Asianet Suvarna News Asianet Suvarna News

ಆಸೀಸ್‌ ಎದುರು ಸರಣಿ ಗೆದ್ದು ಬೀಗುತ್ತಿರುವ ಟೀಂ ಇಂಡಿಯಾಗೆ ಬಿಗ್ ಶಾಕ್..! ಕೊನೆಯ ಪಂದ್ಯದಿಂದ ಸ್ಟಾರ್ ಆಲ್ರೌಂಡರ್ ಔಟ್

ಎಲ್ಲಾ ತಂಡಗಳು ಸೆಪ್ಟೆಂಬರ್ 27ರ ಅಂತ್ಯದ ವೇಳೆಗೆ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ತಮ್ಮ ಅಂತಿಮ 15 ಆಟಗಾರರ ಪಟ್ಟಿಯನ್ನು ಪ್ರಕಟಿಸಬೇಕಿದೆ. ಸೆಪ್ಟೆಂಬರ್ 27ರಂದೇ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮೂರನೇ ಪಂದ್ಯವನ್ನಾಡಲಿದ್ದು, ಆಯ್ಕೆ ಸಮಿತಿ ಯಾವ ನಿರ್ಧಾರವನ್ನು ಕೈಗೊಳ್ಳಲಿದೆ ಎನ್ನುವ ಕುತೂಹಲ ಜೋರಾಗಿದೆ.

Huge blow for India All rounder Axar Patel ruled out of Rajkot ODI kvn
Author
First Published Sep 25, 2023, 1:38 PM IST

ಮುಂಬೈ(ಸೆ.25): ಕೆ ಎಲ್ ರಾಹುಲ್ ನೇತೃತ್ವದ ಟೀಂ ಇಂಡಿಯಾ, ಬಲಿಷ್ಠ ಆಸ್ಟ್ರೇಲಿಯಾ ಎದುರು ಎರಡನೇ ಏಕದಿನ ಪಂದ್ಯದಲ್ಲಿ ಡೆಕ್ವರ್ಥ್ ಲೂಯಿಸ್ ನಿಯಮದನ್ವಯ 99 ರನ್ ಅಂತರದ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ಸರಣಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹೀಗಿರುವಾಗಲೇ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಟಾರ್ ಆಲ್ರೌಂಡರ್ ಅಕ್ಷರ್ ಪಟೇಲ್, ಆಸ್ಟ್ರೇಲಿಯಾ ಎದುರಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಿಂದಲೂ ಹೊರಬಿದ್ದಿದ್ದಾರೆ.

ಎಡ ತೊಡೆಸಂದಿನ ಸ್ನಾಯು ಸೆಳೆತಕ್ಕೆ ಒಳಗಾಗಿರುವ ಅಕ್ಷರ್ ಪಟೇಲ್ ಅವರನ್ನು, ಆಸ್ಟ್ರೇಲಿಯಾ ಎದುರಿನ ಮೊದಲೆರಡು ಪಂದ್ಯಗಳಿಂದ ಕೈಬಿಡಲಾಗಿತ್ತು. ಆದರೆ ಮೂರನೇ ಪಂದ್ಯದ ವೇಳೆಗೆ ಸಂಪೂರ್ಣ ಚೇತರಿಸಿಕೊಂಡರೆ, ತಂಡದೊಳಗೆ ಕಣಕ್ಕಿಳಿಸಲು ಅಕ್ಷರ್ ಪಟೇಲ್‌ಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಅಕ್ಷರ್ ಪಟೇಲ್ ಸೆಪ್ಟೆಂಬರ್ 27ರಂದು ರಾಜ್‌ಕೋಚ್‌ನಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯಕ್ಕೆ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ತಂಡದಿಂದ ಹೊರಬಿದ್ದಿದ್ದಾರೆ. ಸದ್ಯ ಅಕ್ಷರ್ ಪಟೇಲ್, ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.

ಈ ಎರಡು ತಂಡಗಳಲ್ಲೊಂದು ತಂಡ ವಿಶ್ವಕಪ್ ಗೆಲ್ಲಲಿದೆ: ಅಚ್ಚರಿಯ ಭವಿಷ್ಯ ನುಡಿದ ಕುಮಾರ ಸಂಗಕ್ಕರ..!

