ಆಸೀಸ್ ಎದುರಿನ ಪರ್ತ್‌ ಟೆಸ್ಟ್‌ಗೆ ಕೆ ಎಲ್ ರಾಹುಲ್ ಫಿಟ್, ರೋಹಿತ್ ಶರ್ಮಾ ಔಟ್!

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಕನ್ನಡಿಗ ಕೆ ಎಲ್ ರಾಹುಲ್ ಸಂಪೂರ್ಣ ಫಿಟ್ ಆಗಿದ್ದಾರೆ. ಆದರೆ ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. 

Huge Boost for Team India as KL Rahul returns to bat in Sunday training ready for Perth Test kvn

ಪರ್ತ್‌: ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಮಹತ್ವದ ಟೆಸ್ಟ್‌ ಸರಣಿಗೂ ಮುನ್ನ ಟೀಂ ಇಂಡಿಯಾಕ್ಕೆ ಕೊಂಚ ರಿಲೀಫ್‌ ಸಿಕ್ಕಿದೆ. ಅಭ್ಯಾಸದ ವೇಳೆ ಮೊಣಕೈ ಗಾಯಕ್ಕೆ ತುತ್ತಾಗಿದ್ದ ಕರ್ನಾಟಕದ ಕೆ.ಎಲ್‌.ರಾಹುಲ್‌ ಚೇತರಿಸಿಕೊಂಡಿದ್ದು, ನ.22ರಿಂದ ಪರ್ತ್‌ ಕ್ರೀಡಾಂಗಣದಲ್ಲಿ ಆರಂಭಗೊಳ್ಳಲಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆಡಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ನಾಯಕ ರೋಹಿತ್‌ ಶರ್ಮಾ ಈ ಟೆಸ್ಟ್‌ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಶುಕ್ರವಾರ ನೆಟ್ಸ್‌ ಅಭ್ಯಾಸದ ವೇಳೆ ಪ್ರಸಿದ್ಧ್‌ ಕೃಷ್ಣ ಎಸೆದ ಚೆಂಡು ರಾಹುಲ್‌ ಕೈಗೆ ಬಡಿದಿತ್ತು. ನೋವಿನಿಂದ ಚೀರಾಡಿದ ಅವರನ್ನು ತಕ್ಷಣ ಬಿಸಿಸಿಐ ವೈದ್ಯಕೀಯ ಸಿಬ್ಬಂದಿ ಉಪಚರಿಸಿದರೂ, ನೋವು ಕಡಿಮೆಯಾಗದ ಕಾರಣ ಮೈದಾನ ತೊರೆದಿದ್ದರು. 2 ದಿನಗಳ ಕಾಲ ಅವರ ಗಾಯದ ಪ್ರಮಾಣದ ಬಗ್ಗೆ ಬಿಸಿಸಿಐ ಯಾವುದೇ ಮಾಹಿತಿ ಬಹಿರಂಗಪಡಿಸಿರಲಿಲ್ಲ. ಆದರೆ ಭಾನುವಾರ ಅವರು ಮತ್ತೆ ಅಭ್ಯಾಸಕ್ಕೆ ಆರಂಭಿಸಿದ್ದಾರೆ. ಅವರು ಸಂಪೂರ್ಣ ಪಿಟ್‌ ಇದ್ದಂತೆ ಕಂಡುಬಂದಿದ್ದು, ರೋಹಿತ್‌ ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರ ಜೊತೆ ಯಶಸ್ವಿ ಜೈಸ್ವಾಲ್‌ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ. ಶುಭ್‌ಮನ್‌ ಗಿಲ್‌ ಈಗಾಗಲೇ ಗಾಯದ ಕಾರಣಕ್ಕೆ ಮೊದಲ ಟೆಸ್ಟ್‌ನಿಂದ ಹೊರಬಿದ್ದಿದ್ದಿದ್ದಾರೆ. ಈ ನಡುವೆ ರಾಹುಲ್‌ ಚೇತರಿಸಿಕೊಂಡಿರುವುದರಿಂದ ತಂಡ ದೊಡ್ಡ ಸಂಕಷ್ಟದಿಂದ ಪಾರಾಗಿದೆ.

ಐಪಿಎಲ್ ಹರಾಜಿನಲ್ಲಿ ಈ 4 ಫಾರಿನ್ ಆಟಗಾರರನ್ನು ಖರೀದಿಸಿದ್ರೆ, ಈ ಸಲ ಕಪ್ ಆರ್‌ಸಿಬಿಯದ್ದೇ!

