ICC ನೂತನ ರ‍್ಯಾಂಕಿಂಗ್ ಪ್ರಕಟಿಸಿದೆ. ಏಕದಿನ ಬ್ಯಾಟಿಂಗ್, ಬೌಲಿಂಗ್ ಹಾಗೂ ಆಲ್ರೌಂಡರ್ ವಿಭಾಗದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಮಿಂಚಿದ್ದಾರೆ. ನೂತನ ರ‍್ಯಾಂಕಿಂಗ್ ವಿವರ ಇಲ್ಲಿದೆ.

ದುಬೈ(ನ.13): ಐಸಿಸಿ ನೂತನ ರ‍್ಯಾಂಕಿಂಗ್ ಪ್ರಕಟಗೊಂಡಿದೆ. ಆಗಸ್ಟ್ ತಿಂಗಳಿನಿಂದ ಏಕದಿನ ಕ್ರಿಕೆಟ್‌ನಲ್ಲಿ ಕಾಣಿಸಿಕೊಳ್ಳದಿದ್ದರೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ವೇಗಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನ ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ICC ಟಿ20 ರ‍್ಯಾಂಕಿಂಗ್ ಪ್ರಕಟ: ಹ್ಯಾಟ್ರಿಕ್ ವೀರ ದೀಪಕ್ ಚಹರ್’ಗೆ ಬಂಪರ್..!

ವೆಸ್ಟ್ ಇಂಡೀಸ್ ವಿರುದ್ದದ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಸೆಂಚುರಿ ಸಿಡಿಸಿದ ವಿರಾಟ್ ಕೊಹ್ಲಿ ಭಾರತಕ್ಕೆ 2-0 ಅಂತರದಲ್ಲಿ ಸರಣಿ ಗೆಲ್ಲಿಸಿಕೊಟ್ಟಿದ್ದರು. ಸರಣಿ ಶ್ರೇಷ್ಠ ಪ್ರಶಸ್ತಿ ಕೂಡ ಪಡೆದಿದ್ದರು. ಈ ಸರಣಿ ಬಳಿಕ ಸೌತ್ ಆಫ್ರಿಕಾ ವಿರುದ್ದ ಟೆಸ್ಟ್ ಹಾಗೂ ಟಿ20 ಸರಣಿ ಆಡಿದ ಭಾರತ ಏಕದಿನ ಸರಣಿ ಆಡಿರಲಿಲ್ಲ. ಇದೀಗ ಹೊಸ ರ‍್ಯಾಂಕಿಂಗ್ ಪ್ರಕಟಗೊಂಡಿದ್ದು ಕೊಹ್ಲಿ ಹಾಗೂ ಬುಮ್ರಾ ಮೊದಲ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: ಭರ್ಜರಿ ಬ್ಯಾಟಿಂಗ್: ರ‍್ಯಾಂಕಿಂಗ್’ನಲ್ಲಿ ರೋಹಿತ್-ಕೊಹ್ಲಿ ಅಪರೂಪದ ದಾಖಲೆ

895 ಅಂಕ ಸಂಪಾದಿಸಿರುವ ವಿರಾಟ್ ಕೊಹ್ಲಿ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಉಪನಾಯಕ ರೋಹಿತ್ ಶರ್ಮಾ 863 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ. ಇವರಿಬ್ಬರನ್ನು ಹೊರತು ಪಡಿಸಿದರೆ, ಟಾಪ್ 10 ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ಯಾವ ಭಾರತೀಯರೂ ಕಾಣಿಸಿಕೊಂಡಿಲ್ಲ.

ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ 797 ಅಂಕ ಪಡಿಯೋ ಮೂಲಕ ಮೊದಲ ಸ್ಥಾನದಲ್ಲಿ ಮುಂದುವರಿದ್ದಾರೆ. 740 ಅಂಕ ಪಡೆದಿರುವ ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ 2ನೇ ಸ್ಥಾನದಲ್ಲಿದ್ದಾರೆ. ಆಲ್ರೌಂಡರ್ ವಿಭಾಗದಲ್ಲಿ ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ ಮೊದಲ ಸ್ಥಾನದಲ್ಲಿದ್ದೆರ, ವಿಶ್ರಾಂತಿಯಲಿರುವ ಹಾರ್ದಿಕ್ ಪಾಂಡ್ಯ 10ನೇ ಸ್ಥಾನ ಅಲಂಕರಿಸಿದ್ದಾರೆ.