ಇದೀಗ ಮೂರನೇ ಏಕದಿನ ಪಂದ್ಯಕ್ಕೂ ಅಕ್ಷರ್ ಪಟೇಲ್ ಅಲಭ್ಯರಾಗಿರುವುದು, ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳು ಮತ್ತಷ್ಟು ದಟ್ಟವಾಗತೊಡಗಿದೆ. ಆಸ್ಟ್ರೇಲಿಯಾ ಎದುರಿನ ಮೊದಲೆರಡು ಪಂದ್ಯಗಳಲ್ಲಿ ಆರ್ ಅಶ್ವಿನ್ ಶಿಸ್ತುಬದ್ದ ದಾಳಿಯ ಮೂಲಕ ಗಮನ ಸೆಳೆದಿದ್ದಾರೆ. ಮೊದಲ ಪಂದ್ಯದಲ್ಲಿ 4.7ರ ಎಕಾನಮಿಯಲ್ಲಿ ರನ್ ನೀಡಿ ಒಂದು ವಿಕೆಟ್ ಕಬಳಿಸಿದರೆ, ಎರಡನೇ ಏಕದಿನ ಪಂದ್ಯದಲ್ಲಿ ಪ್ರಮುಖ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಇನ್ನು ಬಿಸಿಸಿಐ ಮೂಲಗಳ ಪ್ರಕಾರ, ಒಂದು ವೇಳೆ ವಿಶ್ವಕಪ್ ಟೂರ್ನಿಗೂ ಮುನ್ನ ಅಕ್ಷರ್ ಪಟೇಲ್ ಸಂಪೂರ್ಣ ಫಿಟ್‌ ಆದರೆ, ಅಶ್ವಿನ್ ಹಿಂದಿಕ್ಕಿ ಅಕ್ಷರ್ ಪಟೇಲ್ ಭಾರತ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

ಎಲ್ಲಾ ತಂಡಗಳು ಸೆಪ್ಟೆಂಬರ್ 27ರ ಅಂತ್ಯದ ವೇಳೆಗೆ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ತಮ್ಮ ಅಂತಿಮ 15 ಆಟಗಾರರ ಪಟ್ಟಿಯನ್ನು ಪ್ರಕಟಿಸಬೇಕಿದೆ. ಸೆಪ್ಟೆಂಬರ್ 27ರಂದೇ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮೂರನೇ ಪಂದ್ಯವನ್ನಾಡಲಿದ್ದು, ಆಯ್ಕೆ ಸಮಿತಿ ಯಾವ ನಿರ್ಧಾರವನ್ನು ಕೈಗೊಳ್ಳಲಿದೆ ಎನ್ನುವ ಕುತೂಹಲ ಜೋರಾಗಿದೆ.

6,6,6,6..! ಸೂರ್ಯನ ಸಿಕ್ಸರ್ ಆರ್ಭಟಕ್ಕೆ ಕಾಂಗರೂ ಪಡೆ ಕಂಗಾಲು..! ಇಲ್ಲಿದೆ ಮತ್ತೆ ಮತ್ತೆ ನೋಡಬೇಕೆನಿಸುವ ಓವರ್

2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಂದು ಆರಂಭವಾಗಲಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಇನ್ನು ಟೂರ್ನಿಗೆ ಆತಿಥ್ಯ ವಹಿಸಿರುವ ಭಾರತ ತಂಡವು ಅಕ್ಟೋಬರ್ 08ರಂದು ಚೆನ್ನೈನ ಚೆಪಾಕ್ ಮೈದಾನದಲ್ಲಿ 5 ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

ವಿಶ್ವಕಪ್ ಟೂರ್ನಿಗೆ ಭಾರತ ತಂಡ ಹೀಗಿದೆ ನೋಡಿ:

ರೋಹಿತ್‌ ಶರ್ಮಾ(ನಾಯಕ), ಹಾರ್ದಿಕ್‌ ಪಾಂಡ್ಯ(ಉಪನಾಯಕ), ಶುಭ್‌ಮನ್ ಗಿಲ್‌, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ ಎಲ್ ರಾಹುಲ್‌(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್‌ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್‌, ಕುಲ್ದೀಪ್‌ ಯಾದವ್, ಮೊಹಮ್ಮದ್ ಶಮಿ, ಅಕ್ಷರ್‌ ಪಟೇಲ್, ಇಶಾನ್ ಕಿಶನ್‌, ಸೂರ್ಯಕುಮಾರ್ ಯಾದವ್.

Follow Us:
Download App:
  • android
  • ios