Asianet Suvarna News Asianet Suvarna News

IPL 2023: ಸನ್‌ರೈಸರ್ಸ್‌ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಭಾವನಾತ್ಮಕ ಸಂದೇಶ ರವಾನಿಸಿದ ಕೇನ್ ವಿಲಿಯಮ್ಸನ್‌..!

ಸನ್‌ರೈಸರ್ಸ್‌ ಹೈದರಾಬಾದ್ ತಂಡದಿಂದ ಕೇನ್ ವಿಲಿಯಮ್ಸನ್ ರಿಲೀಸ್
ಆರೆಂಜ್ ಆರ್ಮಿಯ ಬಗ್ಗೆ ಭಾವನಾತ್ಮಕ ಸಂದೇಶ ರವಾನಿಸಿದ ಕೂಲ್ ಕ್ಯಾಪ್ಟನ್
ಐಪಿಎಲ್ ಮಿನಿ ಹರಾಜು ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ನಡೆಯಲಿದೆ

Hyderabad will always be very special to me  Kane Williamson pens heartfelt post after SRH release kvn
Author
First Published Nov 16, 2022, 12:41 PM IST

ವೆಲ್ಲಿಂಗ್ಟನ್(ನ.16): ಬಹುನಿರೀಕ್ಷಿತ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಈಗಿನಿಂದಲೇ ಭರದ ಸಿದ್ದತೆಗಳು ಆರಂಭವಾಗಿವೆ. ಇದೀಗ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ತನ್ನ ನಾಯಕ ಕೇನ್‌ ವಿಲಿಯಮ್ಸನ್ ಅವರನ್ನು ತಂಡದಿಂದ ರಿಲೀಸ್ ಮಾಡಿದೆ. ಇದರ ಬೆನ್ನಲ್ಲೇ ಕೇನ್‌ ವಿಲಿಯಮ್ಸನ್‌, ಹೈದರಾಬಾದ್‌ ತಂಡದ ಬಗ್ಗೆ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ.

ಕೇನ್ ವಿಲಿಯಮ್ಸನ್, ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಆರಂಜ್ ಆರ್ಮಿಯ ಬಗ್ಗೆ ತಮ್ಮ ಕೃತಜ್ಞತೆ ಸಲ್ಲಿಸಿದ್ದಾರೆ. ತಮ್ಮ ಆಟಗಾರರು, ಸಹಾಯಕ ಸಿಬ್ಬಂದಿ, ಫ್ರಾಂಚೈಸಿಗೆ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಕೃತಜ್ಞತೆ ಸಲ್ಲಿಸಿದ್ದಾರೆ. 'ಸನ್‌ರೈಸರ್ಸ್‌ ಹೈದರಾಬಾದ್ ಫ್ರಾಂಚೈಸಿ, ತನ್ನ ತಂಡದ ಆಟಗಾರರು, ಆರೆಂಜ್ ಆರ್ಮಿಯ ಸಹಾಯಕ ಸಿಬ್ಬಂದಿಗಳು ನನ್ನ 8 ವರ್ಷಗಳ ಪಯಣವನ್ನು ಅದ್ಭುತವಾಗಿಸಿದ್ದಕ್ಕೆ ಧನ್ಯವಾದಗಳು. ಹೈದರಾಬಾದ್‌ನ ತಂಡ ಹಾಗೂ ಈ ನಗರಕ್ಕೆ ಎಂದೆಂದಿಗೂ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿರಲಿದೆ ಎಂದು ಕೂಲ್ ಕ್ಯಾಪ್ಟನ್ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

 
 
 
 
 
 
 
 
 
 
 
 
 
 
 

A post shared by Kane Williamson (@kane_s_w)

ಕಳೆದ ವರ್ಷ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು 14 ಕೋಟಿ ರುಪಾಯಿ ನೀಡಿ ಕೇನ್‌ ವಿಲಿಯಮ್ಸನ್‌ ಅವರನ್ನು ರೀಟೈನ್ ಮಾಡಿಕೊಂಡಿತ್ತು. ಕೇನ್ ವಿಲಿಯಮ್ಸನ್‌, ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ 76 ಪಂದ್ಯಗಳನ್ನಾಡಿ 36.22ರ ಬ್ಯಾಟಿಂಗ್ ಸರಾಸರಿಯಲ್ಲಿ 2101 ರನ್‌ ಬಾರಿಸಿದ್ದಾರೆ. ಕೇನ್ ವಿಲಿಯಮ್ಸನ್‌ 2015ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದರು. ಇನ್ನು 2018ರಲ್ಲಿ ವಿಲಿಯಮ್ಸನ್‌, ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿ ನೇಮಕವಾಗಿದ್ದರು. ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಡಿದ 76 ಪಂದ್ಯಗಳ ಪೈಕಿ 46 ಪಂದ್ಯಗಳಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದರು. ಡೇವಿಡ್ ವಾರ್ನರ್ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಕೇನ್ ವಿಲಿಯಮ್ಸನ್‌, 2018ರಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಫೈನಲ್‌ಗೆ ತಂಡವನ್ನು ಮುನ್ನಡೆಸಿದ್ದರು.

