ್ ಹಾಗೂ ಆಸ್ಟ್ರೇಲಿಯಾ ವೇಗಿ ಜೇಸನ್ ಗಿಲೆಸ್ಪಿ ನಡುವೆ ಮನಸ್ತಾಪ ಉಂಟಾಗಿದೆ ಎಂದು ವರದಿಯಾಗಿದೆ. ಆಸ್ಟ್ರೇಲಿಯಾ ಪ್ರವಾಸಕ್ಕೆ ಪಾಕಿಸ್ತಾನ ತಂಡವನ್ನು ಆಯ್ಕೆ ಮಾಡುವಾಗ ಪಿಸಿಬಿ, ಗ್ಯಾರಿ ಅವರ ಸಲಹೆಯನ್ನು ಕೇಳಿಲ್ಲ. ಹೀಗಾಗಿ ಗ್ಯಾರಿ ಪಾಕ್ ಸೀಮಿತ ಓವರ್‌ಗಳ ಕ್ರಿಕೆಟ್ ತಂಡದ ಹೆಡ್‌ ಕೋಚ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

Scroll to load tweet…

ಇದೀಗ ಗ್ಯಾರಿ ಕರ್ಸ್ಟನ್ ಅವರಿಂದ ತೆರವಾದ ಪಾಕಿಸ್ತಾನ ಕ್ರಿಕೆಟ್ ತಂಡದ ಹೆಡ್ ಕೋಚ್ ಆಗಿ ಜೇಸನ್ ಗಿಲೆಸ್ಪಿಯವರೇ ನೇಮಕವಾಗಿದ್ದಾರೆ ಎಂದು ವರದಿಯಾಗಿದೆ. ಕಳೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಕೆಲವೇ ದಿನಗಳು ಬಾಕಿ ಇರುವಾಗ ಗ್ಯಾರಿ ಕರ್ಸ್ಟನ್ ಅವರನ್ನು ಪಾಕಿಸ್ತಾನ ಕ್ರಿಕೆಟ್ ತಂಡದ ಹೆಡ್ ಕೋಚ್ ಆಗಿ ನೇಮಿಸಲಾಗಿತ್ತು. ಆದರೆ ಗ್ಯಾರಿ ಮಾರ್ಗದರ್ಶನದಲ್ಲಿ ಪಾಕಿಸ್ತಾನ ತಂಡವು 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಕ್ರಿಕೆಟ್ ಶಿಶು ಎಂದೇ ಕರೆಯಲ್ಪಡುವ ಯುಎಸ್‌ಎ ಎದುರು ಸೋತು ಗ್ರೂಪ್ ಹಂತದಲ್ಲೇ ಹೊರಬಿದ್ದು ಮುಖಭಂಗ ಅನುಭವಿಸಿತ್ತು.

ಇನ್ನು ಗ್ಯಾರಿ ಕರ್ಸ್ಟನ್ ಮಾರ್ಗದರ್ಶನದಲ್ಲಿಯೇ 2011ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು ಎನ್ನುವುದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.