Asianet Suvarna News Asianet Suvarna News

ವಾರ್ನರ್‌-ಮ್ಯಾಕ್ಸ್‌ವೆಲ್ ತಲಾ ನೂರು: ನೆದರ್‌ಲೆಂಡ್ಸ್‌ಗೆ ಪಂದ್ಯ ಗೆಲ್ಲಲು ಗುರಿ ನಾನೂರು..!

ಇಲ್ಲಿನ ಅರುಣ್‌ ಜೇಟ್ಲಿ ಮೈದಾನದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ಆಸೀಸ್‌ ಆರಂಭದಲ್ಲೇ ಮಿಚೆಲ್ ಮಾರ್ಷ್ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

Glenn Maxwell David Warner Cup Ton As Australia Post 399 for 8 vs Netherlands kvn
Author
First Published Oct 25, 2023, 6:17 PM IST

ಡೆಲ್ಲಿ(ಅ.25): ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಹಾಗೂ ಆರ್‌ಸಿಬಿ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಬಾರಿಸಿದ ಸಿಡಿಲಬ್ಬರದ ಶತಕಗಳ ನೆರವಿನಿಂದ ಆಸ್ಟ್ರೇಲಿಯಾ ತಂಡವು ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 399 ರನ್ ಬಾರಿಸಿದ್ದು, ನೆದರ್‌ಲೆಂಡ್ಸ್‌ಗೆ ಕಠಿಣ ಗುರಿ ನೀಡಿದೆ. 

ಇಲ್ಲಿನ ಅರುಣ್‌ ಜೇಟ್ಲಿ ಮೈದಾನದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ಆಸೀಸ್‌ ಆರಂಭದಲ್ಲೇ ಮಿಚೆಲ್ ಮಾರ್ಷ್ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.

ಎರಡನೇ ವಿಕೆಟ್‌ಗೆ ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ಜೋಡಿ 118 ಎಸೆತದಲ್ಲಿ 132 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಆರಂಭಿಕ ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಸ್ಟೀವ್ ಸ್ಮಿತ್ 68 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 71 ರನ್ ಬಾರಿಸಿ ಆರ್ಯನ್ ದತ್‌ಗೆ ವಿಕೆಟ್ ಒಪ್ಪಿಸಿದರು.

'ಬಾಬರ್ ಅಜಂರನ್ನು ನಾಯಕತ್ವದಿಂದ ಕೆಳಗಿಳಿಸಿ ಈತನಿಗೆ ಪಟ್ಟ ಕಟ್ಟಿ': ಪಾಕ್ ತಂಡದಲ್ಲಿ ಹೊಸ ಕಂಪನ

ಇದಾದ ಬಳಿಕ ಮೂರನೇ ವಿಕೆಟ್‌ಗೆ ಡೇವಿಡ್ ವಾರ್ನರ್ ಹಾಗೂ ಮಾರ್ನಸ್ ಲಬುಶೇನ್‌ 84 ರನ್‌ಗಳ ಜತೆಯಾಟ ನಿಭಾಯಿಸಿದರು. ಲಬುಶೇನ್‌ 47 ಎಸೆತಗಳನ್ನು ಎದುರಿಸಿ 62 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಸಚಿನ್ ದಾಖಲೆ ಸರಿಗಟ್ಟಿದ ವಾರ್ನರ್: ಸದ್ಯ ಅದ್ಭುತ ಫಾರ್ಮ್‌ನಲ್ಲಿರುವ ಡೇವಿಡ್ ವಾರ್ನರ್, ಮತ್ತೊಂದು ಆಕರ್ಷಕ ಶತಕ ಸಿಡಿಸುವ ಮೂಲಕ ಸಚಿನ್ ತೆಂಡುಲ್ಕರ್ ದಾಖಲೆಯನ್ನು ಸರಿಗಟ್ಟುವಲ್ಲಿ ಯಶಸ್ವಿಯಾದರು. ಡೇವಿಡ್ ವಾರ್ನರ್ 93 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 104 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ವಾರ್ನರ್ ಏಕದಿನ ವಿಶ್ವಕಪ್ ಇತಿಹಾಸದಲ್ಲಿ 6ನೇ ಶತಕ ಬಾರಿಸಿ, ಸಚಿನ್ ತೆಂಡುಲ್ಕರ್  ಕೂಡಾ 6 ಶತಕಗಳ ಸಿಡಿಸಿದ್ದಾರೆ. ಇನ್ನು ಏಕದಿನ ವಿಶ್ವಕಪ್‌ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ದಾಖಲೆ ರೋಹಿತ್ ಶರ್ಮಾ(7) ಹೆಸರಿನಲ್ಲಿದೆ.

ಏಕದಿನ ವಿಶ್ವಕಪ್‌ನಲ್ಲಿ ಅತಿವೇಗದ ಶತಕ ಬಾರಿಸಿದ ಮ್ಯಾಕ್ಸ್‌ವೆಲ್: ಸ್ಮಿತ್ ಹಾಗೂ ಲಬುಶೇನ್ ಅವರಂತೆಯೇ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡಾ ಇಲ್ಲಿಯವರೆಗೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಆದರೆ ನೆದರ್‌ಲೆಂಡ್ಸ್ ಎದುರು ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಮ್ಯಾಕ್ಸ್‌ವೆಲ್ ಕೇವಲ 40 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ದಾಖಲೆ ನಿರ್ಮಿಸಿದರು. ಈ ಮೂಲಕ ಏಕದಿನ ವಿಶ್ವಕಪ್‌ನಲ್ಲಿ ಅತಿವೇಗವಾಗಿ ಶತಕ ಸಿಡಿಸಿದ ಬ್ಯಾಟರ್ ಎನ್ನುವ ಕೀರ್ತಿಗೆ ಮ್ಯಾಕ್ಸ್‌ವೆಲ್ ಪಾತ್ರರಾದರು. ಈ ಮೊದಲು ಏಯ್ಡನ್ ಮಾರ್ಕ್‌ರಮ್‌ ಇದೇ ವಿಶ್ವಕಪ್‌ನಲ್ಲಿ ಶ್ರೀಲಂಕಾ ಎದುರು 49 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಅಂತಿಮವಾಗಿ ಮ್ಯಾಕ್ಸ್‌ವೆಲ್ 44 ಎಸೆತಗಳನ್ನು ಎದುರಿಸಿ 9 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ 106 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
 

Follow Us:
Download App:
  • android
  • ios