Asianet Suvarna News Asianet Suvarna News

ದೇಶಕ್ಕೆ ಚೊಚ್ಚಲ ವಿಶ್ವಕಪ್ ಗೆದ್ದುಕೊಟ್ಟ ಹೀರೋ ಕಪಿಲ್‌ ದೇವ್‌ಗೆ 62ರ ಜನ್ಮದಿನದ ಸಂಭ್ರಮ

ಟೀಂ ಇಂಡಿಯಾದ ದಿಗ್ಗಜ ಕ್ರಿಕೆಟಿಗ, ಮಾಜಿ ನಾಯಕ ಕಪಿಲ್‌ ದೇವ್ 62ನೇ ವಸಂತಕ್ಕೆ ಕಾಲಿರಿಸಿದ್ದಾರೆ. ವಿಶ್ವಕಪ್ ಹೀರೋ ಕಪಿಲ್‌ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Happy Birthday Kapil Dev Indias greatest captain turns 62 on January 2021 kvn
Author
New Delhi, First Published Jan 6, 2021, 3:31 PM IST

ನವದೆಹಲಿ(ಜ.06): ಭಾರತ ಕ್ರಿಕೆಟ್‌ ತಂಡಕ್ಕೆ ಚೊಚ್ಚಲ ವಿಶ್ವಕಪ್ ಗೆದ್ದುಕೊಟ್ಟ, ಹರ್ಯಾಣ ಹರಿಕೇನ್‌ ಖ್ಯಾತಿಯ ದಿಗ್ಗಜ ಕ್ರಿಕೆಟಿಗ ಕಪಿಲ್‌ ದೇವ್‌ ಅವರಿಗಿಂದು 62ನೇ ಹುಟ್ಟುಹಬ್ಬದ ಸಂಭ್ರಮ. ಸಾಮಾಜಿಕ ಜಾಲತಾಣಗಳಲ್ಲಿ ಕಪಿಲ್‌ ದೇವ್‌ಗೆ ಶುಭಾಶಯಗಳ ಮಹಾಪೂರವೇ ಹರಿದು ಬರಲಾರಂಭಿಸಿದೆ. 

ಈ ಶುಭ ಸಂದರ್ಭದಲ್ಲಿ ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕಪಿಲ್‌ ದೇವ್ ಅವರ ಸಾಧನೆಯ ಅನಾವರಣ ಮಾಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 9,031 ರನ್‌, 687  ವಿಕೆಟ್‌. ಏಕದಿನ ಕ್ರಿಕೆಟ್‌ನಲ್ಲಿ 200 ವಿಕೆಟ್ ಕಬಳಿಸಿದ ಮೊದಲ ಬೌಲರ್‌, ಟೆಸ್ಟ್ ಕ್ರಿಕೆಟ್‌ನಲ್ಲಿ 400+ ವಿಕೆಟ್‌ ಹಾಗೂ 5000+ ರನ್‌ ಬಾರಿಸಿದ ಜಗತ್ತಿನ ಏಕೈಕ ಕ್ರಿಕೆಟಿಗ, ಭಾರತಕ್ಕೆ ಏಕದಿನ ವಿಶ್ವಕಪ್ ಗೆದ್ದು ನಾಯಕ ಕಪಿಲ್ ದೇವ್ ಅವರಿಗೆ 62ನೇ ಹುಟ್ಟುಹಬ್ಬದ ಶುಭಾಶಯಗಳು ಎಂದು ಟ್ವೀಟ್‌ ಮಾಡಿದೆ.

ಕಪಿಲ್‌ ದೇವ್‌ ಅಕ್ಟೋಬರ್ 1978ರಲ್ಲಿ ಪಾಕಿಸ್ತಾನ ವಿರುದ್ದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಕಪಿಲ್‌ ಭಾರತ ಪರ 131 ಟೆಸ್ಟ್‌ ಪಂದ್ಯಗಳನ್ನಾಡಿ 5248 ರನ್ ಹಾಗೂ 438 ವಿಕೆಟ್ ಕಬಳಿಸಿದ್ದಾರೆ. ಇನ್ನು ಏಕದಿನ ಕ್ರಿಕೆಟ್‌ನಲ್ಲಿ 225 ಬಾರಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದು, 3783 ರನ್ ಹಾಗೂ 253 ವಿಕೆಟ್ ಕಬಳಿಸಿದ್ದಾರೆ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಕಪಿಲ್ ದೇವ್ ಕೇವಲ ಒಂದು ಶತಕ ಮಾತ್ರ ಬಾರಿಸಿದ್ದಾರೆ. ಆದರೆ ಆ ಶತಕಕ್ಕೆ ಸಾಕಷ್ಟು ಮಹತ್ವವಿದೆ. 1983ರ ಏಕದಿನ ವಿಶ್ವಕಪ್‌ನಲ್ಲಿ ಕಪಿಲ್‌ ದೇವ್ ಜಿಂಬಾಬ್ವೆ ವಿರುದ್ದ ಭರ್ಜರಿ 175 ರನ್‌ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ದಿಗ್ಗಜ ಕಪಿಲ್‌ XI ಕನಸಿನ ಏಕದಿನ ತಂಡ ಪ್ರಕಟ; ದಾದಾಗಿಲ್ಲ ಸ್ಥಾನ..!

ಇನ್ನು 1983ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಕಪಿಲ್‌ ಡೆವಿಲ್ಸ್‌ ಪಡೆ ಬಲಿಷ್ಠ ಹಾಲಿ ಚಾಂಪಿಯನ್‌ ಆಗಿದ್ದಂತಹ ಕ್ಲೈವ್ ಲಾಯ್ಡ್ ನೇತೃತ್ವದ ವೆಸ್ಟ್ ಇಂಡೀಸ್ ತಂಡವನ್ನು ಬಗ್ಗುಬಡಿಯುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿ ಐತಿಹಾಸಿಕ ಸಾಧನೆ ಮಾಡಿತ್ತು. ಪದ್ಮಶ್ರೀ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಷ್ಕೃತರಾಗಿರುವ ಕಪಿಲ್‌ ದೇವ್ 1994ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದರು. ಕಪಿಲ್‌ ದೇವ್ ಹುಟ್ಟುಹಬ್ಬಕ್ಕೆ ಕ್ರಿಕೆಟ್‌ ದಿಗ್ಗಜ ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ ಸೇರಿದಂತೆ ಹಲವು ಕ್ರೀಡಾತಾರೆಯರು ಶುಭ ಕೋರಿದ್ದಾರೆ.

Follow Us:
Download App:
  • android
  • ios