ಜಗತ್ತಿನ ಶ್ರೀಮಂತ ಕ್ರಿಕೆಟ್ ಮಂಡಳಿ ಎಂದೇ ಪ್ರಸಿದ್ಧಿ ಪಡೆದಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಮ್ಮ ಅಧಿಕೃತ 'ಎಕ್ಸ್'(ಟ್ವಿಟರ್) ಮೂಲಕ ಸಚಿನ್ ತೆಂಡುಲ್ಕರ್‌ಗೆ ವಿನೂತನವಾಗಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದೆ.
ಮುಂಬೈ(ಏ.24): ಭಾರತದ ಕ್ರಿಕೆಟ್ ದಂತಕಥೆ, ಕ್ರಿಕೆಟ್ ದೇವರು ಎಂದೇ ಕರೆಸಿಕೊಳ್ಳುವ ಸಚಿನ್ ರಮೇಶ್ ತೆಂಡುಲ್ಕರ್ ಇಂದು ತಮ್ಮ 51ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ ಮಾಸ್ಟರ್ ಬ್ಲಾಸ್ಟರ್ ತೆಂಡುಲ್ಕರ್‌ಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
ಜಗತ್ತಿನ ಶ್ರೀಮಂತ ಕ್ರಿಕೆಟ್ ಮಂಡಳಿ ಎಂದೇ ಪ್ರಸಿದ್ಧಿ ಪಡೆದಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತಮ್ಮ ಅಧಿಕೃತ 'ಎಕ್ಸ್'(ಟ್ವಿಟರ್) ಮೂಲಕ ಸಚಿನ್ ತೆಂಡುಲ್ಕರ್‌ಗೆ ವಿನೂತನವಾಗಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದೆ.
'664 ಅಂತರಾಷ್ಟ್ರೀಯ ಪಂದ್ಯಗಳು, 34,357 ಅಂತಾರಾಷ್ಟ್ರೀಯ ರನ್‌ಗಳು, 201 ಅಂತಾರಾಷ್ಟ್ರೀಯ ವಿಕೆಟ್‌ಗಳು, 2011ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಕ ಸಿಡಿಸಿದ ಏಕೈಕ ಆಟಗಾರ, ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್‌ಗೆ ಹುಟ್ಟುಹಬ್ಬದ ಶುಭಾಶಯಗಳು' ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
ಮುಂಬೈ ಇಂಡಿಯನ್ಸ್ ಐದು ಸೋಲಿನ ಹಿಂದಿದೆ ಪಾಂಡ್ಯ ಮಾಡಿದ 5 ಬಿಗ್ ಮಿಸ್ಟೇಕ್ಸ್..!
ಇನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡಾ, ಎಕ್ಸ್ ಮೂಲಕ ಶುಭಕೋರಿಸಿದ್ದು, ಜಗತ್ತಿನಾದ್ಯಂತ ಇರುವ ಲಕ್ಷಾಂತರ ಮಂದಿಗೆ ಸ್ಪೂರ್ತಿಯ ಚಿಲುಮೆಯಾಗಿರುವ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
ಇನ್ನುಳಿದಂತೆ 2011ರ ಏಕದಿನ ವಿಶ್ವಕಪ್ ಟೂರ್ನಿಯ ಹೀರೋ ಯುವರಾಜ್ ಸಿಂಗ್, ಸುರೇಶ್ ರೈನಾ ಸೇರಿದಂತೆ ಹಲವು ಮಂದಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್‌ಗೆ ಶುಭ ಕೋರಿದ್ದಾರೆ.
ಮಹಾರಾಷ್ಟ್ರ ಮೂಲದ ಸಚಿನ್ ತೆಂಡುಲ್ಕರ್ ಏಪ್ರಿಲ್ 24, 1973ರಲ್ಲಿ ಮುಂಬೈನಲ್ಲಿ ಜನಿಸಿದ್ದರು. ಇನ್ನು ತಮ್ಮ 16ನೇ ವಯಸ್ಸಿನಲ್ಲಿ ಅಂದರೆ ನವೆಂಬರ್ 15, 1989ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇನ್ನು ಅದೇ ವರ್ಷ ಡಿಸೆಂಬರ್ 18ರಂದು ಭಾರತ ಏಕದಿನ ಕ್ರಿಕೆಟ್ ತಂಡಕ್ಕೂ ಪಾದಾರ್ಪಣೆ ಮಾಡಿದ್ದರು. ಇದಾದ ಬಳಿಕ ಸುಮಾರು ಎರಡೂವರೆ ದಶಕಗಳ ಕಾಲ ಮಾಸ್ಟರ್ ಬ್ಲಾಸ್ಟರ್ ತೆಂಡುಲ್ಕರ್ ಕ್ರಿಕೆಟ್ ಜಗತ್ತನ್ನು ಆಳಿದರು. ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿ ಗರಿಷ್ಠ ಟೆಸ್ಟ್ ಹಾಗೂ ಏಕದಿನ ರನ್ ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ.
ಕ್ರಿಕೆಟಿಗ ಸಂದೀಪ್ ಶರ್ಮಾ ಪತ್ನಿ ನಮ್ಮ ಬೆಂಗಳೂರಿನವರು..! ಓದಿದ್ದು ಇದೇ ಕಾಲೇಜ್
200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ತೆಂಡುಲ್ಕರ್ 15, 921 ರನ್ ಬಾರಿಸಿದ್ದಾರೆ. ಇದರಲ್ಲಿ 51 ಶತಕಗಳು ಸೇರಿವೆ. ಇನ್ನು 463 ಏಕದಿನ ಪಂದ್ಯಗಳನ್ನಾಡಿ 19 ಶತಕ ಹಾಗೂ 96 ಅರ್ಧಶತಕ ಸಹಿತ 18,426 ರನ್ ಬಾರಿಸಿದ್ದಾರೆ. ಸಚಿನ್ ತೆಂಡುಲ್ಕರ್ ಭಾರತ ಪರ 6 ಬಾರಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದಾರೆ.
