ICC ಟೆಸ್ಟ್ ರ‍್ಯಾಂಕಿಂಗ್ ಪ್ರಕಟ; ಅಗ್ರಸ್ಥಾನ ಕಾಯ್ದುಕೊಂಡ ಕೊಹ್ಲಿ!
2019ರ ವರ್ಷಾಂತ್ಯದಲ್ಲಿ ಐಸಿಸಿ ಆಟಾಗಾರರ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದೆ. ಈ ವರ್ಷ ಅತ್ಯುತ್ತಮ ಪ್ರದರ್ಶನದ ಮೂಲಕ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದ ಕ್ರಿಕಟಿಗರ ಲಿಸ್ಟ್ ಇಲ್ಲಿದೆ.
ದುಬೈ(ಡಿ.24): ಐಸಿಸಿ ನೂತನ ಟೆಸ್ಟ್ ರ‍್ಯಾಂಕಿಂಗ್ ಪ್ರಕಟಿಸಿದೆ. 2019ರ ಅಂತ್ಯದಲ್ಲಿ ಐಸಿಸಿಯ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನ ಮುಂದುವರಿದಿದ್ದಾರೆ. ಈ ಮೂಲಕ 2019ನೇ ಕ್ರಿಕೆಟ್ ಕ್ಯಾಲೆಂಡರ್ ವರ್ಷವನ್ನು ನಂಬರ್ 1 ರ‍್ಯಾಂಕ್ ಮೂಲಕ ಅಂತ್ಯಗೊಳಿಸಿದ್ದಾರೆ. ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ 2ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಇದನ್ನೂ ಓದಿ: ICC ಏಕದಿನ ರ‍್ಯಾಂಕಿಂಗ್: ಅಗ್ರಸ್ಥಾನದಲ್ಲಿ ಕೊಹ್ಲಿ, ಬುಮ್ರಾ.
2019ರಲ್ಲಿ ವಿರಾಟ್ ಕೊಹ್ಲಿ 44 ಟೆಸ್ಟ್ ಪಂದ್ಯಗಳಿಂದ 2455 ರನ್ ಸಿಡಿಸಿದ್ದಾರೆ. ಕೊಹ್ಲಿ ಸರಾಸರಿ 65. ಈ ವರ್ಷದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ 136 ರನ್ ಸಿಡಿಸಿದ್ದರು. ಬಾಂಗ್ಲಾದೇಶ ವಿರುದ್ಧದ ಡೇ ಅಂಡ್ ನೈಟ್ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದರು. ಅತ್ಯುತ್ತಮ ಫಾರ್ಮ್ ಮುಂದುವರಿಸಿದ ಕೊಹ್ಲಿ ಅಗ್ರಸ್ಥಾನದಲ್ಲೇ ಮುಂದುವರಿದಿದ್ದಾರೆ.
ಇದನ್ನೂ ಓದಿ: ದಶಕದ ಏಕದಿನ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಧೋನಿಗೆ ನಾಯಕ ಪಟ್ಟ !..
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ 2 ಸೆಂಚುರಿ ಸಿಡಿಸಿದ ಪಾಕಿಸ್ತಾನ ಬ್ಯಾಟ್ಸ್‌ಮನ್ 6ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆಯನ್ನು ಹಿಂದಿಕ್ಕಿದ್ದಾರೆ. ರಹಾನೆ 6ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 3ನೇ ಸ್ಥಾನದಲ್ಲಿದ್ದರೆ, ಟೀಂ ಇಂಡಿಯಾದ ಚೇತೇಶ್ವರ್ ಪೂಜಾರ 4ನೇ ಸ್ಥಾನ ಅಲಂಕರಿಸಿದ್ದಾರೆ. ಟಾಪ್ 10 ಪಟ್ಟಿಯಲ್ಲಿ ಟೀಂ ಇಂಡಿಯಾದ ಕೊಹ್ಲಿ, ಪೂಜಾರಾ ಹಾಗೂ ರಹಾನೆ ಮಾತ್ರ ಕಾಣಿಸಿಕೊಂಡಿದ್ದಾರೆ.