Breaking News: ವಿಶ್ವಕಪ್‌ ವೇಳಾಪಟ್ಟಿಯಲ್ಲಿ ಶೀಘ್ರ ಬದಲಾವಣೆ: ಜಯ್ ಶಾ

ವಿಶ್ವಕಪ್ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಯ ಸುಳಿವು ಕೊಟ್ಟ ಜಯ್ ಶಾ
3 ರಾಷ್ಟ್ರಗಳಿಂದ ಐಸಿಸಿಗೆ ಮನವಿ ಹಿನ್ನಲೆಯಲ್ಲಿ ಈ ನಿರ್ಧಾರ
ಏಕದಿನ ವಿಶ್ವಕಪ್ ಟೂರ್ನಿ ಅಕ್ಟೋಬರ್ 05ರಿಂದ ಆರಂಭ

ICC ODI World Cup schedule will undergo changes confirms BCCI secretary Jay Shah kvn

ನವದೆಹಲಿ: ಮೂರು ರಾಷ್ಟ್ರಗಳು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ(ಐಸಿಸಿ)ಗೆ ಏಕದಿನ ವಿಶ್ವಕಪ್‌ ವೇಳಾಪಟ್ಟಿಯಲ್ಲಿ ಕೆಲ ಬದಲಾವಣೆ ಮಾಡುವಂತೆ ಮನವಿ ಮಾಡಿದ್ದು, 3-4 ದಿನಗಳಲ್ಲಿ ಹೊಸ ವೇಳಾಪಟ್ಟಿ ಪ್ರಕಟಿಸುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಹೇಳಿದ್ದಾರೆ.

ಗುರುವಾರ ರಾಜ್ಯ ಕ್ರಿಕೆಟ್‌ ಸಂಸ್ಥೆಗಳ ಜೊತೆ ವಿಶ್ವಕಪ್‌ ಸಿದ್ಧತೆಯ ಅವಲೋಕನಕ್ಕಾಗಿ ನಡೆದ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಾ, ‘ಮೂರು ರಾಷ್ಟ್ರಗಳು ವೇಳಾಪಟ್ಟಿಯಲ್ಲಿ ಕೆಲ ಬದಲಾವಣೆ ಮಾಡುವಂತೆ ಐಸಿಸಿಗೆ ಮನವಿ ಸಲ್ಲಿಸಿವೆ. ಕೇವಲ ದಿನಾಂಕ ಹಾಗೂ ಸಮಯವನ್ನು ಬದಲಿಸಲಾಗುತ್ತದೆ. ಸ್ಥಳ ಬದಲಾವಣೆ ಮಾಡುವುದಿಲ್ಲ. ಕೆಲ ತಂಡಗಳಿಗೆ ಒಂದು ಪಂದ್ಯಕ್ಕೂ ಮತ್ತೊಂದು ಪಂದ್ಯಕ್ಕೂ 6 ದಿನಗಳ ಅಂತರವಿದೆ. ಅದನ್ನು 4-5 ದಿನಕ್ಕೆ ಇಳಿಸಲು ಪ್ರಯತ್ನಿಸುತ್ತಿದ್ದೇವೆ’ ಎಂದರು.

‘3-4 ದಿನಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ. ಐಸಿಸಿಯ ಜೊತೆ ಸಮಾಲೋಚನೆ ನಡೆಸಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಿದ್ದೇವೆ ’ ಎಂದು ಮಾಹಿತಿ ನೀಡಿದ ಶಾ, ಯಾವ ಕ್ರಿಕೆಟ್‌ ಬೋರ್ಡ್‌ಗಳು ಐಸಿಸಿಗೆ ಮನವಿ ಸಲ್ಲಿಸಿವೆ ಎನ್ನುವುದನ್ನು ಬಹಿರಂಗಗೊಳಿಸಲಿಲ್ಲ. ಮುಂಬರುವ ಅಕ್ಟೋಬರ್ 05ರಿಂದ ನವೆಂಬರ್ 19ರ ವರೆಗೆ ಭಾರತದಲ್ಲಿ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಜರುಗಲಿದೆ. ಇದೇ ಮೊದಲ ಬಾರಿಗೆ ಸಂಪೂರ್ಣ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸುತ್ತಿದೆ. ದೇಶದ 10 ಸ್ಟೇಡಿಯಂಗಳಲ್ಲಿ ಏಕದಿನ ವಿಶ್ವಕಪ್ ಟೂರ್ನಿ ಜರುಗಲಿದೆ.

Breaking: ಸ್ಪಿನ್ನರ್‌ಗಳ ದಾಳಿಗೆ ಇಸ್ಪೀಟ್‌ ಎಲೆಗಳಂತೆ ಉದುರಿದ ವೆಸ್ಟ್‌ ಇಂಡೀಸ್‌, ಭಾರತಕ್ಕೆ ಭರ್ಜರಿ ಜಯ!

