ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಕೆ ಎಲ್ ರಾಹುಲ್ ಇಬ್ಬರೂ ಗಾಯದ ಸಮಸ್ಯೆಯಿಂದಾಗಿ ಇಂಗ್ಲೆಂಡ್ ಎದುರಿನ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯವು ಫೆಬ್ರವರಿ 02ರಿಂದ ವೈಜಾಗ್‌ನಲ್ಲಿ ಆರಂಭವಾಗಲಿದೆ.
ಹೈದರಾಬಾದ್(ಜ.29): ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಆಘಾತಕಾರಿ ಸೋಲು ಅನುಭವಿಸಿದೆ. ಈ ಸೋಲಿನ ಶಾಕ್‌ನಿಂದ ಹೊರಬರುವ ಮುನ್ನವೇ ಭಾರತಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು, ತಂಡದ ಇಬ್ಬರು ಸ್ಟಾರ್ ಆಟಗಾರರು ಇಂಗ್ಲೆಂಡ್ ಎದುರಿನ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ.
ಹೌದು, ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಕೆ ಎಲ್ ರಾಹುಲ್ ಇಬ್ಬರೂ ಗಾಯದ ಸಮಸ್ಯೆಯಿಂದಾಗಿ ಇಂಗ್ಲೆಂಡ್ ಎದುರಿನ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯವು ಫೆಬ್ರವರಿ 02ರಿಂದ ವೈಜಾಗ್‌ನಲ್ಲಿ ಆರಂಭವಾಗಲಿದೆ.
ಟೊಮ್ ಬೌಲಿಂಗ್‌ಗೆ ಭಾರತ ಠುಸ್, ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲು!
"ರವೀಂದ್ರ ಜಡೇಜಾ, ಇಂಗ್ಲೆಂಡ್ ಎದುರು ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ವೇಳೆಯಲ್ಲಿ ಸ್ನಾಯುಸೆಳೆತಕ್ಕೆ ಒಳಗಾಗಿದ್ದರು. ಇನ್ನೊಂದೆಡೆ ಕೆ ಎಲ್ ರಾಹುಲ್ ಬಲ ಪಕ್ಕೆಲುಬಿನ ನೋವಿನಿಂದ ಬಳಲುತ್ತಿದ್ದಾರೆ ಎಂದು ಬಿಸಿಸಿಐ ಹೊರಡಿಸಿದ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
"ಬಿಸಿಸಿಐ ವೈದ್ಯಕೀಯ ತಂಡವು ಈ ಇಬ್ಬರು ಕ್ರಿಕೆಟಿಗರ ಆರೋಗ್ಯದ ಮೇಲೆ ನಿಗಾಯಿಟ್ಟಿದ್ದು, ಭಾರತ ತಂಡದ ಆಯ್ಕೆ ಸಮಿತಿಯು ಸರ್ಫರಾಜ್ ಖಾನ್, ಸೌರಭ್ ಕುಮಾರ್ ಹಾಗೂ ವಾಷಿಂಗ್ಟನ್ ಸುಂದರ್ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಂಡಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಮಗ ಟೀಂ ಇಂಡಿಯಾದಲ್ಲಿ ಮಿಂಚುತ್ತಿದ್ದರೂ ಅಪ್ಪ ಈಗಲೂ ಸಿಲಿಂಡರ್ ಡಿಸ್ಟ್ರಿಬ್ಯೂಟ್ ಮಾಡ್ತಿದ್ದಾರೆ..! ವಿಡಿಯೋ ವೈರಲ್
ಇಂಗ್ಲೆಂಡ್‌ಗೆ ತವರಲ್ಲೇ ತಲೆಬಾಗಿದ ಟೀಂ ಇಂಡಿಯಾ
ತವರಿನ ಪಿಚ್‌ನ ಲಾಭ, ಸ್ಪಿನ್ ಅಸ್ತ್ರ, ತವರಿನ ಸತತ ಗೆಲುವಿನ ದಾಖಲೆ. ಇದ್ಯಾವುದೂ ಈ ಬಾರಿ ಟೀಂ ಇಂಡಿಯಾದ ಕೈ ಹಿಡಿಯಲಿಲ್ಲ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು 5-0 ಅಂತರದಲ್ಲಿ ಗೆಲ್ಲಬಹುದು ಎಂದೇ ವಿಶ್ಲೇಷಿಸಲಾಗಿದ್ದರೂ, ಭಾರತಕ್ಕೆ ಆರಂಭಿಕ ಪಂದ್ಯದಲ್ಲೇ ಸೋಲಿನ ಆಘಾತ ಎದುರಾಗಿದೆ. ರೋಹಿತ್ ಶರ್ಮಾ ನಾಯಕತ್ವದ ಭಾರತ ಭಾನುವಾರ ಮೊದಲ ಟೆಸ್ಟ್‌ನಲ್ಲಿ 28 ರನ್ ಸೋಲು ಕಂಡಿದ್ದು, ಸರಣಿಯಲ್ಲಿ 0-1 ಹಿನ್ನಡೆ ಸಾಧಿಸಿದೆ.
