ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ರಾವಲ್ಪಿಂಡಿಯಲ್ಲಿ ಮುಖಾಮುಖಿಯಾಗಲಿವೆ. ದಕ್ಷಿಣ ಆಫ್ರಿಕಾವು ಅಫ್ಘಾನಿಸ್ತಾನದ ವಿರುದ್ಧ ಗೆದ್ದರೆ, ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ಧ ಜಯ ಸಾಧಿಸಿದೆ. ಉಭಯ ತಂಡಗಳ ಬಲಿಷ್ಠ ಬ್ಯಾಟಿಂಗ್ ವಿಭಾಗದಿಂದಾಗಿ ರಾವಲ್ಪಿಂಡಿ ಪಿಚ್‌ನಲ್ಲಿ ದೊಡ್ಡ ಮೊತ್ತದ ನಿರೀಕ್ಷೆಯಿದೆ. ಪಂದ್ಯವು ಮಧ್ಯಾಹ್ನ 2.30ಕ್ಕೆ ಆರಂಭವಾಗಲಿದೆ. 

ರಾವಲ್ಪಿಂಡಿ: ಈ ಬಾರಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸತತ 2ನೇ ಗೆಲುವಿನ ನಿರೀಕ್ಷೆಯಲ್ಲಿರುವ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ಮಂಗಳವಾರ ಪರಸ್ಪರ ಮುಖಾಮುಖಿಯಾಗಲಿವೆ. ಪಂದ್ಯಕ್ಕೆ ರಾವಲ್ಪಿಂಡಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

ಚೊಚ್ಚಲ ಆವೃತ್ತಿಯ ಚಾಂಪಿಯನ್ ದ. ಆಫ್ರಿಕಾ ಆರಂಭಿಕ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಗೆದ್ದಿದೆ. ರಾನ್ ರಿಕೆಲ್ಟನ್ ಅಬ್ಬರದ ಶತಕ, ನಾಯಕ ತೆಂಬಾ ಬವುಮಾ, ಡಸೆನ್, ಮಾರ್ಕ್‌ಮ್ ಅರ್ಧಶತಕ ತಂಡಕ್ಕೆ ಗೆಲುವು ತಂದುಕೊಟ್ಟಿತ್ತು. ಬೌಲರ್‌ಗಳೂ ಮೊನಚು ದಾಳಿ ಸಂಘಟಿಸುತ್ತಿದ್ದು, ಆಸೀಸ್ ಬ್ಯಾಟರ್‌ಗ ಳನ್ನು ಹೇಗೆ ಕಟ್ಟಿಹಾಕುತ್ತಾರೆ ಎಂಬ ಕುತೂಹಲ ವಿದೆ. ಗಾಯದಿಂದಾಗಿ ಆರಂಭಿಕ ಪಂದ್ಯಕ್ಕೆ ಗೈರಾಗಿದ್ದ ಹೈನ್ರಿಚ್ ಕ್ಲಾಸೆನ್ ಈ ಪಂದ್ಯದಲ್ಲಿ ಆಡುವುದು ಇನ್ನೂ ಖಚಿತವಾಗಿಲ್ಲ.

ತಂಡ ಸೋಲುತ್ತಿರುವಾಗ ನಿನಗೆ ಈ ಹುಚ್ಚಾಟ ಬೇಕಿತ್ತಾ? ಪಾಕ್ ಬೌಲರ್‌ಗೆ ತಪರಾಕಿ ಕೊಟ್ಟ ವಾಸೀಂ ಅಕ್ರಂ!

ಮತ್ತೊಂದೆಡೆ ಆಸೀಸ್ ಟೂರ್ನಿಗೂ ಮುನ್ನ ಪ್ರಮುಖ ಆಟಗಾರರ ಗೈರಿನಿಂದ ಕುಗ್ಗಿ ಹೋಗಿತ್ತು. ಆದರೆ ಬಲಿಷ್ಠ ಇಂಗ್ಲೆಂಡ್ ವಿರುದ್ಧದ
ಗೆಲುವು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಕಳೆದ ಪಂದ್ಯದ ಶತಕವೀರ ಜೋಶ್ ಇಂಗ್ಲಿಸ್ ಜೊತೆ ಮ್ಯಾಥ್ಯೂ ಶಾರ್ಟ್, ಅನುಭವಿಗಳಾದ ಅಲೆಕ್ಸ್‌ ಕೇರಿ, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ನಸ್ ಲಬುಶೇನ್ ತಂಡಕ್ಕೆ ಮತ್ತೊಂದು ಗೆಲುವು ತಂದುಕೊಡುವ ಕಾತರದಲ್ಲಿದ್ದಾರೆ. ಆದರೆ ತಂಡದ ಅನನುಭವಿ ಬೌಲಿಂಗ್ ಪಡೆ ಸುಧಾರಿತ ಪ್ರದರ್ಶನ ನೀಡಬೇಕಾದ ಅಗತ್ಯವಿದೆ.

ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳು 351 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. ನೈಸ್‌ ರೋಡ್‌ನಂತಿರುವ ಪಾಕಿಸ್ತಾನ ಪಿಚ್‌ನಲ್ಲಿ ಆಸ್ಟ್ರೇಲಿಯಾ ಬ್ಯಾಟರ್‌ಗಳು ಕೂಡಾ ಮೈಚಳಿ ಬಿಟ್ಟು ಬ್ಯಾಟ್ ಬೀಸುವ ಮೂಲಕ ಇನ್ನು 15 ಎಸೆತ ಬಾಕಿ ಇರುವಂತೆಯೇ 5 ವಿಕೆಟ್ ಅಂತರದ ಸುಲಭ ಜಯ ದಾಖಲಿಸಿತ್ತು. ಇಂದು ಕೂಡ ಎರಡು ಬಲಿಷ್ಠ ಬ್ಯಾಟಿಂಗ್ ವಿಭಾಗ ಹೊಂದಿರುವ ತಂಡಗಳು ಮುಖಾಮುಖಿಯಾಗುತ್ತಿದ್ದು, ಬ್ಯಾಟಿಂಗ್ ಸ್ನೇಹಿ ರಾವಲ್ಪಿಂಡಿ ಪಿಚ್‌ನಲ್ಲಿ ತಂಡವೊಂದು 400+ ರನ್ ದಾಖಲಿಸಿದರೂ ಅಚ್ಚರಿಯಿಲ್ಲ ಎನ್ನುವಂತಹ ಮಾತುಗಳು ಕೇಳಿ ಬರುತ್ತಿವೆ. 

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಸೆಮಿಗೆ: ಪಾಕ್‌, ಬಾಂಗ್ಲಾ ಒಟ್ಟಿಗೇ ಮನೆಗೆ!

ಉಭಯ ತಂಡಗಳ ಸಂಭಾವ್ಯ ಆಟಗಾರರ ಪಟ್ಟಿ

ಆಸ್ಟ್ರೇಲಿಯಾ:
ಮ್ಯಾಥ್ಯೂ ಶಾರ್ಟ್, ಟ್ರ್ಯಾವಿಸ್ ಹೆಡ್, ಸ್ಟೀವ್ ಸ್ಮಿತ್(ನಾಯಕ), ಮಾರ್ನಸ್ ಲಬುಸೇನ್, ಜೋಶ್ ಇಂಗ್ಲಿಶ್(ವಿಕೆಟ್ ಕೀಪರ್), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ಡೌರಿಸ್, ನೇಥನ್ ಎಲ್ಲಿಸ್, ಆಡಂ ಜಂಪಾ, ಸ್ಪೆನ್ಸರ್ ಜಾನ್ಸನ್.

ದಕ್ಷಿಣ ಆಫ್ರಿಕಾ:
ರಿಯನ್ ರೆಕಲ್ಟನ್(ವಿಕೆಟ್ ಕೀಪರ್), ಟೋನಿ ಡೆ ಜೋರ್ಜಿ, ತೆಂಬಾ ಬವುಮಾ(ನಾಯಕ), ರಾಸ್ಸಿ ವ್ಯಾನ್ ಡರ್ ಡುಸೇನ್, ಏಯ್ಡನ್ ಮಾರ್ಕ್‌ರಮ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ವಿಯಾನ್ ಮುಲ್ಡರ್, ಕೇಶವ್ ಮಹರಾಜ್, ಕಗಿಸೋ ರಬಾಡ, ಲುಂಗಿ ಎಂಗಿಡಿ.

 ಪಂದ್ಯ ಆರಂಭ: ಮಧ್ಯಾಹ್ನ: 2.30