ದುಬೈನಲ್ಲಿ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಿದ್ದು, ಆಸ್ಟ್ರೇಲಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ. ಆಸ್ಟ್ರೇಲಿಯಾ ತಂಡದಲ್ಲಿ ಬದಲಾವಣೆಗಳಾಗಿವೆ. ಭಾರತವು ಯಾವುದೇ ಬದಲಾವಣೆಗಳಿಲ್ಲದೆ ಕಣಕ್ಕಿಳಿದಿದೆ. 2009ರ ನಂತರ ಚಾಂಪಿಯನ್ಸ್ ಟ್ರೋಫಿಯಲ್ಲಿ ಉಭಯ ತಂಡಗಳು ಮೊದಲ ಬಾರಿಗೆ ಸೆಣಸಾಡುತ್ತಿವೆ.
ದುಬೈ: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಿದೆ.
ನಿರೀಕ್ಷೆಯಂತೆಯೇ ಆಸ್ಟ್ರೇಲಿಯಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಮ್ಯಾಥ್ಯೂ ಶಾರ್ಟ್ ಹಾಗೂ ಸ್ಪೆನ್ಸರ್ ಜಾನ್ಸನ್ ಬದಲಿಗೆ ಕೂಪರ್ ಕಾನ್ಲಿ ಹಾಗೂ ಸಂಗಾ ಕೂಡಿಕೊಂಡಿದ್ದಾರೆ. ಇನ್ನು ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯಕ್ಕೂ ಕಣಕ್ಕಿಳಿದಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿರುವ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, 2023ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳಲು ರೆಡಿಯಾಗಿದೆ.
ಇಂಡಿಯಾ vs ಆಸ್ಟ್ರೇಲಿಯಾ: ಐಸಿಸಿ ನಾಕೌಟ್‌ನಲ್ಲಿ ಯಾರು ಹೆಚ್ಚು ಸ್ಟ್ರಾಂಗ್?
ಸತತ 14ನೇ ಬಾರಿ ಟಾಸ್ ಸೋತ ಭಾರತ:
ಭಾರತ ಕ್ರಿಕೆಟ್ ತಂಡವು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಬರೋಬ್ಬರಿ 14ನೇ ಬಾರಿ ಸತತವಾಗಿ ಟಾಸ್ ಸೋಲುವ ಮೂಲಕ ವಿಚಿತ್ರ ದಾಖಲೆಗೆ ಪಾತ್ರವಾಗಿದೆ. ಇದರಲ್ಲಿ ರೋಹಿತ್ ಶರ್ಮಾ 11 ಬಾರಿ ಟಾಸ್ ಸೋತಿದ್ದರೇ, ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆ ಎಲ್ ರಾಹುಲ್ 3 ಬಾರಿ ಟಾಸ್ ಸೋತಿದ್ದಾರೆ.
ಚಾಂಪಿಯನ್ಸ್ ಟ್ರೋಫಿ: 2009ರ ಬಳಿಕ ಮೊದಲ ಮುಖಾಮುಖಿ!
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಚಾಂಪಿಯನ್ಸ್ ಟ್ರೋಫಿಯಲ್ಲಿ 2009ರ ಬಳಿಕ ಮೊದಲ ಬಾರಿಗೆ ಮುಖಾಮುಖಿಯಾಗಲಿವೆ. ಈ ವರೆಗೂ ಉಭಯ ತಂಡಗಳ ನಡುವೆ ಚಾಂಪಿಯನ್ಸ್ ಟ್ರೋಫಿಯಲ್ಲಿ 4 ಪಂದ್ಯಗಳು ನಡೆದಿದ್ದು, 2ರಲ್ಲಿ ಭಾರತ, 1ರಲ್ಲಿ ಆಸೀಸ್ ಗೆದ್ದಿದೆ. 2009ರ ರ ಪಂದ್ಯ ಮಳೆಗೆ ಬಲಿಯಾಗಿತ್ತು.
ಆಸೀಸ್ ಹಣಿಯಲು ಭಾರತ ಸ್ಪಿನ್ ಮಂತ್ರ; ಸೇಡಿನ ಕದನಕ್ಕೆ ದುಬೈ ಸಜ್ಜು!
ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ:
ಭಾರತ
ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್
ಆಸ್ಟ್ರೇಲಿಯಾ:
ಕೂಪರ್ ಕಾನ್ಲೆ, ಟ್ರ್ಯಾವಿಸ್ ಹೆಡ್, ಸ್ಟೀವ್ ಸ್ಮಿತ್(ನಾಯಕ), ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಶ್(ವಿಕೆಟ್ ಕೀಪರ್), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ಡೌರಿಸ್, ನೇಥನ್ ಎಲ್ಲೀಸ್, ಆಡಂ ಜಂಪಾ, ತನ್ವೀರ್ ಸಂಘಾ
ಪಂದ್ಯ: ಮಧ್ಯಾಹ್ನ 2.30ಕ್ಕೆ (ಭಾರತೀಯ ಕಾಲಮಾನ)
ಪ್ರಸಾರ: ಸ್ಟಾರ್‌ಸ್ಟೋರ್ಟ್ಸ್, ಜಿಯೋಹಾಟ್‌ಸ್ಟಾರ್
