ದೇವ್ರನ್ನ ಬೇಡಿಕೊಂಡು ಬಾಲ್‌ ಎಸೆದ ಹಾರ್ದಿಕ್‌, ಬಿತ್ತು ಇಮಾಮ್‌ ವಿಕೆಟ್‌! ವಿಡಿಯೋ ವೈರಲ್

ಟೀಂ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ ಹಾಗೂ ಕುಲ್ದೀಪ್ ಯಾದವ್ ತಲಾ 2 ವಿಕೆಟ್ ಕಬಳಿಸಿದರು. ಟೀಂ ಇಂಡಿಯಾ ಬೌಲರ್‌ಗಳು ಎಷ್ಟು ಮಾರಕ ದಾಳಿ ನಡೆಸಿದರೆಂದರೆ, ಪಾಕಿಸ್ತಾನದ ಯಾವೊಬ್ಬ ಬ್ಯಾಟರ್ ಕೂಡಾ ಕನಿಷ್ಠ ಒಂದು ಸಿಕ್ಸ್ ಬಾರಿಸಲು ಸಾಧ್ಯವಾಗಲಿಲ್ಲ.

Hardik Pandya blows special Mantra in the ball gets Imam ul Haq on the same delivery video goes viral kvn

ಅಹಮದಾಬಾದ್(ಅ.14): ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬದ್ದ ಎದುರಾಳಿ ಪಾಕಿಸ್ತಾನ ವಿರುದ್ದ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ತೋರುವಲ್ಲಿ ಯಶಸ್ವಿಯಾಗಿದೆ. ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಕೇವಲ 191 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಟೀಂ ಇಂಡಿಯಾ ಬೌಲರ್‌ಗಳು ಯಶಸ್ವಿಯಾಗಿದ್ದಾರೆ. ಇನ್ನು ಇನಿಂಗ್ಸ್‌ ವೇಳೆ ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಪಾಕಿಸ್ತಾನದ ಆರಂಭಿಕ ಬ್ಯಾಟರ್ ಇಮಾಮ್ ಉಲ್ ಹಕ್ ಅವರನ್ನು ಬಲಿ ಪಡೆಯುವ ಮುನ್ನ ಮಂತ್ರ ಹಾಕಿದ ಕ್ಷಣವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಪಾಕಿಸ್ತಾನ ತಂಡವು ಸಾಕಷ್ಟು ಎಚ್ಚರಿಕೆಯ ಆರಂಭವನ್ನು ಪಡೆಯಿತು. ಪಾಕಿಸ್ತಾನದ ಆರಂಭಿಕರಾದ ಅಬ್ದುಲ್ಲಾ ಶಫೀಕ್ ಹಾಗೂ ಇಮಾಮ್ ಉಲ್ ಹಕ್ ಜೋಡಿ ಮೊದಲ ವಿಕೆಟ್‌ಗೆ 41 ರನ್‌ಗಳ ಜತೆಯಾಟ ನಿಭಾಯಿಸಿದರು. ಈ ವೇಳೆ 20 ರನ್‌ ಗಳಿಸಿದ್ದ ಶಫೀಕ್ ಅವರನ್ನು ಬಲಿಪಡೆಯುವಲ್ಲಿ ಸಿರಾಜ್ ಯಶಸ್ವಿಯಾದರು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಬಾಬರ್ ಅಜಂ ಹಾಗೂ ಇಮಾಮ್ ಉಲ್ ಹಕ್‌ ಎಚ್ಚರಿಕೆಯ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾಗುವ ಯತ್ನ ನಡೆಸಿದರು

