ದುಬೈ(ಮಾ.17); ಐಸಿಸಿ ಟಿ20 ರ‍್ಯಾಂಕಿಂಗ್ ಪಟ್ಟಿ ಪ್ರಕಟಗೊಂಡಿದೆ. ಇಂಗ್ಲೆಂಡ್ ವಿರುದ್ಧದ ಸತತ 2 ಅರ್ಧಶತಕ ದಾಖಲಿಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 5ನೇ ಸ್ಥಾನಕ್ಕೇರಿದ್ದಾರೆ. ಕಳಪೆ ಪ್ರದರ್ಶನದಿಂದ ಕೆಎಲ್ ರಾಹುಲ್ ರ‍್ಯಾಂಕಿಂಗ್ ಕುಸಿತ ಕಂಡಿದ್ದಾರೆ.  ಆದರೆ ಟೀಂ ಇಂಡಿಯಾದ ಇತರ ಯಾವ ಬ್ಯಾಟ್ಸ್‌ಮನ್ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ.

ಟೀಂ ಇಂಡಿಯಾಗೆ ಶಾಕ್; 3ನೇ ಟಿ20 ಪಂದ್ಯದಲ್ಲಿ ಮುಗ್ಗರಿಸಿದ ಕೊಹ್ಲಿ ಸೈನ್ಯ!

ಟಿ20 ರ‍್ಯಾಂಕಿಂಗ್ ಪಟ್ಟಿಯಲ್ಲಿ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಡಿಜೆ ಮಲನ್ ಮೊದಲ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್ ಆ್ಯರೋನ್ ಫಿಂಚ 2ನೇ ಸ್ಥಾನದಲ್ಲಿದ್ದಾರೆ. ಇನ್ನು ಕೆಎಲ್ ರಾಹುಲ್ 4ನೇ ಸ್ಥಾನದಲ್ಲಿದ್ದರೆ, 5ನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ವಿರಾಜಮಾನರಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಕೆಎಲ್ ರಾಹುಲ್ ಕಳಪೆ ಪ್ರದರ್ಶನದಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಇತ್ತ ವಿರಾಟ್ ಕೊಹ್ಲಿ ಮೊದಲ ಪಂದ್ಯದಲ್ಲಿ ಹಿನ್ನಡೆ ಅನುಭವಿಸಿದ್ದರು. ಆದರೆ 2ನೇ ಪಂದ್ಯದಲ್ಲಿ 73 ಹಾಗೂ 3ನೇ ಟಿ20 ಪಂದ್ಯದಲ್ಲಿ 77 ರನ್ ಸಿಡಿಸಿದ್ದರು.