ನವದೆಹಲಿ[ಡಿ.31]: ದೆಹಲಿ ಕ್ರಿಕೆಟ್‌ ಸಂಸ್ಥೆ ಚುನಾವಣಾ ಅಖಾಡ ರಂಗೇರುತ್ತಿದ್ದು, ಸಂಸ್ಥೆ ಪದಾಧಿಕಾರಿಗಳು ಚುನಾವಣೆ ನಡೆಸಲು ಫೆಬ್ರವರಿವರೆಗೂ ಕಾಲಾವಕಾಶ ನೀಡಬೇಕೆಂದು ಸಾರ್ವಜನಿಕ ತನಿಖಾಧಿಕಾರಿ ದೀಪಕ್‌ ವರ್ಮಾ ಅವರನ್ನು ಕೋರಿದ್ದಾರೆ. 

ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿ ರಾಜಕೀಯ; ಅಧ್ಯಕ್ಷ ಸ್ಥಾನಕ್ಕೆ ರಜತ್ ಶರ್ಮಾ ರಾಜೀನಾಮೆ!

ಇದೇ ವೇಳೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಇಚ್ಛಿಸಿದ್ದ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ಗೆ ಹಿನ್ನಡೆಯಾಗಿದೆ. ನ್ಯಾ. ಲೋಧಾ ಸಮಿತಿ ಶಿಫಾರಸ್ಸಿನ ಪ್ರಕಾರ,  ಗಂಭೀರ್‌ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಲ್ಲ ಎಂದು ದೀಪಕ್‌ ವರ್ಮಾ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಕ್ರಿಕೆಟ್‌ ಸಂಸ್ಥೆ ಪ್ರಧಾನ ಕಾರ್ಯದರ್ಶಿ ವಿನೋದ್‌ ತಿಹಾರ, ‘ದೆಹಲಿ ಕ್ರಿಕೆಟ್‌ಗಾಗಿ ಸೇವೆ ಸಲ್ಲಿಸಲು ಗಂಭೀರ್‌ಗೆ ಮುಕ್ತ ಅವಕಾಶವಿದೆ. ಆದರೆ ಅದಕ್ಕಾಗಿ ಅವರು ತಮ್ಮ ಸಂಸದ ಹುದ್ದೆಯನ್ನು ತ್ಯಜಿಸಬೇಕಾಗುತ್ತದೆ’ ಎಂದಿದ್ದಾರೆ.

ಡೆಲ್ಲಿ ಕ್ರಿಕೆಟ್ ವಾರ್ಷಿಕ ಸಭೆಯಲ್ಲಿ ಬಡಿದಾಟ; ಬ್ಯಾನ್‌ಗೆ ಆಗ್ರಹಿಸಿದ ಗಂಭೀರ್!

ಕಳೆದ ತಿಂಗಳಷ್ಟೇ ಡಿಡಿಸಿಎ ಅಧ್ಯಕ್ಷ ಸ್ಥಾನದಿಂದ ರಜತ್ ಶರ್ಮಾ ಕೆಳಗಿಳಿದಿದ್ದರು. 2018ರ ಜುಲೈನಲ್ಲಿ ನಡೆದ ಡಿಡಿಸಿಎ ಚುನಾವಣೆಯಲ್ಲಿ 1983ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯ ಮದನ್ ಲಾಲ್ ಅವರನ್ನು ಮಣಿಸಿ ರಜತ್ ಶರ್ಮಾ ಅಧ್ಯಕ್ಷ ಸ್ಥಾನಕ್ಕೇರಿದ್ದರು.