IPL Retention: ಕ್ಯಾಪ್ಟನ್‌ ಕೇನ್‌, ಮೂವರು ಕನ್ನಡಿಗರಿಗೆ ಸನ್‌ರೈಸರ್ಸ್‌ ಗೇಟ್‌ಪಾಸ್‌

2022ರ ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು 14 ಪಂದ್ಯಗಳನ್ನಾಡಿ ಕೇವಲ 6 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ 8ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇದೀಗ ಮಿನಿ ಹರಾಜಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಸಾಕಷ್ಟು ಅಳೆದು ತೂಗಿ ತನಗೆ ಬೇಕಾದ ಆಟಗಾರರನ್ನು ಖರೀದಿಸಲು ರಣತಂತ್ರ ರೂಪಿಸುತ್ತಿದೆ. 

2023ರ ಐಪಿಎಲ್ ಟೂರ್ನಿಗೂ ಮುನ್ನ ಡಿಸೆಂಬರ್ 23ರಂದು ಐಪಿಎಲ್‌ ಆಟಗಾರರ ಮಿನಿ ಹರಾಜು ಕೊಚ್ಚಿಯಲ್ಲಿ ನಡೆಯಲಿದ್ದು, ಸನ್‌ರೈಸರ್ಸ್‌ ಹೈದರಾಬಾದ್ ತಂಡವು ಇದೀಗ ಕೇನ್ ವಿಲಿಯಮ್ಸನ್, ನಿಕೋಲಸ್ ಪೂರನ್, ಸೇರಿದಂತೆ ಹಲವು ಆಟಗಾರರನ್ನು ರಿಲೀಸ್‌ ಮಾಡಿದ್ದು, ಮಿನಿ ಹರಾಜಿಗೂ ಮುನ್ನ ತನ್ನ ಪರ್ಸ್‌ನಲ್ಲಿ 42.25 ಕೋಟಿ ರುಪಾಯಿಗಳನ್ನು ಉಳಿಸಿಕೊಂಡಿದೆ.

ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ:

ಬಿಡುಗಡೆಯಾದ ಆಟಗಾರರು: ಕೇನ್ ವಿಲಿಯಮ್ಸನ್, ನಿಕೋಲಸ್ ಪೂರನ್, ಜಗದೀಶ ಸುಚಿತ್, ಪ್ರಿಯಮ್ ಗಾರ್ಗ್, ರವಿಕುಮಾರ್ ಸಮರ್ಥ್, ರೊಮಾರಿಯೋ ಶೆಫರ್ಡ್, ಸೌರಭ್ ದುಬೆ, ಸೀನ್ ಅಬಾಟ್, ಶಶಾಂಕ್ ಸಿಂಗ್, ಶ್ರೇಯಸ್ ಗೋಪಾಲ್, ಸುಶಾಂತ್ ಮಿಶ್ರಾ, ವಿಷ್ಣು ವಿನೋದ್.

ಟ್ರೇಡಿಂಗ್‌ ಮೂಲಕ ಆಟಗಾರರ ಆಯ್ಕೆ: ಯಾರೂ ಇಲ್ಲ

ತಂಡದಲ್ಲಿ ಇರುವ ಹಣ: 42.25 ಕೋಟಿ ರೂಪಾಯಿ
ವಿದೇಶಿ ಆಟಗಾರರ ಕೋಟಾ ಬಾಕಿ: 4

ಹಾಲಿ ತಂಡ: ಅಬ್ದುಲ್ ಸಮದ್, ಐಡೆನ್ ಮಾರ್ಕ್ರಾಮ್, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಫಜಲ್ಹಕ್ ಫಾರೂಕಿ, ಕಾರ್ತಿಕ್ ತ್ಯಾಗಿ, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್

Follow Us:
Download App:
  • android
  • ios