ಮೊದಲ ಇನ್ನಿಂಗ್ಸ್‌ನಲ್ಲಿ 190 ರನ್ ಹಿನ್ನಡೆ ಅನುಭವಿದ್ದ ಇಂಗ್ಲೆಂಡ್ 2ನೇ ಇನ್ನಿಂಗ್ಸ್‌ನಲ್ಲಿ ಕಲೆಹಾಕಿದ್ದು ಬರೋಬ್ಬರಿ 420 ರನ್. ಭಾರತದ ಸಿಕ್ಕಿದ್ದು 231 ರನ್ ಗುರಿ. ಆದರೆ ತೀವ್ರ ಬ್ಯಾಟಿಂಗ್ ವೈಫಲ್ಯಕ್ಕೊಳಗಾದ ಭಾರತ 202 ರನ್‌ಗೆ ಗಂಟುಮೂಟೆ ಕಟ್ಟಿತು.
ವಿಕೆಟ್ ನಷ್ಟವಿಲ್ಲದೆ 42 ರನ್ ಗಳಿಸಿದ್ದ ಭಾರತ ಬಳಿಕ ನಾಟಕೀಯ ಕುಸಿತಕ್ಕೊಳಗಾಯಿತು. ಚೊಚ್ಚಲ ಪಂದ್ಯವಾಡುತ್ತಿರುವ ಟಾಮ್ ಹಾರ್ಟ್ಲಿ ಸ್ಪಿನ್ ದಾಳಿ ಮುಂದೆ ತತ್ತರಿಸಿದ ಭಾರತೀಯ ಬ್ಯಾಟರ್ಸ್ ಪೆವಿಲಿಯನ್ ಪರೇಡ್ ನಡೆಸಿದರು. ರೋಹಿತ್ ಗಳಿಸಿದ 39 ರನ್ ತಂಡದ ಪರ ದಾಖಲಾದ ವೈಯಕ್ತಿಕ ಗರಿಷ್ಠ ಮೊತ್ತ. ಕೆ.ಎಲ್.ರಾಹುಲ್ ಕೊಡುಗೆ 22 ರನ್. 8ನೇ ವಿಕೆಟ್‌ಗೆ ಆರ್.ಅಶ್ವಿನ್(28) ಹಾಗೂ ಶ್ರೀಕರ್ ಭರತ್(28) ಹೋರಾಟದ 57 ರನ್ ಜೊತೆಯಾಟವಾಡಿದರೂ ತಂಡವನ್ನು ಗೆಲ್ಲಲು ಇಂಗ್ಲೆಂಡ್ ಬಿಡಲಿಲ್ಲ. ಹಾರ್ಟ್ಲಿ 62 ರನ್ ನೀಡಿ 7 ವಿಕೆಟ್ ಕಬಳಿಸಿದರು.
ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಹೀಗಿದೆ ನೋಡಿ:
ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್ ಗಿಲ್, ಯಶಸ್ವಿ ಜೈಸ್ವಾಲ್, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ಕೆ ಎಸ್ ಭರತ್ (ವಿ.ಕೀ), ಧ್ರುವ್ ಜುರೆಲ್ (ವಿ.ಕೀ), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.