46 ದಿನ, 48 ಪಂದ್ಯ: 46 ದಿನಗಳ ಕಾಲ ನಡೆಯಲಿರುವ ಟೂರ್ನಿಯಲ್ಲಿ 10 ತಂಡಗಳು ಪಾಲ್ಗೊಳ್ಳುತ್ತಿದ್ದು, ಫೈನಲ್‌ ಸೇರಿ ಒಟ್ಟು 48 ಪಂದ್ಯಗಳು ನಡೆಯಲಿವೆ. ಭಾರತ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಇಂಗ್ಲೆಂಡ್‌, ಬಾಂಗ್ಲಾದೇಶ, ನ್ಯೂಜಿಲೆಂಡ್‌, ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ. ಈ 8 ತಂಡಗಳು ನೇರ ಅರ್ಹತೆ ಗಿಟ್ಟಿಸಿಕೊಂಡಿದ್ದು, ಇನ್ನೆರಡು ತಂಡಗಳಾದ ಶ್ರೀಲಂಕಾ ಹಾಗೂ ನೆದರ್‌ಲೆಂಡ್ಸ್ ತಂಡಗಳು ಅರ್ಹತಾ ಸುತ್ತಿನ ಮೂಲಕ ಪ್ರಧಾನ ಸುತ್ತಿಗೆ ಲಗ್ಗೆಯಿಟ್ಟಿವೆ.  

ಮುಂಬೈ, ಕೋಲ್ಕತಾದಲ್ಲಿ ಸೆಮಿಫೈನಲ್‌ ಪಂದ್ಯಗಳು ನವೆಂಬರ್ 15 ಹಾಗೂ 16ರಂದು ಕ್ರಮವಾಗಿ ಮುಂಬೈನ ವಾಂಖೇಡೆ ಹಾಗೂ ಕೋಲ್ಕತಾ ಈಡನ್‌ ಗಾರ್ಡನ್ಸ್‌ನಲ್ಲಿ ನಡೆಯಲಿವೆ. ಒಂದು ವೇಳೆ ಪಾಕಿಸ್ತಾನ ಸೆಮೀಸ್‌ ಪ್ರವೇಶಿಸಿದರೆ ಆ ತಂಡದ ಪಂದ್ಯ ಕೋಲ್ಕತಾದಲ್ಲಿ ನಡೆಯಲಿದೆ. ಭಾರತ ಸೆಮೀಸ್‌ಗೇರಿದರೆ ಪಂದ್ಯಕ್ಕೆ ಮುಂಬೈ ಆತಿಥ್ಯ ವಹಿಸಲಿದೆ. ಒಂದು ವೇಳೆ ಭಾರತ-ಪಾಕಿಸ್ತಾನ ಸೆಮೀಸ್‌ನಲ್ಲಿ ಎದುರಾಗುವ ಸಂದರ್ಭ ಬಂದರೆ ಪಂದ್ಯ ಕೋಲ್ಕತಾದಲ್ಲಿ ನಡೆಯಲಿದೆ ಎಂದು ಐಸಿಸಿ ತಿಳಿಸಿದೆ. ನವೆಂಬರ್ 19ರಂದು ಫೈನಲ್‌ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ.

World Cup 2023: ಇಂಡೋ-ಪಾಕ್ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ..! ಹೊಸ ದಿನಾಂಕ ನಿಗದಿ?

ಪಾಕ್‌ ಪಂದ್ಯ ಮರುನಿಗದಿ ಬಗ್ಗೆ ಗುಟ್ಟು ಬಿಟ್ಟುಕೊಡದ ಶಾ!

ಭಾರತ-ಪಾಕಿಸ್ತಾನ ನಡುವೆ ಅ.15ರಂದು ನಡೆಯಬೇಕಿರುವ ಪಂದ್ಯವನ್ನು ಅ.14ಕ್ಕೆ ಮರುನಿಗದಿ ಮಾಡಲಾಗುತ್ತದೆ ಎನ್ನುವ ಸುದ್ದಿ ಹಬ್ಬಿದ್ದು, ಈ ಬಗ್ಗೆ ಶಾ ಗುಟ್ಟು ಬಿಟ್ಟುಕೊಟ್ಟಿಲ್ಲ. ಭಾರತ-ಪಾಕ್‌ ಪಂದ್ಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಾ ‘ಈಗಾಗಲೇ ಹೇಳಿದಂತೆ ಕೆಲ ರಾಷ್ಟ್ರಗಳು ವೇಳಾಪಟ್ಟಿ ಬದಲಾವಣೆಗೆ ಮನವಿ ಮಾಡಿವೆ. ಸದ್ಯದಲ್ಲೇ ನಿರ್ಧಾರ ಕೈಗೊಳ್ಳಲಿದ್ದೇವೆ’ ಎಂದಷ್ಟೇ ಹೇಳಿದರು.
 

Latest Videos
Follow Us:
Download App:
  • android
  • ios