ಮ್ಯಾಜಿಕ್ ಮಾಡಿದ ಪಾಂಡ್ಯ: ಬಾಬರ್ ಅಜಂ ಹಾಗೂ ಇಮಾಮ್‌ ಉಲ್ ಹಕ್‌ 32 ರನ್ ಜತೆಯಾಟವಾಡುತ್ತಿದ್ದ ವೇಳೆ ದಾಳಿಗಿಳಿದ ಹಾರ್ದಿಕ್ ಪಾಂಡ್ಯ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಯಶಸ್ವಿಯಾದರು. ಇಮಾಮ್ ವಿಕೆಟ್‌ ಪಡೆಯುವ ಮುನ್ನ ಹಾರ್ದಿಕ್ ಪಾಂಡ್ಯ, ಚೆಂಡನ್ನು ಕೈಯಲ್ಲಿ ಹಿಡಿದು ದೇವರನ್ನು ಪ್ರಾರ್ಥಿಸಿ ಮಂತ್ರಹಾಕಿ ಚೆಂಡನ್ನು ಎಸೆದರು. ಪರಿಣಾಮ 36 ರನ್ ಗಳಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ಇಮಾಮ್ ಉಲ್ ಹಕ್‌  ಕೆ ಎಲ್ ರಾಹುಲ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

36 ರನ್‌ಗೆ 8 ವಿಕೆಟ್‌..! ಭಾರತದ ಬೌಲಿಂಗ್‌ಗೆ ದಿಕ್ಕೆಟ್ಟ ಪಾಕ್‌ 191ಕ್ಕೆ ಆಲೌಟ್‌!

ಹೀಗಿತ್ತು ನೋಡಿ ಆ ಮ್ಯಾಜಿಕ್ ಕ್ಷಣ:

ಇನ್ನು ಈ ಪಂದ್ಯದ ಬಗ್ಗೆ ಹೇಳುವುದಾದರೇ, ಉತ್ತಮ ಆರಂಭ ಪಡೆದಿದ್ದ ಪಾಕಿಸ್ತಾನ ತಂಡವು 155 ರನ್‌ಗಳಿಗೆ ಕೇವಲ 2 ವಿಕೆಟ್ ಕಳೆದುಕೊಂಡು ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿತ್ತು. ಆದರೆ 50 ರನ್ ಬಾರಿಸಿ ಬಾಬರ್ ಅಜಂ ವಿಕೆಟ್ ಪತನವಾಗುತ್ತಿದ್ದಂತೆಯೇ ಪಾಕಿಸ್ತಾನ ಕ್ರಿಕೆಟ್ ತಂಡವು ನಾಟಕೀಯ ಕುಸಿತ ಕಂಡಿತು. ಪಾಕಿಸ್ತಾನ ತಂಡವು ಕೇವಲ 36 ರನ್ ಅಂತರದಲ್ಲಿ ಉಳಿದ 8 ವಿಕೆಟ್ ಕಳೆದುಕೊಳ್ಳುವ ಮೂಲಕ ಕೇವಲ 191 ರನ್‌ಗಳಿಗೆ ಸರ್ವಪತನ ಕಂಡಿತು. ವಿಕೆಟ್‌ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಬಾರಿಸಿದ 49 ರನ್‌ ಪಾಕಿಸ್ತಾನ ಪರ ದಾಖಲಾದ ಎರಡನೇ ಗರಿಷ್ಠ ವೈಯುಕ್ತಿಕ ಸ್ಕೋರ್ ಎನಿಸಿಕೊಂಡಿತು. 

IND vs PAK ಪಂದ್ಯದ ನಡುವೆ ಕಾಣಿಸಿಕೊಂಡ ಸ್ಟಾಂಡ್ ವಿಥ್ ಇಸ್ರೇಲ್ ಪ್ಲಕಾರ್ಡ್, ಪ್ರತಿಕ್ರಿಯಿಸಿದ ಸರ್ಕಾರ!

ಟೀಂ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ ಹಾಗೂ ಕುಲ್ದೀಪ್ ಯಾದವ್ ತಲಾ 2 ವಿಕೆಟ್ ಕಬಳಿಸಿದರು. ಟೀಂ ಇಂಡಿಯಾ ಬೌಲರ್‌ಗಳು ಎಷ್ಟು ಮಾರಕ ದಾಳಿ ನಡೆಸಿದರೆಂದರೆ, ಪಾಕಿಸ್ತಾನದ ಯಾವೊಬ್ಬ ಬ್ಯಾಟರ್ ಕೂಡಾ ಕನಿಷ್ಠ ಒಂದು ಸಿಕ್ಸ್ ಬಾರಿಸಲು ಸಾಧ್ಯವಾಗಲಿಲ್ಲ.

Latest Videos
Follow Us:
Download App:
  • android
  • ios