ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ. ಈ ಪಂದ್ಯದ ಟಿಕೆಟ್‌ಗಳ ಮಾರಾಟ ಇಂದಿನಿಂದ ಆರಂಭವಾಗಲಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು: ಅಕ್ಟೋಬರ್ 16ರಿಂದ 20ರ ವರೆಗೆ ಭಾರತ ಹಾಗೂ ನ್ಯೂಜಿಲೆಂಡ್‌ ನಡುವೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿರುವ ಮೊದಲ ಟೆಸ್ಟ್‌ ಪಂದ್ಯದ ಟಿಕೆಟ್‌ ಮಾರಾಟ ಶನಿವಾರ ಆರಂಭಗೊಳ್ಳಲಿದೆ. ಟಿಕೆಟ್‌ಗಳನ್ನು ಬೆಳಗ್ಗೆ 10 ಗಂಟೆಯಿಂದ ಆನ್‌ಲೈನ್‌ನಲ್ಲಿ ಮಾರಾಟಕ್ಕೆ ಇಡುವುದಾಗಿ ರಾಜ್ಯ ಕ್ರಿಕೆಟ್‌ ಸಂಸ್ಥೆ(ಕೆಎಸ್‌ಸಿಎ) ತಿಳಿಸಿದೆ. 

ಟಿಕೆಟ್‌ಗೆ ಕನಿಷ್ಠ ₹600, ಗರಿಷ್ಠ ₹7500 ದರ ನಿಗದಿಪಡಿಸಲಾಗಿದೆ. ಟಿಕೆಟ್‌ಗಳನ್ನು ಸದ್ಯಕ್ಕೆ ಆನ್‌ಲೈನ್‌ನಲ್ಲಿ ಮಾತ್ರ ಮಾರಾಟಕ್ಕೆ ಇಡಲಾಗಿದ್ದು, ಬಾಕ್ಸ್‌ ಆಫೀಸ್‌ ಮಾರಾಟದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. www.insider.in ಅಥವಾ www.ksca.cricket ವೆಬ್‌ಸೈಟ್‌ನಲ್ಲಿ ಟಿಕೆಟ್‌ಗಳು ಲಭ್ಯವಿದೆ ಎಂದು ಕೆಎಸ್‌ಸಿಎ ತಿಳಿಸಿದೆ.

ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ ಶರದ್ ಮುಖ್ಯಸ್ಥ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಭ್ರಷ್ಟಾಚಾರ ನಿಗ್ರಹ ಘಟಕದ ಮುಖ್ಯಸ್ಥರಾಗಿ ನಿವೃತ್ತ ಐಪಿಎಸ್ ಅಧಿಕಾರಿ ಶರದ್ ಕುಮಾರ್ ನೇಮಕಗೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ನೇಮಕ ಪ್ರಕ್ರಿಯೆ ನಡೆದಿದೆ. 

ಶರದ್ ಅವರು ಮಾಜಿ ಐಪಿಎಸ್‌ ಅಧಿಕಾರಿ ಕೆ.ಕೆ. ಮಿಶ್ರಾ ಅವರ ನಿರ್ಗಮನದಿಂದ ತೆರವುಗೊಂಡ ಸ್ಥಾನವನ್ನು ತುಂಬಲಿದ್ದಾರೆ. ಉತ್ತರ ಪ್ರದೇಶದ 68 ವರ್ಷದ ಶರದ್ 1979ರ ಬ್ಯಾಚ್‌ನ ಹರ್ಯಾಣ ಕೇಡರ್ ಐಪಿಎಸ್ ಅಧಿಕಾರಿ. ಅವರು 2013ರಿಂದ 2017ರ ವರೆಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು.

ಇರಾನಿ ಕಪ್: ಶೇಷ ಭಾರತ ವಿರುದ್ದ ಮುಂಬೈಗೆ ಮುನ್ನಡೆ; ರೋಚಕಘಟ್ಟದತ್ತ ಕೊನೆಯ ದಿನದಾಟ

ಕ್ರಿಕೆಟ್‌ ಸಂಸ್ಥೆ ಅಕ್ರಮ: ಅಜರ್‌ಗೆ ಇ.ಡಿ. ಸಮನ್ಸ್‌

ಹೈದರಾಬಾದ್‌: ಹೈದರಾಬಾದ್‌ ಕ್ರಿಕೆಟ್‌ ಸಂಸ್ಥೆಯ 20 ಕೋಟಿ ರು. ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ (ಇ.ಡಿ.) ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಕಾಂಗ್ರೆಸ್‌ ಮುಖಂಡ ಮೊಹಮ್ಮದ್‌ ಅಜರುದ್ದೀನ್‌ಗೆ ಸಮನ್ಸ್‌ ನೀಡಿದೆ. ಆದರೆ ಅಜರ್‌ ವಿಚಾರಣೆಗೆ ಗೈರಾಗಿದ್ದಾರೆ. ಗುರುವಾರ ಹೇಳಿಕೆ ನೀಡುವಂತೆ 61 ವರ್ಷದ ಅಜರ್‌ಗೆ ಇ.ಡಿ. ಈ ಹಿಂದೆ ಸಮನ್ಸ್ ಜಾರಿ ಮಾಡಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಹೇಳಿಕೆ ದಾಖಲಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಅಜರ್‌ ಹೆಚ್ಚಿನ ಕಾಲಾವಕಾಶ ಕೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಅ.8ರಂದು ವಿಚಾರಣೆಗೆ ಬರಲು ಹೊಸದಾಗಿ ಸಮನ್ಸ್‌ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಾರ್ಡರ್‌-ಗವಾಸ್ಕರ್ ಸರಣಿಯಿಂದ ಮೊಹಮ್ಮದ್ ಶಮಿ ಔಟ್?: ಗಾಳಿ ಸುದ್ದಿ ಬಗ್ಗೆ ತುಟಿಬಿಚ್ಚಿದ ಟೀಂ ಇಂಡಿಯಾ ವೇಗಿ

ಹೈದರಾಬಾದ್‌ ಕ್ರಿಕೆಟ್‌ ಸಂಸ್ಥೆಯು ರಾಜೀವ್‌ ಗಾಂಧಿ ಕ್ರೀಡಾಂಗಣಕ್ಕೆ ಜನರೇಟರ್‌, ಅಗ್ನಿ ನಂದಕ ವ್ಯವಸ್ಥೆ ಹಾಗೂ ಕೆನೋಪಿ ಖರೀದಿಸಿತ್ತು. ಇದರಲ್ಲಿ 20 ಕೋಟಿ ರು. ಅವ್ಯವಹಾರವಾಗಿದೆ ಎಂಬ ಕಾರಣ ಇ.ಡಿ. ಪ್ರಕರಣ ದಾಖಲಿಸಿಕೊಂಡಿತ್ತು. ಹಲವರ ಮೇಲೆ ಕಳೆದ ನವೆಂಬರ್‌ನಲ್ಲಿ ದಾಳಿ ನಡೆಸಿ ಶೋಧ ಕಾರ್ಯಾಚರಣೆಯನ್ನೂ ನಡೆಸಿತ್ತು.