Asianet Suvarna News Asianet Suvarna News

ಆಫ್ಘಾನಿಸ್ತಾನ ಎದುರಿನ ಸರಣಿಯಿಂದ ಹಾರ್ದಿಕ್ ಪಾಂಡ್ಯ ಔಟ್; ಐಪಿಎಲ್ ವೇಳೆಗೆ ಸಂಪೂರ್ಣ ಫಿಟ್?

ಟೀಂ ಇಂಡಿಯಾದ ಪ್ರಮುಖ ಆಲ್ರೌಂಡರ್ ಆಗಿ ಗುರುತಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ, 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ನಾಲ್ಕು ಪಂದ್ಯಗಳನ್ನಾಡಿದ್ದರು. ಅಕ್ಟೋಬರ್ 19ರಂದು ನಡೆದ ಬಾಂಗ್ಲಾದೇಶ ಎದುರಿನ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಗಾಯಗೊಂಡು ಮೈದಾನ ತೊರೆದಿದ್ದ ಪಾಂಡ್ಯ, ಇದೀಗ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ 

Hardik Pandya to miss T20I series vs Afghanistan likely to be fit ahead of IPL 2024 kvn
Author
First Published Dec 27, 2023, 5:08 PM IST

ಬೆಂಗಳೂರು(ಡಿ.27): ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬರುವ ಆಫ್ಘಾನಿಸ್ತಾನ ಎದುರಿನ ಟಿ20 ಸರಣಿಯಲ್ಲಿ ಪಾಲ್ಗೊಳ್ಳುವುದು ಅನುಮಾನ ಎನಿಸಿದೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ವೇಳೆ ಪಾದದ ಗಾಯಕ್ಕೆ ಒಳಗಾಗಿ ತಂಡದಿಂದ ಹೊರಬಿದ್ದಿರುವ ಪಾಂಡ್ಯ, ದಕ್ಷಿಣ ಆಫ್ರಿಕಾ ಪ್ರವಾಸದಿಂದಲೂ ಹೊರಬಿದ್ದಿದ್ದರು. ಇದೀಗ ಹಾರ್ದಿಕ್ ಪಾಂಡ್ಯ 2024ರ ಐಪಿಎಲ್ ಟೂರ್ನಿಯ ವೇಳೆಯಲ್ಲಿ ಮೈದಾನಕ್ಕೆ ಮರಳಲಿದ್ದಾರೆ ಎಂದು ವರದಿಯಾಗಿದೆ.

ಟೀಂ ಇಂಡಿಯಾದ ಪ್ರಮುಖ ಆಲ್ರೌಂಡರ್ ಆಗಿ ಗುರುತಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ, 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ನಾಲ್ಕು ಪಂದ್ಯಗಳನ್ನಾಡಿದ್ದರು. ಅಕ್ಟೋಬರ್ 19ರಂದು ನಡೆದ ಬಾಂಗ್ಲಾದೇಶ ಎದುರಿನ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಗಾಯಗೊಂಡು ಮೈದಾನ ತೊರೆದಿದ್ದ ಪಾಂಡ್ಯ, ಇದೀಗ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ 

Boxing Day Test ಸೆಂಚೂರಿಯನ್‌ನಲ್ಲಿ ಶತಕ ಚಚ್ಚಿದ ರಾಹುಲ್; ತೆಂಡುಲ್ಕರ್ ಸಾಲಿಗೆ ಸೇರಿದ ಕನ್ನಡಿಗ

ವಿಶ್ವಕಪ್ ಬಳಿಕ ತವರಿನಲ್ಲೇ ನಡೆದ ಆಸ್ಟ್ರೇಲಿಯಾ ಎದುರಿನ 5 ಪಂದ್ಯಗಳ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. ಇದಾದ ಬಳಿಕ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಸೀಮಿತ ಓವರ್‌ಗಳ ಸರಣಿಯಿಂದ ನಾಯಕ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿದ್ದರಿಂದ, ಏಕದಿನ ಸರಣಿಯನ್ನು ಕೆ ಎಲ್ ರಾಹುಲ್ ಮುನ್ನಡೆಸಿದರೆ, ಟಿ20 ಸರಣಿಯನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದ್ದರು. 

ಇದೀಗ ಹಾರ್ದಿಕ್ ಪಾಂಡ್ಯ, ಆಫ್ಘಾನಿಸ್ತಾನ ಎದುರಿನ ಸರಣಿಗೆ ಅಲಭ್ಯರಾಗುವುದು ಬಹುತೇಕ ಖಚಿತವಾದ ಹಿನ್ನೆಲೆಯಲ್ಲಿ ಈ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿಯು ಹೊಸ ನಾಯಕನ ಹುಡುಕಾಟದಲ್ಲಿದೆ. ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಯಲ್ಲಿ ಉಪನಾಯಕನಾಗಿ ಕಾರ್ಯ ನಿರ್ವಹಿಸಿದ ಅನುಭವವಿರುವ ರವೀಂದ್ರ ಜಡೇಜಾಗೆ, ಆಫ್ಘಾನ್ ಎದುರಿನ ಸರಣಿಗೆ ನಾಯಕತ್ವ ಪಟ್ಟ ಕಟ್ಟುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Boxing Day Test: ಕೆ ಎಲ್ ರಾಹುಲ್ ಭರ್ಜರಿ ಶತಕ; ಭಾರತ 245ಕ್ಕೆ ಆಲೌಟ್

ಇನ್ನು ಹಾರ್ದಿಕ್ ಪಾಂಡ್ಯ 2024ರ ಐಪಿಎಲ್ ಟೂರ್ನಿಯ ವೇಳೆಗೆ ಸಂಪೂರ್ಣ ಫಿಟ್ ಆಗಿ, ಮುಂಬೈ ಇಂಡಿಯನ್ಸ್ ತಂಡವನ್ನು ನಾಯಕರಾಗಿ ಮುನ್ನಡೆಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹಾರ್ದಿಕ್ ಪಾಂಡ್ಯ ಕಳೆದ ತಿಂಗಳಷ್ಟೇ, ಗುಜರಾತ್ ಟೈಟಾನ್ಸ್ ತಂಡವನ್ನು ತೊರೆದು ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿದ್ದರು. ಇದರ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಹಾರ್ದಿಕ್ ಪಾಂಡ್ಯಗೆ ನಾಯಕ ಪಟ್ಟ ಕಟ್ಟಿದೆ.

ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಕಳೆದೆರಡು ಐಪಿಎಲ್ ಸೀಸನ್‌ನಲ್ಲಿ ಅದ್ಭುತ ಪ್ರದರ್ಶನ ತೋರಿತ್ತು. ನಾಯಕನಾದ ಮೊದಲ ಪ್ರಯತ್ನದಲ್ಲೇ ಹಾರ್ದಿಕ್ ಪಾಂಡ್ಯ 2022ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಇನ್ನು 2023ರ ಐಪಿಎಲ್ ಟೂರ್ನಿಯಲ್ಲೂ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಅದ್ಭುತ ಪ್ರದರ್ಶನ ತೋರುವ ಮೂಲಕ ಫೈನಲ್ ಪ್ರವೇಶಿಸಿತ್ತಾದರೂ, ಫೈನಲ್‌ನಲ್ಲಿ ಕೊನೆಯ ಎಸೆತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಎದುರು ರೋಚಕ ಸೋಲು ಅನುಭವಿಸಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. 

Follow Us:
Download App:
  • android
  • ios