* 71ನೇ ವಸಂತಕ್ಕೆ ಕಾಲಿರಿಸಿದ ಪ್ರಧಾನಿ ನರೇಂದ್ರ ಮೋದಿ* ಮೋದಿ ಜನ್ಮದಿನಕ್ಕೆ ಶುಭಕೋರಿದ ದೇಶದ ಕ್ರೀಡಾತಾರೆಯರು

ನವದೆಹಲಿ(ಸೆ.17): ಭಾರತದ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ(ಸೆ.17)ವಾದ ಇಂದು 71ನೇ ವಸಂತಕ್ಕೆ ಕಾಲಿರಿಸಿದ್ದಾರೆ. ದೇಶದ ಪ್ರಧಾನಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಲಕ್ಷಾಂತರ ಮಂದಿ ಶುಭ ಹಾರೈಸಿದ್ದಾರೆ. ಅದೇ ರೀತಿ ದೇಶದ ಕ್ರೀಡಾ ತಾರೆಯರಾದ ವಿರಾಟ್ ಕೊಹ್ಲಿ, ಸಚಿನ್ ತೆಂಡುಲ್ಕರ್, ಸೈನಾ ನೆಹ್ವಾಲ್‌ ಸೇರಿದಂತೆ ಹಲವರು ನೆಚ್ಚಿನ ಪ್ರಧಾನಿಗೆ ಶುಭ ಹಾರೈಸಿದ್ದಾರೆ. 

ಗೌರವಾನ್ವಿತ ನಮ್ಮ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಒಳ್ಳೆಯ ಆರೋಗ್ಯ ಹಾಗೂ ಸಂತಸದಾಯಕ ಬದುಕು ನಿಮ್ಮದಾಗಲಿ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟ್ವೀಟ್‌ ಮೂಲಕ ಶುಭಕೋರಿದ್ದಾರೆ.

Scroll to load tweet…

13 ವರ್ಷ ಮುಖ್ಯಮಂತ್ರಿ, 7 ವರ್ಷ ಪ್ರಧಾನಿ ಆಗಿದ್ದರೂ ಕುಸಿಯದ ಮೋದಿ ಜನಪ್ರಿಯತೆ

ಅದೇ ರೀತಿ ಕ್ರಿಕೆಟ್ ದಿಗ್ಗಜ ಮಾಸ್ಟರ್ ಬ್ಲಾಸ್ಟರ್‌ ಸಚಿನ್ ತೆಂಡುಲ್ಕರ್, ವಿರೇಂದ್ರ ಸೆಹ್ವಾಗ್, ದಿನೇಶ್‌ ಕಾರ್ತಿಕ್‌, ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್‌ಸನ್ ಸಹಾ ಟ್ವೀಟ್‌ ಮೂಲಕ ಪ್ರಧಾನಿ ಮೋದಿಯವರಿಗೆ ಜನ್ಮದಿನದ ಶುಭ ಕೋರಿದ್ದಾರೆ.

Scroll to load tweet…
Scroll to load tweet…
Scroll to load tweet…

ಇನ್ನು ಲಂಡನ್ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್‌, ಟೋಕಿಯೋ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತ ಕುಸ್ತಿಪಟು ಭಜರಂಗ್ ಪೂನಿಯಾ ಟ್ವೀಟ್‌ ಮೂಲಕ ಮೋದಿಗೆ ಜನ್ಮದಿನದ ಶುಭ ಹಾರೈಸಿದ್ದಾರೆ.

Scroll to load tweet…
Scroll to load tweet…