ಪಡಿಕ್ಕಲ್‌ಗೆ ಮಣೆ: ತಂಡದಲ್ಲಿ ಗಾಯಾಳುಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತಾರಾ ಬ್ಯಾಟರ್‌, ಕರ್ನಾಟಕದ ದೇವದತ್ ಪಡಿಕ್ಕಲ್‌ರನ್ನು ಮೀಸಲು ಆಟಗಾರನಾಗಿ ಭಾರತ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಪಡಿಕ್ಕಲ್‌ ಈಗಾಗಲೇ ಆಸ್ಟ್ರೇಲಿಯಾದಲ್ಲಿದ್ದಾರೆ. ಅವರು ‘ಎ’ ತಂಡದ ಪರ ಉತ್ತಮ ಪ್ರದರ್ಶನ ನೀಡಿದ್ದು, ನೆಟ್ಸ್‌ನಲ್ಲೂ ಬೂಮ್ರಾ ಸೇರಿದಂತೆ ವೇಗಿಗಳನ್ನು ಚೆನ್ನಾಗಿ ಎದುರಿಸಿದ್ದಾರೆ. ಹೀಗಾಗಿ ಅವರನ್ನು ಮೀಸಲು ಆಟಗಾರನಾಗಿ ಆಸ್ಟ್ರೇಲಿಯಾದಲ್ಲೇ ಉಳಿಸಿಕೊಳ್ಳಲಾಗಿದೆ. 24 ವರ್ಷದ ಪಡಿಕ್ಕಲ್‌ ಮಾರ್ಚ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಟೆಸ್ಟ್ ಮೂಲಕ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ್ದರು.

ಮೂವರು ವೇಗಿಗಳಾದ ನವ್‌ದೀಪ್‌ ಸೈನಿ, ಖಲೀಲ್‌ ಅಹ್ಮದ್‌ ಹಾಗೂ ಮುಕೇಶ್‌ ಕುಮಾರು ಮೀಸಲು ಆಟಗಾರರಾಗಿ ತಂಡದ ಜೊತೆಗಿದ್ದಾರೆ.

ಐಪಿಎಲ್ ಮೆಗಾ ಹರಾಜಿನಲ್ಲಿ ಈ ಬಿಗ್ ಸ್ಟಾರ್ಸ್‌ ಹೆಸರು ನಾಪತ್ತೆ! ಈ ಪಟ್ಟಿಯಲ್ಲಿದ್ದಾರೆ ಏಕೈಕ RCB ಆಟಗಾರ

ಆಲ್ರೌಂಡರ್‌ ನಿತೀಶ್‌  ಪಾದಾರ್ಪಣೆ ಸಾಧ್ಯತೆ

ಯುವ ಆಲ್ರೌಂಡರ್‌ ನಿತೀಶ್‌ ರೆಡ್ಡಿ ಮೊದಲ ಪಂದ್ಯದ ಮೂಲಕ ಟೆಸ್ಟ್‌ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. 21 ವರ್ಷದ ನಿತೀಶ್‌ ಸದ್ಯ ತಂಡದಲ್ಲಿರುವ ಏಕೈಕ ವೇಗದ ಬೌಲಿಂಗ್‌ ಆಲ್ರೌಂಡರ್‌. ಅವರು 4ನೇ ವೇಗಿಯಾಗಿ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಬೂಮ್ರಾ ಜೊತೆ ಸಿರಾಜ್‌, ಆಕಾಶ್‌ದೀಪ್‌, ಪ್ರಸಿದ್ಧ್‌ ಕೃಷ್ಣ ಹಾಗೂ ಹರ್ಷಿತ್‌ ರಾಣಾ ತಂಡದಲ್ಲಿದ್ದಾರೆ. ಈ ಪೈಕಿ ಮೂವರನ್ನು ಆಡಿಸಿ, 4ನೇ ವೇಗಿಯಾಗಿ ನಿತೀಶ್‌ರನ್ನು ಆಡಿಸಲು ಬಿಸಿಸಿಐ ಚಿಂತನೆ ನಡೆಸುತ್ತಿದೆ. ನಿತೀಶ್‌ 21 ಪ್ರಥಮ ದರ್ಜೆ ಪಂದ್ಯಗಳನ್ನಾಡಿದ್ದು, 1 ಶತಕ, 2 ಅರ್ಧಶತಕ ಬಾರಿಸಿ, 56 ವಿಕೆಟ್‌ ಕಬಳಿಸಿದ್ದಾರೆ. ಐಪಿಎಲ್‌ನ ಸನ್‌ರೈಸರ್ಸ್‌ ಪರ ಮಿಂಚಿದ್ದಾರೆ.

Latest Videos
Follow Us:
Download App:
  • android
  • ios