* ಇಂಗ್ಲೆಂಡ್ ಪ್ರವಾಸದ ಕೊನೆಯ ಪಂದ್ಯಕ್ಕೆ ಸಜ್ಜಾದ ಭಾರತೀಯ ಮಹಿಳಾ ಕ್ರಿಕೆಟ್‌ ತಂಡ* ಟಿ20 ಸರಣಿ ಮೇಲೆ ಕಣ್ಣಿಟ್ಟಿರುವ ಹರ್ಮನ್‌ಪ್ರೀತ್ ಕೌರ್ ಪಡೆ* ಏಕದಿನ ಸರಣಿ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಭಾರತ ಕ್ರಿಕೆಟ್ ತಂಡ

ಲಂಡನ್‌(ಜು.14)‌: ಟಿ20 ಸರಣಿ ಮೇಲೆ ಕಣ್ಣಿಟ್ಟಿರುವ ಭಾರತ ಮಹಿಳಾ ಕ್ರಿಕೆಟ್ ತಂಡ ಬುಧವಾರ(ಜು.14) ಇಂಗ್ಲೆಂಡ್‌ ವಿರುದ್ಧ 3ನೇ ಪಂದ್ಯವನ್ನಾಡಲು ಸಜ್ಜಾಗಿದೆ. ಮೂರು ಪಂದ್ಯಗಳ ಸರಣಿ ಈಗಾಗಲೇ 1-1ರಿಂದ ಸಮಗೊಂಡಿದ್ದು, ಗೆದ್ದ ತಂಡಕ್ಕೆ ಸರಣಿ ಒಲಿಯಲಿದೆ. 

ಮೊದಲ ಪಂದ್ಯದಲ್ಲಿ ಸೋಲನ್ನಭವಿಸಿದ್ದ ಭಾರತ ತಂಡ, 2ನೇ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಇಂಗ್ಲೆಂಡ್‌ಗೆ ತಿರುಗೇಟು ನೀಡಿತ್ತು. ಈ ಗೆಲುವಿನ ವಿಶ್ವಾಸದಲ್ಲಿ ತೇಲುತ್ತಿರುವ ಹರ್ಮನ್‌ಪ್ರೀತ್‌ ಕೌರ್‌ ನೇತೃತ್ವದ ಪಡೆ, ಇಂಗ್ಲೆಡ್‌ಗೆ ಸಡ್ಡು ಹೊಡೆಯುವ ಮೂಲಕ ಏಕದಿನ ಸರಣಿ ಸೋಲಿನ ಸೇಡನ್ನು ತೀರಿಸಿಕೊಳ್ಳುವ ಲೆಕ್ಕಾಚಾರದಲ್ಲಿದೆ.

2ನೇ ಮಹಿಳಾ ಟಿ20: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ ರೋಚಕ ಜಯ

ಎರಡನೇ ಏಕದಿನ ಪಂದ್ಯದಲ್ಲಿ ಶಫಾಲಿ ವರ್ಮಾ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದರು, ಇನ್ನು ಬೌಲಿಂಗ್‌ನಲ್ಲಿ ದೀಪ್ತಿ ಶರ್ಮಾ ಹಾಗೂ ಪೂನಂ ಯಾದವ್‌ ಚಾಣಾಕ್ಷ ದಾಳಿ ನಡೆಸುವ ಮೂಲಕ ಭಾರತಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಇದೀಗ ನಿರ್ಣಾಯಕ ಪಂದ್ಯವನ್ನು ಗೆದ್ದು, ಗೆಲುವಿನೊಂದಿಗೆ ಇಂಗ್ಲೆಂಡ್‌ ಪ್ರವಾಸವನ್ನು ಅಂತ್ಯಗೊಳಿಸಲು ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಎದುರು ನೋಡುತ್ತಿದೆ.

ಪಂದ್ಯ ಆರಂಭ ರಾತ್ರಿ: 11
ನೇರ ಪ್ರಸಾರ: ಸೋನಿ ನೆಟ್‌ವರ್ಕ್‌