ಏಷ್ಯಾಕಪ್ 2025 ಕ್ಕೆ ಸಜ್ಜಾಗಿರುವ ಹಾರ್ದಿಕ್ ಪಾಂಡ್ಯ, ಹೊಸ ಹೇರ್‌ಸ್ಟೈಲ್‌ನೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದಾರೆ. ಅಭಿಮಾನಿಗಳು ಹೊಸ ಲುಕ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹೊಸ ಗೆಟಪ್‌ನಲ್ಲಿ ಏಷ್ಯಾಕಪ್‌ನಲ್ಲಿ ಮಿಂಚಲಿದ್ದಾರೆ ಎಂಬ ನಿರೀಕ್ಷೆಯಿದೆ.

ಬೆಂಗಳೂರು: ಏಷ್ಯಾಕಪ್ 2025 ಕ್ಕೆ ಭಾರತ ತಂಡ ಸಂಪೂರ್ಣವಾಗಿ ಸಜ್ಜಾಗಿದೆ. ಇನ್ನು ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಅಭ್ಯಾಸದ ಜೊತೆಗೆ ತಮ್ಮ ಲುಕ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಹೊಸ ಹೇರ್ ಕಟ್ ಮತ್ತು ಕಲರ್ ಮಾಡಿಸಿದ್ದು, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಹೊಸ ಗೆಟಪ್ ನಲ್ಲಿ ಹಾರ್ದಿಕ್ ಪಾಂಡ್ಯ ಹಾಲಿವುಡ್ ಸ್ಟಾರ್ ಥರ ಕಾಣ್ತಿದ್ದಾರೆ. ಹಾರ್ದಿಕ್ ಪಾಂಡ್ಯ ಅವರ ವೈರಲ್ ಫೋಟೋಗಳು ಇಲ್ಲಿವೆ.

ಹೊಸ ಲುಕ್ ಗೆ ಫ್ಯಾನ್ಸ್ ಫಿದಾ

ಇನ್ಸ್ಟಾಗ್ರಾಮ್ ನಲ್ಲಿ ಹಾರ್ದಿಕ್ ಪಾಂಡ್ಯ ತಮ್ಮ ಪೇಜ್ ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. "ಹೊಸ ನಾನು" ಎಂದು ಬರೆದುಕೊಂಡಿದ್ದಾರೆ. ಹೊಸ ಹೇರ್ ಸ್ಟೈಲ್ ನಲ್ಲಿ ಪಾಂಡ್ಯ ಕಾಣಿಸಿಕೊಂಡಿದ್ದಾರೆ. ಬದಿಯಲ್ಲಿ ಕೂದಲು ಕಡಿಮೆ ಇದ್ದು, ಮುಂದೆ ಸ್ವಲ್ಪ ಉದ್ದವಾಗಿದೆ. ಬ್ಲಾಂಡ್ ಕಲರ್ ಕೂದಲು ಮತ್ತು ಕಪ್ಪು ಗಡ್ಡ. ಈ ಲುಕ್ ಗೆ 9 ಲಕ್ಷಕ್ಕೂ ಹೆಚ್ಚು ಲೈಕ್ಸ್ ಬಂದಿವೆ.

View post on Instagram

ಲುಕ್ ಗೆ ಫ್ಯಾನ್ಸ್ ಫಿದಾ

ಹಾರ್ದಿಕ್ ಫೋಟೋಗಳಿಗೆ ಫ್ಯಾನ್ಸ್ ಲವ್ ಇಮೋಜಿ ಹಾಕ್ತಿದ್ದಾರೆ. ಸ್ಟೈಲ್ ಸೂಪರ್ ಅಂತ ಕಮೆಂಟ್ ಮಾಡ್ತಿದ್ದಾರೆ. ಹೊಸ ಲುಕ್ ಚೆನ್ನಾಗಿದೆ ಅಂತೆಲೂ ಹೇಳ್ತಿದ್ದಾರೆ. ಭಾರತ ತಂಡದ ಸ್ಟೈಲಿಶ್ ಆಟಗಾರರಲ್ಲಿ ಹಾರ್ದಿಕ್ ಒಬ್ಬರು. ಈ ಬಾರಿ ಹೊಸ ಟ್ರೆಂಡಿ ಹೇರ್ ಕಲರ್ ಮಾಡಿಸಿದ್ದಾರೆ. ಏಷ್ಯಾಕಪ್ ನಲ್ಲಿ ಈ ಹೇರ್ ಸ್ಟೈಲ್ ನಲ್ಲಿ ಅವರನ್ನು ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ. ಸೆಪ್ಟೆಂಬರ್ 9 ರಿಂದ ದುಬೈನಲ್ಲಿ ಏಷ್ಯಾಕಪ್ ಶುರುವಾಗಲಿದೆ. ಹಾರ್ದಿಕ್ ಕೂಡ ತಂಡದಲ್ಲಿದ್ದಾರೆ.

