ಇಲ್ಲಿನ ಶ್ರೀ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ಸ್ಪೋಟಕ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ 11.5 ಓವರ್‌ನಲ್ಲಿ ಜಾಕ್ ಕ್ರಾಲಿ ಹಾಗೂ ಬೆನ್ ಡಕೆಟ್ ಜೋಡಿ 55 ರನ್‌ಗಳ ಜತೆಯಾಟವಾಡಿತು.

ಹೈದರಾಬಾದ್(ಜ.25): ಟೀಂ ಇಂಡಿಯಾ ಸ್ಪಿನ್ ಜಾಲದ ಮುಂದೆ ಇಂಗ್ಲೆಂಡ್ ಬಜ್‌ಬಾಲ್ ಆಟ ನಡೆಯಲಿಲ್ಲ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಕೇವಲ 246 ರನ್‌ಗಳಿಗೆ ಸರ್ವಪತನ ಕಂಡಿದೆ. ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದರೆ, ಬುಮ್ರಾ ಎರಡು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.

ಇಲ್ಲಿನ ಶ್ರೀ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ಸ್ಪೋಟಕ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ 11.5 ಓವರ್‌ನಲ್ಲಿ ಜಾಕ್ ಕ್ರಾಲಿ ಹಾಗೂ ಬೆನ್ ಡಕೆಟ್ ಜೋಡಿ 55 ರನ್‌ಗಳ ಜತೆಯಾಟವಾಡಿತು. ಈ ಇಬ್ಬರನ್ನು ಬಲಿ ಪಡೆಯುವಲ್ಲಿ ಅನುಭವಿ ಆಫ್‌ಸ್ಪಿನ್ನರ್ ಅಶ್ವಿನ್ ಯಶಸ್ವಿಯಾದರು. ಕ್ರಾಲಿ 20 ರನ್ ಗಳಿಸಿದರೆ, ಡಕೆಟ್ 35 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಓಲಿ ಪೋಪ್ ಒಂದು ರನ್ ಗಳಿಸಿ ಜಡೇಜಾಗೆ ವಿಕೆಟ್ ಒಪ್ಪಿಸಿದರು

ಅಶ್ವಿನ್ ಜತೆ ಸೇರಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದ ರವಿಚಂದ್ರನ್ ಅಶ್ವಿನ್..!

ಇನ್ನು ಮಧ್ಯಮ ಕ್ರಮಾಂಕದಲ್ಲಿ ಜೋ ರೂಟ್ 29, ಜಾನಿ ಬೇರ್‌ಸ್ಟೋವ್ 37 ರನ್ ಗಳಿಸಿ ಪೆವಿಲಿಯನ್ ಸೇರಿದರು. ವಿಕೆಟ್ ಕೀಪರ್ ಬ್ಯಾಟರ್ ಬೆನ್ ಫೋಕ್ಸ್ 4 ರನ್ ಗಳಿಸಿ ಅಕ್ಷರ್ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು.

ನಾಯಕ ಸ್ಟೋಕ್ಸ್ ಏಕಾಂಗಿ ಹೋರಾಟ: ಇನ್ನು ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದರೂ, ಮತ್ತೊಂದು ತುದಿಯಲ್ಲಿ ದಿಟ್ಟ ಬ್ಯಾಟಿಂಗ್ ನಡೆಸಿದ ನಾಯಕ ಬೆನ್ ಸ್ಟೋಕ್ಸ್ 88 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 70 ರನ್ ಬಾರಿಸಿ ಕೊನೆಯವರಾಗಿ ವಿಕೆಟ್ ಒಪ್ಪಿಸಿದರು.