ಟೀಂ ಇಂಡಿಯಾಗೆ ಎಕ್ಸ್‌ ಫ್ಯಾಕ್ಟರ್ ಆಗಬಹುದು ಪಾಂಡ್ಯ:

2025ರ ಏಷ್ಯಾಕಪ್ ಟೂರ್ನಿಯಲ್ಲಿ ಅನುಭವಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಟೀಂ ಇಂಡಿಯಾ ಪಾಲಿಗೆ ಎಕ್ಸ್‌ ಫ್ಯಾಕ್ಟರ್ ಆಗುವ ಸಾಧ್ಯತೆಯಿದೆ. ಹಾರ್ದಿಕ್ ಪಾಂಡ್ಯ, ಟೀಂ ಇಂಡಿಯಾ ಪರ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮ್ಯಾಜಿಕ್ ಮಾಡುವ ಸಾಧ್ಯತೆಯಿದೆ. ಬ್ಯಾಟಿಂಗ್‌ನಲ್ಲಿ ಫಿನಿಶರ್ ಪಾತ್ರವನ್ನು ನಿರ್ವಹಿಸಲಿರುವ ಪಾಂಡ್ಯ, ಬೌಲಿಂಗ್‌ನಲ್ಲಿ 4 ಓವರ್‌ ಪರಿಣಾಮಕಾರಿ ದಾಳಿ ನಡೆಸುವ ಕ್ಷಮತೆ ಹೊಂದಿದ್ದಾರೆ.

ದುಬೈನಲ್ಲಿ ಇಂದಿನಿಂದ ಪ್ರಾಕ್ಟೀಸ್ ಆರಂಭ: ಒಂದು ತಿಂಗಳಿನಿಂದ ಭಾರತದ ಹಲವು ಕ್ರಿಕೆಟಿಗರು ಆಟದಿಂದ ಬ್ರೇಕ್ ಪಡೆದುಕೊಂಡಿದ್ದರು. ಆದರೆ ಇದೀಗ ಏಷ್ಯಾಕಪ್ ಟೂರ್ನಿಗೆ ತಯಾರಿ ನಡೆಸುವ ನಿಟ್ಟಿನಲ್ಲಿ ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ಮೊದಲ ಪ್ರಾಕ್ಟೀಸ್ ಸೆಷನ್‌ನಲ್ಲಿ ಭಾರತದ ಆಟಗಾರರು ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಹಾರ್ದಿಕ್ ಪಾಂಡ್ಯ, ನಾಯಕ ಸೂರ್ಯಕುಮಾರ್ ಯಾದವ್ ಸೇರಿದಂತೆ ಬಹುತೇಕ ಆಟಗಾರರು ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ದುಬೈ ತಲುಪಿದ್ದಾರೆ.

ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಹೀಗಿದೆ:

ಸೂರ್ಯಕುಮಾರ್ ಯಾದವ್(ನಾಯಕ), ಶುಭ್‌ಮನ್ ಗಿಲ್(ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್‌ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಕುಮಾರ್(ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಹರ್ಷಿತ್ ರಾಣಾ, ರಿಂಕು ಸಿಂಗ್.

ಏಷ್ಯಾಕಪ್ ಟೂರ್ನಿಗೆ ಭಾರತದ ವೇಳಾಪಟ್ಟಿ:

ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡವು ಎಂಟು ಬಾರಿ ಚಾಂಪಿಯನ್ ಆಗುವ ಮೂಲಕ ಅತ್ಯಂತ ಯಶಸ್ವಿ ತಂಡವಾಗಿ ಹೊರಹೊಮ್ಮಿದೆ. ಹಾಲಿ ಚಾಂಪಿಯನ್ ಭಾರತ 9ನೇ ಏಷ್ಯಾಕಪ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ಸೆಪ್ಟೆಂಬರ್ 10ರಂದು ಯುಎಇ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಇದಾದ ಬಳಿಕ ಸೆಪ್ಟೆಂಬರ್ 14ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಾದಾಡಲಿದೆ. ಇನ್ನು ಸೆಪ್ಟೆಂಬರ್ 19ರಂದು ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಓಮಾನ್ ತಂಡವನ್ನು ಎದುರಿಸಲಿದೆ.